jillavaru

 

 

ಮುಖ್ಯಮಂತ್ರಿ  ಸಿದ್ದರಾಮಯ್ಯನವರು ಇತ್ತೀಚೆಗೆ ಬೆಂಗಳೂರಿನಲ್ಲಿ ರಾಜ್ಯದ ವಿವಿಧ ಜಿಲ್ಲೆಗಳ ಶಾಸಕರು ಮತ್ತು ಸಚಿವರೊಂದಿಗೆ ಜಿಲ್ಲಾವಾರು ಸಮಾಲೋಚನಾ ಸಭೆ ಏರ್ಪಡಿಸಿದ್ದರು. ಈ ಸಂದರ್ಭದಲ್ಲಿ ಶಾಸಕರ ಕ್ಷೇತ್ರವಾರು ಸಮಸ್ಯೆಗಳು, ಶಾಸಕರು ಮತ್ತು ಸಚಿವರೊಂದಿಗೆ ಸಮನ್ವಯತೆಯ ಸಮಸ್ಯೆಗಳು, ಜಿಲ್ಲೆಯ ಅಭಿವೃದ್ಧಿ ವಿಚಾರವಾಗಿ ವಿಚಾರ ವಿನಿಮಯ ಮಾಡಿ ಸೂಕ್ತ ಸಲಹೆಗಳನ್ನು ನೀಡಿದರು.

ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಪಕ್ಷದ ಎಲ್ಲಾ ಶಾಸಕರೊಂದಿಗೆ ಸಭೆ ನಡೆಸಿ, ಕ್ಷೇತ್ರವಾರು ಅಭಿವೃದ್ಧಿ ಬಗ್ಗೆ ಮಾಹಿತಿ ಪಡೆದರು. ಅಲ್ಲದೇ, ವಿಶೇಷ ಅನುದಾನ ಮಂಜೂರಾತಿ ಕಾರ್ಯಗಳ ಹಾಗೂ ಮಳೆ ಬಾಧಿತ ಪ್ರದೇಶಗಳಲ್ಲಿ ಕೈಗೊಳ್ಳಬೇಕಿರುವ ಪರಿಹಾರ ಕಾರ್ಯಗಳ ಕುರಿತು ಸಲಹೆ ಸೂಚನೆಗಳೊಂದಿಗೆ ಚರ್ಚಿಸಿದರು.

ಜಿಲ್ಲೆಯ ಶಾಸಕರುಗಳಾದ ಟಿ.ಡಿ. ರಾಜೇಗೌಡ, ಹೆಚ್.ಡಿ. ತಮ್ಮಯ್ಯ, ನಯನಾ ಮೋಟಮ್ಮ, ಕೆ.ಎಸ್. ಆನಂದ್ ಮತ್ತು ಜಿ.ಹೆಚ್. ಶ್ರೀನಿವಾಸ್ ಜಿಲ್ಲೆಯ ಪರವಾಗಿ ಸಭೆಯಲ್ಲಿ ಪ್ರತಿನಿಧಿಸಿದ್ದರು. ಈ ಸಂದರ್ಭದಲ್ಲಿ ಜಿಲ್ಲೆಯ ಪ್ರಮುಖ ಅಭಿವೃದ್ಧಿ ಕಾರ್ಯಗಳು ಮತ್ತು ಸಮಸ್ಯೆಗಳ ಬಗ್ಗೆ ಮುಖ್ಯಮಂತ್ರಿಯವರ ಗಮನ ಸೆಳೆದು ಮನವಿ ಪತ್ರ ನೀಡಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ