ಆಧುನಿಕ ಯುಗದಲ್ಲಿ ಪೊಲೀಸರ ಪಾತ್ರವು ಬಹುಮುಖವಾಗಿದೆ. ಕೇವಲ ಕಾನೂನು ಮತ್ತು ಸುವ್ಯವಸ್ಥೆಯ ಕಾಯ್ದುಕೊಳ್ಳುವವರಾಗಿ ಮಾತ್ರವಲ್ಲದೇ ಮಾಜದ ಶಾಂತಿ ಮತ್ತು ಭದ್ರತೆಯ ರೂವಾರಿಗಳಾಗಿದ್ದಾರೆ. ಅಪರಾಧಗಳ ತಡೆ, ಅಪರಾಧ ಪ್ರಕರಣಗಳ ತನಿಖೆ, ಸಾರ್ವಜನಿಕ ಸಮಾರಂಭಗಳಲ್ಲಿ ಭದ್ರತೆ ವಿರ್ಪಡಿಸುವುದು. ಪ್ರವಾಹ, ಭೂಕಂಪ, ಮಹಾಮಾರಿ ಮುಂತಾದ ವಿಪತ್ತು ಸಂದರ್ಭಗಳಲ್ಲಿ ರಕ್ಷಣಾತ್ಮಕ ಕಾರ್ಯಗಳಲ್ಲಿ ತೊಡಗುವುದು ಪೊಲೀಸ್ ಇಲಾಖೆಯ ಪ್ರಮುಖ ಕರ್ತವ್ಯಗಳಾಗಿವೆ. ಕೃಷ್ಟ ಪರಿಸ್ಥಿತಿಗಳಲ್ಲಿ ಕಾಂತಿಯುತವಾಗಿ ಪರಿಸ್ಥಿತಿಯನ್ನು ನಿಭಾಯಿಸುವ ಮೂಲಕ ಪೊಲೀಸರು ಸಾರ್ವಜನಿಕರಲ್ಲಿ ಭದ್ರತೆ ಮತ್ತು ವಿಶ್ವಾಸವನ್ನು ಉಂಟುಮಾಡುವುದು ಇಲಾಖೆಯ ಆದ್ಯತೆಯಾಗಿದೆ.

ಈ ನಿಟ್ಟಿನಲ್ಲಿ “ಮನೆ ಮನೆಗೆ ಪೊಲೀಸ್” ಉಪಕ್ರಮವು ಸಮಾಜದಲ್ಲಿ ಅಪರಾಧ ತಡೆಗೆ ಸಹಕಾರಿ ಆಗುವುದಲ್ಲದೆ, ಶಾಂತಿ ಮತ್ತು ಭದ್ರತೆಯ ಸ್ಥಿರತೆಯನ್ನು ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ. ಜನರು ಪೊಲೀಸರೊಂದಿಗೆ ಕೈಜೋಡಿಸಿದರೆ ಕಾನೂನು ಸುವವ್ಯಸ್ಥೇ ಕಾಪಾಡಲು ಸಾಧ್ಯ. ಸರ್ವರನ್ನೂ ಸಮಾನವಾಗಿ ಒಳಗೊಂಡು ಸಾರ್ವಜನಿಕರು ಈ ಕಾರ್ಯದಲ್ಲಿ ನೇರವಾಗಿ ಪಾಲ್ಗೊಳ್ಳುವಿಕೆಯನ್ನು ಖಾತರಿಪಡಿಸಿ, ಸಾಮಾಜಿಕ ಪಿಡುಗುಗಳ ವಿರುದ್ಧ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವಲ್ಲಿ ಈ ವ್ಯವಸ್ಥೆಯು ಒಂದು ಆಶಾಕಿರಣ. ಈ ಮೂಲಕ ಪೊಲೀಸರ ಬಗ್ಗೆ ಇರುವ ಭಯದ ಭಾವದ ಬದಲು ವಿಶ್ವಾಸದ ಚಿಹ್ನೆಯಾಗಿ ಸಮಾಜದಲ್ಲಿ ಗುರುತಿಸಿಕೊಳ್ಳಲು ಸಾಧ್ಯವಾಗುತ್ತದೆ ಎಂದರು.




