IMG_20250724_100511_copy_1033x770_1

 

 

ಕಾಡಾನೆ ದಾಳಿಗೆ ಮಹಿಳೆ ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದೆ.

ಚಿಕ್ಕಮಗಳೂರು ಜಿಲ್ಲೆ ಎನ್ ಆರ್ ಪುರ ತಾಲೂಕಿನ ಬನ್ನೂರು ಗ್ರಾಮದಲ್ಲಿ ಬುಧವಾರ ರಾತ್ರಿ ಕಾಡಾನೆ ದಾಳಿಯಿಂದ ಕಾರ್ಮಿಕ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.

ಕಾರ್ಮಿಕ ಮಹಿಳೆ ಅನಿತಾ 25 (ವರ್ಷ) ಮೃತ ದುರ್ದೈವಿ.

ಎನ್.ಆರ್.ಪುರ ತಾಲೂಕಿನ ಬನ್ನೂರು ಬಳಿ ಈ ಘಟನೆ ನಡೆದಿದ್ದು ದಾವಣಗೆರೆ ಜಿಲ್ಲೆ ಹೊನ್ನಾಳಿ ಮೂಲದ ಕಾರ್ಮಿಕ ಮಹಿಳೆ ಸಾವನ್ನಪ್ಪಿದ್ದಾರೆ.

ಬನ್ನೂರಿನ ಕಾಫಿತೋಟದಲ್ಲಿ ಕೆಲಸ ಮಾಡಿಕೊಂಡು ಕೂಲಿ ಲೈನ್ ಮನೆಯಲ್ಲಿದ್ದ ಅನಿತಾ ಕಳೆದ ರಾತ್ರಿ 9 ಗಂಟೆಗೆ ಮನೆಯ ಸಮೀಪ ಆನೆ ದಾಳಿ ನಡೆಸಿದೆ ಎಂದು ತಿಳಿದುಬಂದಿದೆ.

ತೀವ್ರ ಗಾಯಗೊಂಡಿದ್ದ ಮಹಿಳೆಗೆ ಬಾಳೆಹೊನ್ನೂರು ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗೆ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿತ್ತು.

ಶಿವಮೊಗ್ಗ ಹೋಗುವಾಗ ಮಾರ್ಗ ಮಧ್ಯೆ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ರೊಚ್ಚಿಗೆದ್ದ ರೈತರಿಂದ ಹೆದ್ದಾರಿ ತಡೆದು ಪ್ರತಿಭಟನೆ

ಈ ಘಟನೆಯಿಂದ ಬಾಳೆಹೊನ್ನೂರ ಭಾಗದಲ್ಲಿ ರೈತರು ರೊಚ್ಚಿಗೆದ್ದಿದ್ದಾರೆ. ಬಾಳೆಹೊನ್ನೂರಿನಲ್ಲಿ ಹೆದ್ದಾರಿ ತಡೆದು ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಪ್ರತಿಭಟನೆ ನಿಯಂತ್ರಿಸಲು ಪೊಲೀಸರು ಹರಸಾಸಹ ಪಡುತ್ತಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಕಾಡಾನೆ ದಾಳಿಯಿಂದ ಜನರು ಸತತವಾಗಿ ಪ್ರಾಣ ಕಳೆದುಕೊಳ್ಳುತ್ತಿದ್ದಾರೆ. ಘಟನೆಯ ಬಗ್ಗೆ ಸ್ಥಳೀಯರು ತೀವ್ರ ಆಕ್ರೋಶ ಹೊರಹಾಕುತ್ತಿದ್ದಾರೆ. ಎನ್.ಆರ್.ಪುರ ತಾಲ್ಲೂಕು ಒಂದರಲ್ಲೇ ಕಳೆದ ಒಂದು ವರ್ಷದಲ್ಲಿ ಮೂರ್ನಾಲ್ಕು ಮಂದಿ ಕಾಡಾನೆ ದಾಳಿಯಿಂದ ಪ್ರಾಣ ಕಳೆದುಕೊಂಡಿದ್ದಾರೆ. ರೈತರು ಕಾರ್ಮಿಕರು ಜಮೀನಿಗೆ ತೆರಳಿ ಕೆಲಸ ಮಾಡಲು ಜನರು ರಸ್ತೆಯಲ್ಲಿ ಓಡಾಡಲು ಭಯಪಡುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ