krishi 2

 

 

ಮೂಡಿಗೆರೆ ಕೃಷಿ ವಿಜ್ಞಾನ ಕೇಂದ್ರದಲ್ಲಿ ತೋಟಗಾರಿಕಾ ಇಲಾಖೆ ವತಿಯಿಂದ ರೈತರಿಗೆ ಅಡಿಕೆ ಎಲೆ ಚಿಕ್ಕಿ ರೋಗ ನಿಯಂತ್ರಣ ಹಾಗೂ ಅಡಿಕೆ ಮತ್ತು ಕಾಳು ಮೆಣಸು ಬೆಳೆಗಳಿಗೆ ತಗಲುವ ರೋಗ ಹಾಗೂ ಕೀಟ ನಿಯಂತ್ರಣದ ಬಗ್ಗೆ ತರಬೇತಿ ಹಮ್ಮಿಕೊಳ್ಳಲಾಗಿತ್ತು

ಇದೇ ಸಂದರ್ಭದಲ್ಲಿ ಅಡಿಕೆ ಎಲೆ ಸಿಕ್ಕಿರೋಗ ನಿಯಂತ್ರಣದ ಮಾಹಿತಿ ಕೈಪಿಡಿ ಬಿಡುಗಡೆ ಮಾಡಲಾಯಿತು,

ಮೂಡಿಗೆರೆ ತಾಲೂಕು ಬೆಳಗಾರರ ಸಂಘದ ಅಧ್ಯಕ್ಷ ಬಿ ಆರ್ ಬಾಲಕೃಷ್ಣ ಮಾತನಾಡಿ ರೈತರು ಸರ್ಕಾರದ ಕೃಷಿ ಮತ್ತು ತೋಟಗಾರಿಕೆ ಇಲಾಖೆಯವರು ನೀಡುವ ತಾಂತ್ರಿಕ ಮಾಹಿತಿ ಒಳಗೊಂಡ ತರಬೇತಿ ಹಾಗೂ ಕಾರ್ಯಾಗಾರಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು, ಕೃಷಿ ಮತ್ತು ತೋಟಗಾರಿಕೆ ಇಲಾಖೆಯಿಂದ ಜನರಿಗೆ ವಿವಿಧ ಯೋಜನೆಗಳ ಮಾಹಿತಿಗಳನ್ನು ಸಕಾಲದಲ್ಲಿ ನೀಡುತ್ತಿದ್ದಾರೆ ಹಾಗೂ ಸವಲತ್ತುಗಳನ್ನು ರೈತರಿಗೆ ತಲುಪಿಸುತ್ತಿದ್ದು ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಡಿಎಲ್ ಅಶೋಕ್ ಕುಮಾರ್ ಮಾತನಾಡಿ ಇದು ಒಂದು ಉತ್ತಮ ತರಬೇತಿ ಕಾರ್ಯಕ್ರಮವಾಗಿದ್ದು ರೈತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ತರಬೇತಿ ಪಡೆದು ತಮ್ಮ ತೋಟಗಳಲ್ಲಿ ಅಳವಡಿಸಿಕೊಂಡು ಹೆಚ್ಚಿನ ಪ್ರಯೋಜನ ಪಡೆಯಬೇಕು ಎಂದು ತಿಳಿಸಿದರು.

ಕೃಷಿ ವಿಜ್ಞಾನ ಕೇಂದ್ರದ ವಿಜ್ಞಾನಿಗಳಾದ ಸುಚಿತ್ರಕುಮಾರಿ ರೈತರಿಗೆ ತಾಂತ್ರಿಕ ಮಾಹಿತಿ ನೀಡಿದರು. ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಎ.ಬಿ. ಶ್ವೇತ, ಸಹಾಯಕ ಕೃಷಿ ನಿರ್ದೇಶಕರಾದ ಸುಮಾ, ಕೃಷಿಕ ಸಮಾಜದ ಪೂರ್ಣೇಶ್ ಜಿ.ಹೊಸಳ್ಳಿ, ಜಗನ್ನಾಥ್ ಗೌಡ ಯು.ಹೊಸಳ್ಳಿ, ಎಂ.ಎಂ. ಮಂಜುನಾಥಗೌಡ ಮುಂತಾದವರು ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ