ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ತಡರಾತ್ರಿ ವಿಧಿವಶರಾಗಿದ್ದಾರೆ.
ಸ್ವಾಮೀಜಿಗಳ ಅಂತಿಮ ದರ್ಶನವನ್ನು ಇಂದು (ಶನಿವಾರ) ಬೆಂಗಳೂರಿನ ಕೆಂಗೇರಿ ಶ್ರೀಮಠದ ಆವರಣದಲ್ಲೇ ಏರ್ಪಡಿಸಲಾಗಿದೆ. ಮಧ್ಯಾಹ್ನ 3 ಗಂಟೆ ವೇಳೆಗೆ ಧಾರ್ಮಿಕ ಮುಖಂಡರು, ಪೀಠಾಧ್ಯಕ್ಷರ ನೇತೃತ್ವದಲ್ಲಿ ಭೈರವೈಕ್ಯರಾದ ಶ್ರೀಗಳ ಅಂತಿಮ ವಿಧಿ ವಿಧಾನಗಳು ನೆರವೇರಲಿವೆ.
ಶ್ರೀಗಳ ಉತ್ತರಾಧಿಕಾರಿಗಳಾದ ನಿಶ್ಚಲಾನಂದನಾಥ ಸ್ವಾಮೀಜಿ ಅವರು ಅಂತ್ಯ ಸಂಸ್ಕಾರದ ವಿಧಿ ವಿಧಾನಗಳನ್ನ ನೇರವೇರಿಸಲಿದ್ದಾರೆ.

ಶ್ರೀಗಳು ಶ್ರೀಮಠದ ಸ್ಥಾಪನೆ ಮಾಡಿ ಶಿಕ್ಷಣ ಕ್ಷೇತ್ರ, ಆಧ್ಯಾತ್ಮಿಕ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದರು. ಶ್ರೀಗಳು ಇತ್ತೀಚೆಗೆ ಕೆಲ ಸಮಯದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು.



