ckm-3-14

 

 

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಚುನಾವಣಾ ಆಯೋಗದ ವಿರುದ್ಧ ಮಾಡಿರುವ ಆಪಾದನೆ ಸತ್ಯಕ್ಕೆ ಹತ್ತಿರವಾಗಿದೆ. ಈ ಬಗ್ಗೆ ಸಮಗ್ರ ತನಿಖೆಯಾಗಬೇಕು ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಆಗ್ರಹಿಸಿದರು.

ಚಿಕ್ಕಮಗಳೂರು ನಗರದ ಪ್ರೆಸ್ ಕ್ಲಬ್ ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸತ್ಯಕ್ಕೆ ಹತ್ತಿರವಾದ ಆರೋಪ ಮಾಡಿದರೂ ಬಿಜೆಪಿ ನಾಯಕರು ರಾಹುಲ್ ಗಾಂಧಿ ಅವರನ್ನೇ ಅಪಹಾಸ್ಯ ಮಾಡುವುದು ನೋಡಿದರೆ ಮತಗಳ್ಳತನ ನಡೆದಿರುವುದು ಸ್ಪಷ್ಟ ಎನಿಸುತ್ತಿದೆ ಎಂದು ಅನುಮಾನ ವ್ಯಕ್ತಪಡಿಸಿದರು.

ಲೋಕಸಭೆ ವಿರೋಧ ಪಕ್ಷದ ನಾಯಕರು ಆರೋಪ ಮಾಡಿದಾಗ ಅದನ್ನು ಗಂಭೀರವಾಗಿ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಅಪಹಾಸ್ಯ ಮಾಡುವುದು ಸರಿಯಲ್ಲ. ಮತಗಳ್ಳತನ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರ ಹಕ್ಕು ಕಿತ್ತುಕೊಳ್ಳುವ ಕೆಲಸ. ಜೊತೆಗೆ ಇದೊಂದು ನಾಚಿಕೆಗೇಡಿನ ಸಂಗತಿ ಎಂದು ಕಿಡಿಕಾರಿದರು.

ದೇಶದಲ್ಲಿ ಎಂದು ಇಂಥ ಪರಿಸ್ಥಿತಿ ಬಂದಿರಲಿಲ್ಲ. ನಮ್ಮ ದೇಶದ ಜನಪ್ರತಿನಿಧಿಗಳು ಮತಕದ್ದು ಆಡಳಿತ ನಡೆಸುತ್ತಿದ್ದಾರೆ ಎಂಬುದು ನಾಚಿಕೆಗೇಡಿನ ಸಂಗತಿ. ದೇಶದ ವಿವಿಧ ರಾಜ್ಯಗಳಲ್ಲಿ ಎನ್​ಡಿಎ ಅಭ್ಯರ್ಥಿಗಳು ಮತಕದ್ದು ಗೆದ್ದಿರುವ ಸಾಧ್ಯತೆಯಿದೆ. ಚುನಾವಣಾ ಆಯೋಗ ಏನ್ಡಿಎ ಸರ್ಕಾರದ ಏಜೆಂಟ್ ಆಗಿ ಕೆಲಸ ಮಾಡಿರುವ ಅನುಮಾನವಿದೆ ಎಂದು ಆರೋಪಿಸಿದರು.

ಬೂತ್ ಮಟ್ಟದಲ್ಲಿ ಬಿಎಲ್ಓ ನೇಮಕ ಮಾಡುವುದು ಚುನಾವಣಾ ಆಯೋಗವೇ ಹೊರತು ಸ್ಥಳೀಯ ಸರ್ಕಾರಗಳಲ್ಲ. ಇದನ್ನು ಅರಿಯದ ಬಿಜೆಪಿ ನಾಯಕರು ಬಾಯಿಗೆ ಬಂದಹಾಗೆ ಮಾತನಾಡುತ್ತಿದ್ದಾರೆ. ರಾಜ್ಯದ ವಿಧಾನಸಭೆಯಲ್ಲಿ 138 ಕಾಂಗ್ರೆಸ್ ಶಾಸಕರು ಗೆದ್ದಿದ್ದಾರೆ. ಇಲ್ಲಿ ಮತಗಳ್ಳತನ ನಡೆದಿದ್ದರೆ ಬಿಜೆಪಿ ನಾಯಕರು ಸಾಬೀತು ಪಡಿಸಲಿ. ಯಾವುದೇ ರೀತಿಯ ತನಿಖೆಯನ್ನಾದರೂ ಮಾಡಿಸಲಿ ಎಂದು ಆಗ್ರಹಿಸಿದರು.

ಸುದ್ದಿಗೋಷ್ಠಿಯಲ್ಲಿ ಕಾಂಗ್ರೆಸ್ ಮುಖಂಡರಾದ ಹಿರೇಮಗಳೂರು ರಾಮಚಂದ್ರ, ಅತೀಕ್, ಇಂದಾವರ ಲೋಕೇಶ್, ಪ್ರಕಾಶ್ ರೈ, ಸಣ್ಣಪ್ಪ, ಸಂತೋಷ್ ಲಕ್ಯಾ ಉಪಸ್ಥಿತರಿದ್ದರು.

ಮತಗಳ್ಳತನದ ಆರೋಪ ಮಾಡುತ್ತಿರುವ ರಾಹುಲ್ ಗಾಂಧಿ ಹುಚ್ಚಾಸ್ಪತ್ರೆಯಿಂದ ಬಂದಿದ್ದಾರೆ ಎಂದು ಜಿಲ್ಲೆಯ ಬಿಜೆಪಿ ನಾಯಕ ಸಿ.ಟಿ.ರವಿ ಹೇಳಿದ್ದಾರೆ. ಆದರೆ ಹೀಗೆ ಹೇಳುವವರಿಗೆ ಮಾನಸಿಕ ಸ್ಥಿಮಿತತೆ ಇಲ್ಲ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್.ದೇವರಾಜ್ ಅವರು ಸಿ.ಟಿ‌.ರವಿ ಅವರಿಗೆ ತಿರುಗೇಟು ನೀಡಿದರು.

ಸಿ.ಟಿ.ರವಿ ಅವರು ಇದುವರೆಗೆ ಒಂದೇ ಒಂದು ಸತ್ಯವನ್ನು ಮಾತನಾಡಿಲ್ಲ. ಯಾವಾಗಲೂ ವಿವೇಚನೆ ಇಲ್ಲದೆ ಮಾತನಾಡುತ್ತಾರೆ ಎಂದು ಆರೋಪಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ