dfafa_page-0001

 

 

ತೀವ್ರ ಜ್ವರದಿಂದ ಬಳಲುತ್ತಿದ್ದ ಒಂದೇ ಗ್ರಾಮದ ಇಬ್ಬರು ಮಕ್ಕಳು ಎರಡೇ ದಿನದ ಅಂತರದಲ್ಲಿ ಮೃತಪಟ್ಟಿದ್ದಾರೆ. ಮೂಡಿಗೆರೆ ಸಮೀಪದ ಹೆಸಗಲ್ ಗ್ರಾಮದಲ್ಲಿ ಈ ಘಟನೆ ದುರ್ಘಟನೆ ನಡೆದಿದೆ.

ಹೆಸಗಲ್ ಗ್ರಾಮದ ನಿವಾಸಿ, ಕೃಷಿ ಇಲಾಖೆ ವಾಹನ ಚಾಲಕ ರವಿ ಮತ್ತು ಪಲ್ಲವಿ ದಂಪತಿಯ ಪತ್ರಿ ಪ್ರೇರಣಾ (11) ಮೃತ ದುರ್ದೈವಿ ಪ್ರೇರಣಾ ಪಟ್ಟಣದ ನಳಂದ ಶಾಲೆಯ 6ನೇ ತರಗತಿಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದಳು. ಈಕೆಗೆ ಎರಡು ದಿನದ ಹಿಂದೆ ಜ್ವರ ಕಾಣಿಸಿಕೊಂಡಿತ್ತು. ಬುಧವಾರ ಬಾಲಕಿ  ಜ್ವರದಿಂದ ಬಳಲುತ್ತಿದ್ದುದನ್ನು  ಗಮನಿಸಿದ ಶಿಕ್ಷಕರು ಬಾಲಕಿಯ ಪಾಲಕರಿಗೆ ಕರೆ ಮಾಡಿ ತಿಳಿಸಿದ್ದರು. ಬಾಲಕಿಯನ್ನು ಕರೆತಂದು ತಾಲೂಕು ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿನ ವೈದ್ಯರ ಸಲಹೆ ಮೇರೆಗೆ ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ಕರೆದೊಯ್ದಿದ್ದಾರೆ.  ಆದರೆ ಚಿಕಿತ್ಸೆ ಫಲಕಾರಿಯಾಗದೇ ಶುಕ್ರವಾರ ಮೃತಪಟ್ಟಿದ್ದಾಳೆ. ಮಗಳನ್ನು ಕಳೆದುಕೊಂಡ ಹೆತ್ತವರ ಅಳು ಮುಗಿಲು ಮುಟ್ಟಿತ್ತು. ಶುಕ್ರವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.

ಮತ್ತೊಂದು ಪ್ರಕರಣದಲ್ಲಿ ಕೂಲಿಯಿಂದ ಜೀವನ ನಡೆಸುವ ಹೆಸಗಲ್ ಕಾಲನಿಯ ಬಸವರಾಜ್ ಮತ್ತು ಮಂಜುಳಾ ದಂಪತಿಯ ಪುತ್ರಿ ಅಂಗನವಾಡಿಗೆ ಹೋಗುತ್ತಿದ್ದ ಸಾರ ಶುಕ್ರವಾರ ಬೆಳಗ್ಗೆ ಜ್ವರ ಕಾಣಿಸಿಕೊಂಡಿದೆ. ಪಾಲಕರು ಕೂಡಲೆ ತಾಲೂಕು ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯಾಧಿಕಾರಿ ಸಿಗದಿದ್ದರಿಂದ ಜಿಲ್ಲಾಸ್ಪತ್ರೆಗೆ ಕರೆದುಕೊಂಡು ಹೋದರು. ಶನಿವಾರ ಬೆಳಗಿನ ಜಾವ 5 ಗಂಟೆಗೆ ಮಗು ಮೃತಪಟ್ಟಿತು. ಈ ದಂಪತಿಗೆ ಈಕೆ ಒಬ್ಬಳೇ ಮಗಳು. ಆಕೆ ಮೃತಪಟ್ಟಿದ್ದರಿಂದ ಪಾಲಕರ ಆಕ್ರಂದನ ಮುಗಿಲು ಮುಟ್ಟಿತ್ತು. ಶನಿವಾರ ಸಂಜೆ ಅಂತ್ಯಕ್ರಿಯೆ ನಡೆಯಿತು.

ಮಕ್ಕಳಿಗೆ ಜ್ವರ ಕಾಣಿಸಿಕೊಂಡು ಒಂದು ಅಥವಾ ಎರಡು ದಿನದಲ್ಲೇ ಮೃತಪಡುತ್ತಿರುವುದರಿಂದ ಗ್ರಾಮದಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ. ತಾಲೂಕು ಸರ್ಕಾರಿ ಆಸ್ಪತ್ರೆಯಲ್ಲಿದ್ದ ಬಹುತೇಕ ವೈದ್ಯಾಧಿಕಾರಿಗಳು ಇತ್ತೀಚೆಗೆ ವರ್ಗಾವಣೆಯಾಗಿದ್ದಾರೆ. ಇದರಿಂದ ಸಮರ್ಪಕ ಚಿಕಿತ್ಸೆ ದೊರೆಯುತ್ತಿಲ್ಲ. ಜ್ವರದಿಂದ ನರಳುತ್ತಿರುವ ಮಕ್ಕಳಿಗೆ ಕೂಡಲೆ ಸೂಕ್ತ ಚಿಕಿತ್ಸೆ ಸಿಗುವಂತಾಗಬೇಕು. ಆರೋಗ್ಯ ಇಲಾಖೆಯಿಂದ ಸೂಕ್ತ ಕ್ರಮ ಕೈಗೊಳ್ಳಬೇಕು. ತಾಲೂಕು ಆಸ್ಪತ್ರೆ ಸೇರಿದಂತೆ ತಾಲೂಕಿನ ಎಲ್ಲ ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿ ಮೂರು ಪಾಳಿಯಲ್ಲಿ ಮಕ್ಕಳ ವೈದ್ಯಾಧಿಕಾರಿಗಳು ಕರ್ತವ್ಯ ನಿರ್ವಹಿಸುವಂತೆ ಕ್ರಮ ಕೈಗೊಳ್ಳಬೇಕು. ಮಕ್ಕಳಿಗೆ ಇಂಥ ಜ್ವರ ಕಾಣಿಸಿಕೊಳ್ಳಲು ಯಾವ ಸಾಂಕ್ರಾಮಿಕ ರೋಗ ಹರಡಿದೆ ಎಂಬುದನ್ನು ಅಧಿಕಾರಿಗಳು ಪರಿಶೀಲಿಸಬೇಕು ಎಂದು ಗ್ರಾಪಂ ಮಾಜಿ ಉಪಾಧ್ಯಕ್ಷ ಹೆಸಗಲ್‌ ಗಿರೀಶ್ ಒತ್ತಾಯಿಸಿದ್ದಾರೆ.

ಹೆಸಗಲ್ ಗ್ರಾಮದಲ್ಲಿ 2 ಮಕ್ಕಳು ಮೃತಪಟ್ಟಿರುವ ಮಾಹಿತಿ ತಲುಪಿದ ಕೂಡಲೆ ಅಲ್ಲಿಗೆ ವೈದ್ಯಾಧಿಕಾರಿಗಳು ಮತ್ತು ಸಿಬ್ಬಂದಿಗಳ ತಂಡವನ್ನು ಕಳುಹಿಸಲಾಗಿದೆ.   ಅಲ್ಲಿ ಮಕ್ಕಳಿಗೆ ಯಾವ ರೀತಿಯಲ್ಲಿ ಜ್ವರ ಕಾಣಿಸಿಕೊಂಡಿದೆ ಎಂಬುದನ್ನು ಪರಿಶೀಲನೆ ನಡೆಸಲಾಗುವುದು. ತಾಲೂಕಿನ ಮಕ್ಕಳಲ್ಲಿ ತೀವ್ರ ತರದ ಜ್ವರದ ಪ್ರಕರಣಗಳು ಕಂಡುಬಂದಿಲ್ಲ. ಮೋಡ, ತುಂತುರು ಮಳೆ ಮತ್ತು ಚಳಿಯ ವಾತಾವರಣ ಇರುವುದರಿಂದ ಕೆಲವೆಡೆ ಸಣ್ಣ ಜ್ವರ ಕಾಣಿಸಿಕೊಂಡಿದೆ. ಯಾವುದೆ ಸಾಂಕ್ರಾಮಿಕ ರೋಗ ಆವರಿಸಿಕೊಂಡಿಲ್ಲ. ಈ ರೀತಿಯಾಗಲು ಕಾರಣವೇನೆಂದು ಪತ್ತೆ ಹಚ್ಚಲಾಗುವುದು. ಮಕ್ಕಳಲ್ಲಿ ಜ್ವರ ಕಾಣಿಸಿಕೊಂಡರೆ ಪೋಷಕರು ಭಯಪಡುವ ಅಗತ್ಯವಿಲ್ಲ. ಕೂಡಲೆ ಆಸ್ಪತ್ರೆಗೆ ಭೇಟಿ ನೀಡಿ ಚಿಕಿತ್ಸೆ ಪಡೆಯಲು ಎಲ್ಲಾ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ತಾಲೂಕು ಆಸ್ಪತ್ರೆಯಲ್ಲಿ ಮಕ್ಕಳ ವೈದ್ಯಾಧಿಕಾರಿ ಕರ್ತವ್ಯದಲ್ಲಿದ್ದಾರೆ. ಅವರು ಮಕ್ಕಳಿಗೆ ಸೂಕ್ತ ಚಿಕಿತ್ಸೆ ನೀಡುತ್ತಾರೆ:

ಡಾ: ಹರೀಶ್ ಬಾಬು, ಮೂಡಿಗೆರೆ ತಾಲ್ಲೂಕು ಆರೋಗ್ಯಾಧಿಕಾರಿ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ