ಚಿಕ್ಕಮಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಮುಂದುವರಿದಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆಯೂ ಅಂಗನವಾಡಿ,ಪ್ರಾಥಮಿಕ ,ಪ್ರೌಢ ಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಚಿಕ್ಕಮಗಳೂರು ಜಿಲ್ಲೆಯ ಆಯ್ದ ತಾಲ್ಲೂಕುಗಳಿಗೆ ನಾಳೆ(19-8-2025, ಮಂಗಳವಾರ) ರಜೆ ಘೋಷಣೆ ಮಾಡಲಾಗಿದೆ. ಜಿಲ್ಲೆಯ ಕಳಸ, ಮೂಡಿಗೆರೆ, ಶೃಂಗೇರಿ, ಕೊಪ್ಪ, NR ಪುರ ತಾಲೂಕು ವ್ಯಾಪ್ತಿಯಲ್ಲಿ ಸಂಪೂರ್ಣ ಮತ್ತು ಚಿಕ್ಕಮಗಳೂರು ತಾಲ್ಲೂಕಿನ ಆವತಿ, ಜಾಗರ, ವಸ್ತಾರೆ, ಆಲ್ದೂರು, ಖಾಂಡ್ಯ ಹೋಬಳಿ, ತರೀಕೆರೆ ತಾಲ್ಲೂಕಿನ ಲಿಂಗದಹಳ್ಳಿ ಮತ್ತು ಲಕ್ಕವಳ್ಳಿ ಹೋಬಳಿಗಳ ವ್ಯಾಪ್ತಿಯಲ್ಲಿ ಅಂಗನವಾಡಿ, ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ ಮಾಡಲಾಗಿದೆ.
ಕಳೆದ ಮೂರು ದಿನಗಳಿಂದ ಜಿಲ್ಲೆಯ ಮಲೆನಾಡು ಭಾಗದಲ್ಲಿ ವ್ಯಾಪಕವಾದ ಮಳೆಯಾಗುತ್ತಿದೆ. ಮಳೆಯ ಜೊತೆಗೆ ಗಾಳಿಯೂ ಬೀಸುತ್ತಿದೆ. ಹವಾಮಾನ ಇಲಾಖೆ ಇನ್ನೂ ಎರಡು ದಿನ ಅಧಿಕ ಮಳೆಯ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ಮಂಗಳವಾರ ಒಂದು ದಿನಕ್ಕೆ ಸೀಮಿತವಾಗುವಂತೆ ರಜೆ ಘೋಷಣೆ ಮಾಡಿ ಚಿಕ್ಕಮಗಳೂರು ಜಿಲ್ಲಾಧಿಕಾರಿ ಮೀನಾ ನಾಗರಾಜ್ ಆದೇಶ ಹೊರಡಿಸಿದ್ದಾರೆ.



