ಕನ್ನಡ ನಾಡು ನುಡಿಗೆ ಸಂಬಂಧಿಸಿದ ಕಾರ್ಯ ಚಟುವಟಿಕೆಗಳಲ್ಲಿ ಮಹಿಳೆಯರು ಸಕ್ರಿಯರಾಗಿ ತೊಡಗಿಸಿಕೊಳ್ಳಬೇಕು ಎಂದು ಚಿಕ್ಕಮಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್ ಹೇಳಿದರು.
ಅವರು ಶನಿವಾರ ಮೂಡಿಗೆರೆ ವಿದ್ಯಾನಗರದ ವಿ ವಿಸ್ಡಮ್ ಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಮೂಡಿಗೆರೆ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ ಮಹಿಳಾ ಘಟಕದ ನೂತನ ಪದಾಧಿಕಾರಿಗಳ ಪದಗ್ರಹಣ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು.
ಸಾಹಿತ್ಯ ಚಟುವಟಿಕೆಗಳು ನಿಂತ ನೀರಾಗಬಾರದು, ಅದು ನಿರಂತರ ಹರಿಯುವ ನದಿಯಾಗಬೇಕು, ಸಾಹಿತ್ಯ, ಸಾಂಸ್ಕೃತಿಕ ಚಟುವಟಿಕೆಗಳಲ್ಲಿ ಭಾಗವಹಿಸುವ ಮೂಲಕ ಸೃಜನಾತ್ಮಕ ವ್ಯಕ್ತಿತ್ವವನ್ನು ರೂಪಿಸಿಕೊಳ್ಳಲು ಸಾಧ್ಯವಾಗುತ್ತದೆ. ಕನ್ನಡ ಭಾಷೆಯ ಬಗ್ಗೆ ನಾವೆಲ್ಲಾ ಅಭಿಮಾನ ಹೊಂದಿ ನಮ್ಮ ಮಕ್ಕಳಿಗೂ ಕನ್ನಡದ ಬಗ್ಗೆ ಆಸಕ್ತಿ ಮೂಡುವಂತೆ ಮಾಡಬೇಕು ಎಂದರು.
ಚಿಕ್ಕಮಗಳೂರು ಜಿಲ್ಲೆಯ ವ್ಯಾಪ್ತಿಗೆ ಸಂಬಂಧಿಸಿದಂತೆ ಕನ್ನಡ ಸಾಹಿತ್ಯ ಪರಿಷತ್ ನಲ್ಲಿ ಅನೇಕ ಹೊಸ ಪ್ರಯೋಗಗಳಿಗೆ ಮುನ್ನುಡಿ ಬರೆಯಲಾಗಿದೆ. ಮಹಿಳಾ ಮತ್ತು ಯುವ ಘಟಕಗಳನ್ನು ಹುಟ್ಟುಹಾಕಿ ಪರಿಷತ್ತಿನ ಕಾರ್ಯಚಟುವಟಿಕೆಗಳು ವ್ಯಾಪಕವಾಗಿ ಜನರನ್ನು ತಲುಪಲು ಪ್ರಯತ್ನ ನಡೆಸಲಾಗುತ್ತಿ. ಇದಕ್ಕೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಎಲೆಮೆರೆಯ ಕಾಯಿಯಂತೆ ಇದ್ದ ಅನೇಕ ಮಹಿಳೆಯರು ಸಾಹಿತ್ಯ ಚಟುವಟಿಕೆಗಳ ಮೂಲಕ ಮುಖ್ಯವಾಹಿನಿಯಲ್ಲಿ ಗುರತಿಸಿಕೊಳ್ಳುವಂತಾಗಿದೆ ಎಂದರು.
ಕನ್ನಡ ಸಾಹಿತ್ಯ ಪರಿಷತ್ ಮೂಡಿಗೆರೆ ತಾಲ್ಲೂಕು ಮಹಿಳಾ ಘಟಕದ ಅಧ್ಯಕ್ಷರಾಗಿ ಶ್ರೀಮತಿ ರೇಖಾ ರವಿರಾಜ್ ಅವರು ನಿಕಟಪೂರ್ವ ಅಧ್ಯಕ್ಷೆ ಶ್ರೀಮತಿ ಅನಿತಾ ಜಗದೀಪ್ ಅವರಿಂದ ಕನ್ನಡ ಧ್ವಜ ಸ್ವೀಕರಿಸುವ ಮೂಲಕ ನೂತನ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದರು. ಅವರ ಜೊತೆಗೆ ಅವರ ತಂಡದ ಪದಾಧಿಕಾರಿಗಳು ಪ್ರಮಾಣ ವಚನ ಸ್ವೀಕರಿಸಿದರು.

ಕನ್ನಡ ಸಾಹಿತ್ಯ ಪರಿಷತ್ ಚಿಕ್ಕಮಗಳೂರು ಜಿಲ್ಲಾ ಮಹಿಳಾ ಘಟಕದ ಅಧ್ಯಕ್ಷರಾದ ಶ್ರೀಮತಿ ನಿರ್ಮಲಾ ಮಂಚೇಗೌಡ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕಸಾಪ ಜಿಲ್ಲಾ ಸಂಚಾಲಕಿ ಶ್ರೀಮತಿ ವಿಶಾಲ ನಾಗರಾಜು ಪ್ರಾಸ್ತಾವಿಕವಾಗಿ ಮಾತನಾಡಿರು, ಕಸಾಪ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಎಸ್.ಎಸ್.ವೆಂಕಟೇಶ್ ಪ್ರತಿಜ್ಞಾವಿಧಿ ಬೋದಿಸಿದರು.
ಕಸಾಪ ಜಿಲ್ಲಾ ಸಂಚಾಲಕರಾದ ಮಗ್ಗಲಮಕ್ಕಿ ಗಣೇಶ್, ಬಕ್ಕಿ ಮಂಜು, ಯುವ ಘಟಕದ ಅಧ್ಯಕ್ಷ ಚಂದ್ರು ಒಡೆಯಾರ್ ಉಪಸ್ಥಿತರಿದ್ದರು.
ಕಸಾಪ ತಾಲ್ಲೂಕು ಗೌರವ ಕಾರ್ಯದರ್ಶಿ ಸುಚಿತ್ರ ಪ್ರಸನ್ನ ಮತ್ತು ಬಕ್ಕಿ ಮಂಜು ಅವರು ಗಾಯನದಿಂದ ರಂಜಿಸಿದರು
ಶ್ರೀಮತಿ ಜ್ಯೋತಿ ವೆಂಕಟೇಶ್ ಕಾರ್ಯಕ್ರಮ ನಿರೂಪಿಸಿದರು. ಶ್ರೀಮತಿ ಮಾಲಾ ಧಶರಥ್ ಸ್ವಾಗತಿಸಿದರು, ಶ್ರೀಮತಿ ನಾಗಮಣಿ ಪ್ರಾರ್ಥಿಸಿದರು, ಶ್ರೀಮತಿ ಭಾರತೀ ರವೀಂದ್ರ ವಂದಿಸಿದರು,



