ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗೃತ ಕ್ರಮವಾಗಿ ನಾಳೆ (26-07-2025) ಶನಿವಾರ ಜಿಲ್ಲೆಯ ಮಲೆನಾಡ 5 ತಾಲೂಕುಗಳಿಗೆ ಪೂರ್ಣರಜೆ ಹಾಗೂ ಒಂದು ತಾಲ್ಲೂಕಿನ ಆಯ್ದ ಹೋಬಳಿಗಳಿಗೆ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿದೆ.
ಜಿಲ್ಲೆಯ ಮೂಡಿಗೆರೆ, ಶೃಂಗೇರಿ, ಕೊಪ್ಪ, ಎನ್.ಆರ್.ಪುರ ಹಾಗೂ ಕಳಸ ತಾಲೂಕಿನಲ್ಲಿ ಸಂಪೂರ್ಣ ರಜೆ ಘೋಷಣೆ ಮಾಡಲಾಗಿದ್ದು, ಚಿಕ್ಕಮಗಳೂರು ತಾಲ್ಲೂಕಿನ ಆವತಿ, ಜಾಗರ, ಆಲ್ದೂರು, ವಸ್ತಾರೆ ಮತ್ತು ಖಾಂಡ್ಯ ಹೋಬಳಿ ವ್ಯಾಪ್ತಿಗೆ ಸೀಮಿತವಾಗಿ ರಜೆ ಘೋಷಣೆ ಮಾಡಲಾಗಿದೆ.
ನಾಳೆ ಶನಿವಾರ ಒಂದು ದಿನಕ್ಕೆ ಅನ್ವಯವಾಗುವಂತೆ ಮಾತ್ರ ರಜೆ ಘೋಷಿಸಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಮಾಡಿದ್ದಾರೆ.
ಮಲೆನಾಡು ಭಾಗದಲ್ಲಿ ಬಿರುಗಾಳಿ ಸಹಿತ ವ್ಯಾಪಕವಾಗಿ ಮಳೆಯಾಗುತ್ತಿದ್ದು, ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ. ಹಲವೆಡೆ ಮರಗಳು ರಸ್ತೆಗೆ ಉರುಳಿವೆ. ಮಳೆಯಿಂದ ಜನಜೀವನ ಅಸ್ತವ್ಯಸ್ತವಾಗಿದ್ದು, ಮುಂಜಾಗೃತ ಕ್ರಮವಾಗಿ ಚಿಕ್ಕಮಗಳೂರು ಜಿಲ್ಲಾಡಳಿತ ಅಂಗನವಾಡಿಯಿಂದ ಪ್ರೌಢಶಾಲೆವರೆಗೆ ರಜೆ ಘೋಷಣೆ ಮಾಡಿದೆ.




