ಮೂಡಿಗೆರೆ ರೋಟರಿ ಸಂಸ್ಥೆ ವತಿಯಿಂದ ಪಟ್ಟಣದ ಬಾಲಕರ ಪದವಿಪೂರ್ವ ಕಾಲೇಜು ಪ್ರೌಢಶಾಲೆ ವಿಭಾಗದಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ರೋಟರಿ ಮಾಜಿ ಜಿಲ್ಲಾ ರಾಜ್ಯಪಾಲರಾದ ಡಿ.ಎಸ್. ರವಿಯವರು ಮಾತನಾಡಿ ವಿದ್ಯಾರ್ಥಿಗಳು ಸ್ವಚ್ಚತೆಗೆ ಆದ್ಯತೆ ನೀಡಬೇಕು. ನಮ್ಮ ಅನೇಕ ಆರೋಗ್ಯ ಸಮಸ್ಯೆಗಳಿಗೆ ಸ್ವಚ್ಚತೆಯ ಕೊರತೆ ಕಾರಣವಾಗಿದೆ. ಇದರಿಂದ ಅನೇಕ ಸಾಂಕ್ರಾಮಿಕ ರೋಗಗಳು ಹರಡುತ್ತಿವೆ, ಈ ಬಗ್ಗೆ ನಾವೆಲ್ಲಾ ಎಚ್ಚರದಿಂದ ಇರಬೇಕು ಎಂದರು.

ರೋಟರಿ ಮಾಜಿ ಅಧ್ಯಕ್ಷ ಡಾ. ಎನ್.ಕೆ. ಪ್ರದೀಪ್ ಅವರು ಮಾತನಾಡಿ ವೈಯುಕ್ತಿಕ ಮತ್ತು ಪರಿಸರದ ಸ್ವಚ್ಚತೆ ಬಹುಮುಖ್ಯವಾಗಿದೆ. ಪರಿಸರ ಹಾನಿಯಿಂದ ಅನೇಕ ಸಮಸ್ಯೆಗಳು ಎದುರಾಗಿವೆ. ಆರೋಗ್ಯವೇ ಭಾಗ್ಯ ಎಂಬ ನಮ್ಮ ಹಿರಿಯರ ಅನುಭವವನ್ನು ನಾವೆಲ್ಲಾ ಅರಿತುಕೊಂಡು ಬಾಳಬೇಕು ಎಂದರು.
ಮೂಡಿಗೆರೆ ರೋಟರಿ ಅಧ್ಯಕ್ಷ ಹೆಚ್.ಎನ್. ಪ್ರಸಾದ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಾಜಿ ಅಧ್ಯಕ್ಷ ನರೇಂದ್ರ ಶೆಟ್ಟಿ, ಅಬ್ರಾರ್ ಅಹಮ್ಮದ್ ಸೇರಿದಂತೆ ರೋಟರಿ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕರು, ಶಿಕ್ಷಕರ ವೃಂದದವರು ಉಪಸ್ಥಿತರಿದ್ದರು.



