IMG-20250726-WA0052_copy_1029x506_1

 

 

ಮೂಡಿಗೆರೆಯ ಬಾಲಕರ ಸರ್ಕಾರಿ ಪದವಿಪೂರ್ವ ಕಾಲೇಜಿನಲ್ಲಿ  ಶನಿವಾರ ” ಸಾಂಸ್ಕೃತಿಕ ಮತ್ತು ಕ್ರೀಡೆ, ಸಾಕ್ಷರತಾ ಕ್ಲಬ್ ಹಾಗೂ ಇಕೋ ಕ್ಲಬ್ ಗಳ ಉದ್ಘಾಟನಾ ಸಮಾರಂಭ” “ಪ್ರತಿಭಾ ಪುರಸ್ಕಾರ” ಕಾರ್ಯಕ್ರಮ ನೆರವೇರಿತು.

ಕಾರ್ಯಕ್ರಮದಲ್ಲಿ ಕಳೆದ ಸಾಲಿನ ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ ಕಾಲೇಜಿನ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಕಾಲೇಜಿನಲ್ಲಿ ಈ ಹಿಂದೆ ಪ್ರಾಂಶುಪಾಲರಾಗಿದ್ದ ಮತ್ತು ಈಗ ಪದವಿ ಪೂರ್ವ ಶಿಕ್ಷಣ ಇಲಾಖೆಯ ಜಿಲ್ಲಾ ಉಪ ನಿರ್ದೇಶಕರಾಗಿರುವ ಶ್ರೀಮತಿ ಮಂಜುಳಾ ಅವರು ಮಾತನಾಡಿ ಸರ್ಕಾರಿ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಉತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುತ್ತಿದ್ದು ಇದನ್ನು ಪೋಷಕರು ವಿದ್ಯಾರ್ಥಿಗಳು ಸದುಪಯೋಗಪಡಿಸಿಕೊಳ್ಳಬೇಕು. ವಿದ್ಯಾರ್ಥಿಗಳು ಸತತ ಪ್ರಯತ್ನ ಮತ್ತು ಶ್ರದ್ಧೆಯಿಂದ ವ್ಯಾಸಂಗ ಮಾಡಿದರೆ ಉತ್ತಮ ಸಾಧನೆ ಮಾಡಿ ಉತ್ತಮವಾದ ಭವಿಷ್ಯವನ್ನು ರೂಪಿಸಿಕೊಳ್ಳಬಹುದು ಎಂದು ಸಲಹೆ ನೀಡಿದರು.

ಕಾರ್ಯಕ್ರಮದಲ್ಲಿ ಕಾಲೇಜು ಅಭಿವೃದ್ಧಿ ಮಂಡಳಿ ಉಪಾಧ್ಯಕ್ಷ ಮನೋಜ್ ದಾರದಹಳ್ಳಿ, ವಕೀಲರಾದ ಡಿ ಎಸ್ ಸುಧೀರ್, ಕೆಂಪೇಗೌಡ ಒಕ್ಕಲಿಗರ ವೇದಿಕೆಯ ಅಧ್ಯಕ್ಷ ಬ್ರಿಜೇಶ್ ಕಡಿದಾಳು, ಕಾರ್ಯದರ್ಶಿ ಪ್ರಸಾದ್ ಬಕ್ಕಿ, ಕಾಲೇಜು ಅಭಿವೃದ್ಧಿ ಮಂಡಳಿ ಸದಸ್ಯರುಗಳು, ಕಾಲೇಜಿನ ಪ್ರಾಂಶುಪಾಲರು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ