punith prathime

 

 

ಡಾ|| ರಾಜ್‌ಕುಮಾರ್ ಅಭಿಮಾನಿಗಳ ಸಂಘದಿಂದ ಚಿಕ್ಕಮಗಳೂರು ನಗರದ ಆಜಾದ್ ಪಾರ್ಕ್ ವೃತ್ತದಲ್ಲಿ ದಿವಂಗತ ಡಾ|| ಪುನೀತ್‌ರಾಜ್‌ಕುಮಾರ್ ನೂತನ ಪ್ರತಿಮೆಯನ್ನು ಭಾನುವಾರ ಸ್ಥಾಪಿಸಲಾಯಿತು.

ಈ ವೇಳೆ ಮಾತನಾಡಿದ ಸಂಘದ ಜಿಲ್ಲಾಧ್ಯಕ್ಷ ಐ.ಕೆ. ಓಂಕಾರೇಗೌಡ ಸುಮಾರು 5.6 ಅಡಿ ಎತ್ತರದ ಪ್ರತಿಮೆಯನ್ನು ಸ್ಥಾಪಿಸಲಾಗಿದ್ದು. ಮುಂದಿನ ಸೆಪ್ಟೆಂಬರ್ ತಿಂಗಳ ಅಂತ್ಯದೊಳಗೆ ಆಜಾದ್ ವೃತ್ತದಲ್ಲಿ ದೊಡ್ಡಮಟ್ಟದ ಕಾರ್ಯಕ್ರಮ ಹಮ್ಮಿಕೊಳ್ಳಲಾಗುವುದು ಎಂದು ತಿಳಿಸಿದರು.

ಸೆಪ್ಟೆಂಬರ್ ನಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಜೆ.ಜಾರ್ಜ್, ಅಶ್ವಿನಿ ಪುನೀ ತ್‌ರಾಜ್‌ಕುಮಾರ್ ಸೇರಿದಂತೆ ಅನೇಕ ಸಿನಿತಾರೆಯರನ್ನು ಆಹ್ವಾನಿಸಿ ಅವರ ಸಮ್ಮುಖದಲ್ಲಿ ಪ್ರತಿಮೆಯನ್ನು ಅನಾವರಣಗೊಳಿಸಲಾಗುವುದು ಎಂದು ಹೇಳಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಸುಜಾತ ಶಿವಕುಮಾರ್, ರೂಪಕುಮಾರ್, ಜಿಲ್ಲಾ ಗ್ಯಾರಂಟಿ ಪ್ರಾಧಿಕಾರದ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ, ಸಂಘದ ಗೌರವಾಧ್ಯಕ್ಷ ಎಲ್.ವಿ.ಕೃಷ್ಣಮೂರ್ತಿ, ಪ್ರಧಾನ ಕಾರ್ಯದರ್ಶಿ ಎಂ.ಜಿ. ಬಸವರಾಜ್, ಉಪಾಧ್ಯಕ್ಷರಾದ ನೆಟ್ಟೆಕೆರೆ ಹಳ್ಳಿ ಜಯಣ್ಣ, ರೇವನಾಥ್, ಗುರುಮೂರ್ತಿ, ಕಾರ್ಯದರ್ಶಿಗಳಾದ ಕರ್ಕಿಪೇಟೆ ಕುಮಾರ್, ಮಹೇಶ್, ಆನಂದ್, ಓಂಕಾರಮೂರ್ತಿ ಮತ್ತಿತರರು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ