FB_IMG_1755146601216_copy_672x310

 

 

ಚಿಕ್ಕಮಗಳೂರು ಜಿಲ್ಲೆಯ ಎಲ್ಲ ರಸ್ತೆಗಳು ಗುಂಡಿ ಬಿದ್ದು ಹಾಳಾಗಿದ್ದು ಕೂಡಲೇ ದುರಸ್ತಿ ಮಾಡುವಂತೆ ಆಗ್ರಹಿಸಿ ಬಿಜೆಪಿ ಮತ್ತು ಜೆಡಿಎಸ್ ಕಾರ್ಯಕರ್ತರು ತಾಲೂಕಿನ ಜೋಳದಾಳ್ ಕೈಮರದಲ್ಲಿ ಬುಧವಾರ ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡು ರಸ್ತೆ ಗುಂಡಿಗೆ ಬಾಳೆಗಿಡ ನೆಟ್ಟು ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಸರಕಾರದ ವಿರುದ್ಧ ಘೋಷಣೆ ಕೂಗಿದರು.

ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ದೀಪಕ್ ದೊಡ್ಡಯ್ಯ ಮಾತನಾಡಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡೂವರೆ ವರ್ಷಗಳಾದರೂ ಸಾಧನೆ ಶೂನ್ಯವಾಗಿದೆ. ಕೂಡಲೇ ಜಿಲ್ಲೆಯ ರಸ್ತೆಗಳ ಗುಂಡಿಮುಚ್ಚಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಶಾಸಕರು ಮತ್ತು ಜಿಲ್ಲಾ ಉಸ್ತುವಾರಿ ಸಚಿವರು ಕ್ಷೇತ್ರ ಪ್ರವಾಸ ಕೈಗೊಂಡು ಜನಸಾಮಾನ್ಯರು ಎದುರಿಸುತ್ತಿರುವ ಸಮಸ್ಯೆಗಳನ್ನು ಅರಿತುಕೊಳ್ಳಬೇಕು ಎಂದು ಆಗ್ರಹಿಸಿದರು.

15 ದಿನಗಳ ಒಳಗಾಗಿ ರಸ್ತೆಗುಂಡಿಗಳನ್ನು ದುರಸ್ತಿ  ಮಾಡದಿದ್ದರೆ ಪ್ರತಿಭಟನೆ ಅಭಿವೃದ್ಧಿಪಡಿಸದಿದ್ದರೆ ಇಡೀ ಕ್ಷೇತ್ರವನ್ನು ಬಂದ್ ನಡೆಸುವುದಾಗಿ ಎಚ್ಚರಿಸಿದರು.

ಜೆಡಿಎಸ್‌ ಕ್ಷೇತ್ರ ಸಮಿತಿ ಅಧ್ಯಕ್ಷಡಿ.ಜೆ. ಸುರೇಶ್ ಮಾತನಾಡಿ, ರಸ್ತೆಗಳು ಗುಂಡಿ ಬಿದ್ದಿರುವುದರಿಂದ ಅಪಘಾತಗಳು ಹೆಚ್ಚಾಗುತ್ತಿವೆ. ಸರಕಾರ ಪರ್ಸೆಂಟೇಜ್ ನಲ್ಲಿ ತೊಡಗಿರುವುದರಿಂದ ಅಭಿವೃದ್ಧಿ ಶೂನ್ಯವಾಗಿದೆ. ಸರಕಾರ ಮತ್ತು ಅರಣ್ಯ ಇಲಾಖೆ ಕಾಡುಪ್ರಾಣಿಗಳ ಹಾವಳಿ ತಡೆಯುವಲ್ಲಿ ವಿಫಲವಾಗಿವೆ ಎಂದು ಆರೋಪಿಸಿದರು.

ಬಿಜೆಪಿ ಮಂಡಲ ಅಧ್ಯಕ್ಷ ರವಿ

ಬಸರವಳ್ಳಿ ಮಾತನಾಡಿ, ಜಿಲ್ಲಾ ಅದರ ಉಸ್ತುವಾರಿ ಸಚಿವರು ಹೆಲಿಕಾಪ್ಟರ್‌ನಲ್ಲಿ ಓಡಾಡುತ್ತಿರುವುದರಿಂದ ರಸ್ತೆಗಳ ದುಸ್ಥಿತಿ ಅವರ ಕಣ್ಣಿಗೆ ಕಾಣಿಸುತ್ತಿಲ್ಲ. ರಸ್ತೆಗಳಲ್ಲಿ ಓಡಾಡಿದರೆ ಮಾತ್ರ ಅರಿವಾಗುತ್ತದೆ. ದುರಸ್ತಿ ವಿಳಂಬವಾದರೆ ಪ್ರತಿಭಟನೆ ಮತ್ತಷ್ಟು ತೀವ್ರಗೊಳ್ಳಲಿದೆ ಎಂದು ಎಚ್ಚರಿಸಿದರು.

ಬಿಜೆಪಿ ಮಂಡಲ ಮುಖಂಡ ಕೆರಮಕ್ಕಿ ಮಹೇಶ್, ಜೆಡಿಎಸ್‌ನ ಎಚ್. ಎನ್.ಕೃಷ್ಣಗೌಡ ಸೇರಿದಂತೆ ವಿವಿಧ ಸಂಘಟನೆಗಳ ಭಾಗವಹಿಸಿದ್ದರು. ಮುಖಂಡರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ