ತೋಟಗಾರಿಕಾ ಮಹಾವಿದ್ಯಾಲಯ ಮೂಡಿಗೆರೆ ಇಲ್ಲಿನ ರಾಷ್ಟ್ರೀಯ ಸೇವಾ ಯೋಜನೆ (ಎನ್ಎಸ್ಎಸ್) ಅಡಿಯಲ್ಲಿ ತಾಲ್ಲೂಕಿನ ದಾರದಹಳ್ಳಿಯಲ್ಲಿ ಇತ್ತೀಚೆಗೆ ವಾರ್ಷಿಕ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು.
ದಾರದಹಳ್ಳಿ ಪ್ರೌಢಶಾಲಾ ಆವರಣದಲ್ಲಿ ಹಮ್ಮಿಕೊಂಡಿದ್ದ ಶಿಬಿರದಲ್ಲಿ ಒಂದು ದಿನ ಮೂಡಿಗೆರೆ ರೋಟರಿ ಸಂಸ್ಥೆ ವತಿಯಿಂದ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ಮತ್ತು ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಸಂಪನ್ಮೂಲ ವ್ಯಕ್ತಿಯಾಗಿ ತರಬೇತುದಾರ ದೀಪಕ್ ದೊಡ್ಡಯ್ಯ ಅವರು ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಿದರು.
ಈ ಸಂದರ್ಭದಲ್ಲಿ ಮೂಡಿಗೆರೆ ರೋಟರಿ ಸಂಸ್ಥೆ ಅಧ್ಯಕ್ಷ ಹೆಚ್.ಎನ್. ಪ್ರಸಾದ್, ದಿನೇಶ್ ಬಿ.ಕೆ., ಸ್ಥಳೀಯ ರೈತ ಮುಖಂಡ ಪುಟ್ಟಸ್ವಾಮಿಗೌಡ, ಶಿಬಿರದ ಅಧಿಕಾರಿಗಳು, ಪ್ರಾಧ್ಯಾಪಕರು, ಗ್ರಾಮಸ್ಥರು ಉಪಸ್ಥಿತರಿದ್ದರು.



