banakal 4

 

 

ವಿವಾಹಿತ ಹಿಂದೂ ಮಹಿಳೆಯೊಬ್ಬಳು ಮುಸ್ಲಿಂ ಯುವಕನೊಂದಿಗೆ ಪರಾರಿಯಾದ ಪ್ರಕರಣ ಚಿಕ್ಕಮಗಳೂರು ಜಿಲ್ಲೆಯಲ್ಲಿ ನಡೆದಿದ್ದು, ಸ್ಥಳೀಯರ ಆಕ್ರೋಶಕ್ಕೆ ಕಾರಣವಾಗಿದೆ.

ಜಿಲ್ಲೆಯ ಮೂಡಿಗೆರೆ ತಾಲೂಕಿನ ಬಣಕಲ್ ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದ  22 ವರ್ಷದ ಹಿಂದೂ ಮಹಿಳೆ ಮುಸ್ಲಿಂ ಯುವಕನೊಂದಿಗೆ ಮನೆ ಬಿಟ್ಟು ಪರಾರಿಯಾಗಿದ್ದಾಳೆ ಎಂದು ಕುಟುಂಬದವರು ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

ಹಿಂದೂ ಮಹಿಳೆ  ಆಶಿಕ್ ಎಂಬ ಮುಸ್ಲಿಂ ಸಮುದಾಯದ ಯುವಕನ ಜೊತೆ ಎಸ್ಕೇಪ್ ಆಗಿದ್ದಳು. ಪ್ರಕರಣ ದಾಖಲಿಸಿಕೊಂಡಿದ್ದ ಬಣಕಲ್ ಪೊಲೀಸರು ನಾಪತ್ತೆಯಾದವಳ ಹಿಂದೆ ಬಿದ್ದಿದ್ದರು. ಇದೀಗ ಇಬ್ಬರು ಕೇರಳದಲ್ಲಿ ಪತ್ತೆಯಾಗಿದ್ದು ಬಣಕಲ್‌ ಪೊಲೀಸರು ಕೇರಳದಿಂದ ಇಬ್ಬರನ್ನೂ ಕರೆತಂದಿದ್ದಾರೆ.

ಪತ್ನಿ ನಾಪತ್ತೆಯಾಗಿರುವ ಹಿನ್ನೆಲೆಯಲ್ಲಿ, ಪತಿ  ಬಣಕಲ್ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪೊಲೀಸರು ಶೋಧ ನಡೆಸಿ ಮಹಿಳೆಯನ್ನು ಪತ್ತೆಹಚ್ಚಿದ್ದಾರೆ.
ಇದೊಂದು ಲವ್ ಜಿಹಾದ್ ಪ್ರಕರಣವಾಗಿದ್ದು, ವಿವಾಹಿತ ಮಹಿಳೆಯನ್ನು ಪ್ರೇಮದ ಬಲೆಗೆ ಬೀಳಿಸಿ ಆಕೆಯನ್ನು ಕಿಡ್ನಾಪ್ ಮಾಡಲಾಗಿದೆ ಎಂದು ಆರೋಪಿಸಿ ಹಿಂದೂ ಸಂಘಟನೆ ಮುಖಂಡರು ಹಾಗೂ ಗ್ರಾಮಸ್ಥರು ಠಾಣೆಯ ಮುಂದೆ ಬೃಹತ್ ಸಂಖ್ಯೆಯಲ್ಲಿ ಜಮಾಯಿಸಿ, ಆಕ್ರೋಶ ವ್ಯಕ್ತಪಡಿಸಿದರು. ಯುವಕನ ವಿರುದ್ಧ ಕಠಿಣ ಕಾನೂನು ಕ್ರಮ ಜರುಗಿಸಬೇಕು ಎಂದು ಆಗ್ರಹಿಸಿದರು.

ಪ್ರತಿಭಟನಾ ನಿರತರನ್ನು ಒಳಬಿಡದೇ ಠಾಣೆಯ ಪ್ರವೇಶ ದ್ವಾರ ಮುಚ್ಚಿದ್ದಕ್ಕೆ ತೀವ್ರ ಆಕ್ರೋಶಗೊಂಡ ಪ್ರತಿಭಟನಾಕಾರರು, ಏಕಾಏಕಿ ರಾಷ್ಟ್ರೀಯ ಹೆದ್ದಾರಿಯ ಮೇಲೆ ರಸ್ತೆ ತಡೆ ನಡೆಸಿದರು. ಪರಿಸ್ಥಿತಿ ಉದ್ವಿಗ್ನವಾಗುತ್ತಿದ್ದಂತೆ, ಪೊಲೀಸರು ಪ್ರತಿಭಟನಾಕಾರರೊಂದಿಗೆ ಮಾತುಕತೆ ನಡೆಸಿ, ಮಹಿಳೆಯನ್ನು ಠಾಣೆ ಮುಂಭಾಗಕ್ಕೆ ತರಲು ಭರವಸೆ ನೀಡಿದ ಬಳಿಕ ಪ್ರತಿಭಟನೆ ಹಿಂತೆಗೆದುಕೊಳ್ಳಲಾಯಿತು.

ಘಟನೆಯ ನಂತರ ಬಣಕಲ್ ಪೊಲೀಸ್ ಠಾಣೆ ಮತ್ತು ಸುತ್ತಮುತ್ತ ಭಾರಿ ಪೊಲೀಸ್ ಬಲವನ್ನು ನಿಯೋಜಿಸಲಾಗಿತ್ತು.

ಏನಿದು ಪ್ರಕರಣ ? : ಬಣಕಲ್ ಹೋಬಳಿ ಚೇಗು ಗ್ರಾಮದ ಯುವತಿಯನ್ನು ಸಬ್ಬೇನಹಳ್ಳಿ ಸಮೀಪದ ತುಂಬರಗಂಡಿ ಗ್ರಾಮದ ಯುವಕನಿಗೆ 2 ವರ್ಷಗಳ ಹಿಂದೆ ವಿವಾಹ ಮಾಡಿಕೊಡಲಾಗಿತ್ತು,   ವಿವಾಹಿತ ಮಹಿಳೆ ಈಗ್ಗೆ ಮೂರು ತಿಂಗಳ ಹಿಂದೆ ಮೂಡಿಗೆರೆ ಪಟ್ಟಣದ ಗಂಗನಮಕ್ಕಿ ಕಾಫಿ ಆಫೀಸ್ ಒಂಡಕ್ಕೆ   ಕೆಲಸಕ್ಕೆ ಸೇರಿದ್ದು, ಅಲ್ಲಿ ಆಶೀಕ್ ಎಂಬ ಯುವಕನ ಪರಿಚಯವಾಗಿದೆ ಎನ್ನಲಾಗಿದೆ. ಈ ಆಶಿಕ್ ಮೂಲತಃ ಕೇರಳ ಮೂಲದವನು ಎಂದು ತಿಳಿದುಬಂದಿದ್ದು, ಮೂಡಿಗೆರೆಯಲ್ಲಿ ಕಾಫಿ ಆಫೀಸ್ ಗಳಲ್ಲಿ ಸಹಾಯಕನಾಗಿ ಕೆಲಸ ಮಾಡುತ್ತಿದ್ದ ಎನ್ನಲಾಗಿದೆ.

ಆಶಿಕ್ ವಿವಾಹಿತ ಮಹಿಳೆಯನ್ನು ಪ್ರೇಮದ ಬಲೆಗೆ ಬೀಳಿಸಿ ಆಕೆಯನ್ನು ಕರೆದುಕೊಂಡು ಕೇರಳದಲ್ಲಿ ತಲೆಮರೆಸಿಕೊಂಡಿದ್ದ. ಇದೀಗ ವಿವಾಹಿತ ಮಹಿಳೆಯ ಪತಿ ನೀಡಿದ ದೂರಿನ ಮೇರೆಗೆ ಇಬ್ಬರನ್ನು ಕೇರಳದಿಂದ ಕರೆತಂದಿದ್ದಾರೆ.

 

ಇದೀಗ ವಿವಾಹಿತ ಮಹಿಳೆ ತಾನು ಗಂಡನ ಮನೆಗೆ ಅಥವಾ ತವರು ಮನೆಗೆ ಹೋಗಲು ಹಿಂದೇಟು ಹಾಕುತ್ತಿದ್ದು, ಸದ್ಯ ಆಕೆಯನ್ನು ಮಹಿಳಾ ಸಾಂತ್ವಾನ ಕೇಂದ್ರದಲ್ಲಿ ಇರಿಸಲಾಗಿದೆ ಎಂದು ಮಾಹಿತಿ ಲಭ್ಯವಾಗಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ