IMG-20250727-WA0040_copy_883x400

 

 

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಕಳೆದ ಮೂರು ನಾಲ್ಕು ದಿನಗಳಿಂದ ವ್ಯಾಪಕವಾಗಿ ಮಳೆಯಾಗುತ್ತಿದೆ.

ಮಲೆನಾಡು ಭಾಗದಲ್ಲಿ ಮಳೆಯಿಂದಾಗಿ ಜನ ಜೀವನ ಅಸ್ತವ್ಯಸ್ತವಾಗಿದೆ. ಬಿರುಗಾಳಿ ಸಹಿತ ವ್ಯಾಪಕ ಮಳೆಯಾಗುತ್ತಿದ್ದು ಹಲವೆಡೆ ಸಂಚಾರ ವ್ಯತ್ಯಯವಾಗಿದೆ.

ಅನೇಕ ಕಡೆ ಗುಡ್ಡ ಕುಸಿತವಾಗಿದೆ. ಮರಗಳು ರಸ್ತೆಗೆ ಉರುಳಿ ಬಿದ್ದಿರುವ ಘಟನೆಗಳು ನಡೆದಿವೆ. ಹಲವು ಭಾಗಗಳಲ್ಲಿ ವಿದ್ಯುತ್ ಲೈನ್ ನ ಮೇಲೆ ಮರಗಳು ಉರುಳಿ ಬಿದ್ದಿದ್ದು ವಿದ್ಯುತ್ ವಿಷಯ ಉಂಟಾಗಿದ್ದು ಕಳೆದ ಮೂರು ನಾಲ್ಕು ದಿನಗಳಿಂದ ವಿದ್ಯುತ್ ಇಲ್ಲದೆ ಹಲವಾರು ಗ್ರಾಮಸ್ಥರು ಪರದಾಡುತ್ತಿದ್ದಾರೆ.

ಮೂಡಿಗೆರೆ ಕಳಸ ಕೊಪ್ಪ ಶೃಂಗೇರಿ ಸಕಲೇಶಪುರ ಮುಂತಾದ ಭಾಗಗಳಲ್ಲಿ ವ್ಯಾಪಕವಾದ ಮಳೆಯಾಗುತ್ತಿದೆ. ಕಳಸ ಸಮೀಪದ ಹಳುವಳ್ಳಿಯಲ್ಲಿ ರಸ್ತೆಗೆ ಗುಡ್ಡ ಕುಸಿದಿದ್ದು ಕಳಸ ಬಾಳೆಹೊನ್ನೂರು ನಡುವಿನ ಸಂಪರ್ಕ ವ್ಯತ್ಯವಾಗಿದೆ.

ಮೂಡಿಗೆರೆ ತಾಲೂಕು ಕಿತ್ತಲೆಗಂಡಿ ಸಮೀಪ ರಸ್ತೆಗೆ ಮರ ಉರುಳಿ ಬಿದ್ದಿದ್ದು ಸಂಚಾರ ಅಡಚಣೆ ಉಂಟಾಗಿದೆ. ದೇವರಮನೆ ಗುತ್ತಿ ಊರುಬಗೆ ಗೌಡಹಳ್ಳಿ ಕೊಟ್ಟಿಗೆಹಾರ ಬೆಟ್ಟಗೆರೆ ಬಣಕಲ್ ಮುಂತಾದ ಪ್ರದೇಶಗಳಲ್ಲಿ ವ್ಯಾಪಕವಾದ ಮಳೆಯಾಗಿದೆ.

ಮಳೆಯಿಂದ ಕೃಷಿ ಕಾರ್ಯಗಳಿಗೆ ಅಡಚಣೆ ಉಂಟಾಗಿದ್ದು ಹಳ್ಳಕೊಳ್ಳಗಳು ಉಕ್ಕಿ ಹರಿಯುತ್ತಿವೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ