ಬಿಲ್ ಪಾವತಿಗೆ ಗುತ್ತಿಗೆದಾರರೊಬ್ಬರಿಂದ ಲಂಚ ಪಡೆಯುತ್ತಿದ್ದ ವೇಳೆ ಕೊಪ್ಪ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.
ರಸ್ತೆ ಕಾಮಗಾರಿಯೊಂದರ ಬಾಕಿ ಬಿಲ್ ಪಾವತಿಗೆ ಸತಾಯಿಸುತ್ತಿದ್ದ ಮುಖ್ಯಾಧಿಕಾರಿ ಬಿಲ್ ಪಾವತಿ ಮಾಡಲು ರೂ. 75 ಸಾವಿರ ಲಂಚಕ್ಕೆ ಬೇಡಿಕೆ ಇಟ್ಟಿದ್ದರು ಎನ್ನಲಾಗಿದೆ.
ಈ ವಿಚಾರವನ್ನು ಗುತ್ತಿಗೆದಾರರು ಲೋಕಾಯುಕ್ತಕ್ಕೆ ದೂರು ನೀಡಿದ್ದರು.
ಗುತ್ತಿಗೆದಾರರಿಂದ 25 ಸಾವಿರ ಲಂಚದ ಹಣ ಪಡೆಯುವಾಗ ಲೋಕಾಯುಕ್ತರು ರೆಡ್ ಹ್ಯಾಂಡ್ ಆಗಿ ಮುಖ್ಯಾಧಿಕಾರಿಯನ್ನು ಬಂಧಿಸಿದ್ದಾರೆ.



