comment 2

 

 

ಜೈನ ಧರ್ಮದ ಹೆಣ್ಣು ಮಕ್ಕಳ ಬಗ್ಗೆ ಅವಹೇಳನಕಾರಿ ಪೋಸ್ಟ್‌ ಮಾಡಿದ್ದಕ್ಕೆ ಯುವಕನೊಬ್ಬ ಜೈಲುಪಾಲಾಗಿದ್ದಾನೆ.

ಧರ್ಮಸ್ಥಳದಲ್ಲಿ ಅನಾಮಿಕನೊಬ್ಬ ನೂರಾರು ಹೆಣ ಹೂತಿಟ್ಟಿದ್ದೇನೆ ಎಂಬ ಹೇಳಿಕೆ ಮತ್ತು ಆ ನಂತರ ನಡೆಯುತ್ತಿರುವ ಬೆಳವಣಿಗೆ ಪ್ರಕರಣಕ್ಕೆ   ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣ ಇನ್ಸ್ಟಾಗ್ರಾಂ ನಲ್ಲಿ ಬಂದಿದ್ದ ಒಂದು ಪೋಸ್ಟ್‌ಗೆ ಅಜ್ಜಂಪುರ ತಾಲೂಕಿನ ಯುವಕ ಉಮೇಶ್ ಗೌಡ ಆಗಸ್ಟ್‌ 2 ರಂದು ಅಶ್ಲೀಲವಾಗಿ ಕಮೆಂಟ್ ಮಾಡಿದ್ದ.

ಉಮೇಶ್ ಗೌಡ್ಲಾರ್ ಇನ್ಸ್ಟಾಗ್ರಾಮ್ ಪೇಜ್ ನಲ್ಲಿ ಜೈನ ಸಮಾಜದ ಹೆಣ್ಣು ಮಕ್ಕಳ ಕುರಿತು ಅಶ್ಲೀಲ ಕಾಮೆಂಟ್ ಹಾಕಿದ್ದನು. ಈ ಬಗ್ಗೆ ಕಳಸ ಮೂಲದ ಪದ್ಮರಾಜಯ್ಯ ಎಂಬುವರು ಉಮೇಶ್ ವಿರುದ್ಧ ದೂರು ನೀಡಿದ್ದರು. ಈ ದೂರಿನ ಆಧಾರದ ಮೇಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಅವಹೇಳನಕಾರಿ ಕಮೆಂಟ್ ಹಾಕಿದ್ದ ವ್ಯಕ್ತಿಯನ್ನು ಪತ್ತೆಹಚ್ಚಿದ್ದಾರೆ.

ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರದ ಉಮೇಶ್ ಎಂಬಾತ ಈ ರೀತಿ ಕಮೆಂಟ್ ಹಾಕಿದ್ದು, ಅಜ್ಜಂಪುರ ಪೊಲೀಸರು ಉಮೇಶ್ ವಿರುದ್ಧ ಎಫ್ಐಆರ್ ದಾಖಲಿಸಿ ಆತನನ್ನು ಬಂಧಿಸಿದ್ದಾರೆ. ನ್ಯಾಯಾಲಯವರು ಉಮೇಶ್ ನನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ