kole 3

 

 

ಕುಡಿದ ಮತ್ತಿನಲ್ಲಿ ಮಗನೇ ತಂದೆಯನ್ನ ಚಾಕುವಿನಿಂದ ಇರಿದು ಕೊಲೆ ಮಾಡಿರುವ ಘಟನೆ ಚಿಕ್ಕಮಗಳೂರು ತಾಲೂಕಿನ ಆಲ್ದೂರು ಸಮೀಪದ ಗುಪ್ತಶೆಟ್ಟಿಹಳ್ಳಿಯಲ್ಲಿ ನಡೆದಿದೆ.

ಗುಪ್ತಶೆಟ್ಟಿಹಳ್ಳಿ ಗ್ರಾಮದ ಮಂಜುನಾಥ್ (51) ಮಗನಿಂದಲೇ ಕೊಲೆಯಾದ ದುರ್ದೈವಿ, ರಂಜನ್ (21) ಕೊಲೆಗೈದ ಆರೋಪಿಯಾಗಿದ್ದಾನೆ.

ಪೋಷಕರ ನಡುವೆ ನಡೆದ ಗಲಾಟೆಯ ವೇಳೆ ಆರೋಪಿ ಈ ಕೃತ್ಯ ಎಸಗಿದ್ದಾನೆ. ಬಳಿಕ ಸದ್ದಿಲ್ಲದೇ ತಂದೆಯ ಅಂತ್ಯಸಂಸ್ಕಾರಕ್ಕೆ ಮುಂದಾಗಿದ್ದ ಎಂದು ತಿಳಿದು ಬಂದಿದೆ.

ಆರೋಪಿ ರಂಜನ್‌ ಆಗಸ್ಟ್ 16ರ ಸಂಜೆ ಆಲ್ದೂರಿಗೆ ಹೋಗಿ ಸಂತೆ ಮುಗಿಸಿಕೊಂಡು, ಮಧ್ಯಪಾನ ಮಾಡಿ ಮನೆಗೆ ಬಂದಿದ್ದ. ಈ ವೇಳೆ ತಂದೆ-ತಾಯಿ ನಡುವೆ ಯಾವುದೋ ಕಾರಣಕ್ಕೆ ಜಗಳ ನಡೆದಿದೆ. ಜಗಳ ಬಿಡಿಸಲು ಹೋದ ರಂಜನ್ ಕುಡಿದ ಮತ್ತಿನಲ್ಲಿ ತಂದೆಗೆ ಹಿಂದಿನಿಂದ ಚಾಕು ಇರಿದ್ದಿದ್ದಾನೆ. ಕೊನೆಗೆ ಜಗಳ ಬಿಡಿಸಿದ ತಾಯಿ ಚಾಕುವಿನಿಂದ ಆದ ಗಾಯಕ್ಕೆ ಅರಿಶಿನ ಪುಡಿ ಹಚ್ಚಿ ಮಲಗಿಸಿದ್ದಾರೆ. ರಾತ್ರಿ ರಕ್ತಸ್ರಾವ ಹೆಚ್ಚಾಗಿ ಮಂಜುನಾಥ್ ಮಲಗಿದಲ್ಲೇ ಕೊನೆಯುಸಿರೆಳೆದಿದ್ದಾರೆ.

ತಂದೆಯ ಪ್ರಾಣ ಪಕ್ಷಿ ಹಾರಿಹೋಗುತ್ತಿದ್ದಂತೆ ರಂಜನ್ ಒಬ್ಬೊಬ್ಬರ ಬಳಿ ಒಂದೊಂದು ಕಥೆ ಕಟ್ಟಿದ್ದಾನೆ. ತಂದೆ-ತಾಯಿ ಜಗಳದಲ್ಲಿ ನಾನು ಬಿಡಿಸುವ ವೇಳೆ ತಂದೆಗೆ ಮಚ್ಚು ತಾಗಿ ಗಾಯವಾಗಿ ತೀರಿಕೊಂಡ್ರು ಎಂದು ಕೆಲವರ ಬಳಿ ಹೇಳಿದ್ದನಂತೆ. ಇನ್ನೂ ಕೆಲವರ ಬಳಿ ತಂದೆ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ ಎಂದು ಕತೆ ಕಟ್ಟಿದ್ದ. ಆರೋಪಿಯ ಕಥೆ ಕೇಳಿದ್ದವರು ನಿಜವೆಂದು ಮಂಜುನಾಥ್ ಶವ ಸಂಸ್ಕಾರಕ್ಕೆ ತಯಾರಿ ಮಾಡಿಕೊಂಡಿದ್ದರು.

ತಮಗೆ ಬಂದ ಮಾಹಿತಿ ಆದರಿಸಿ   ಆಲ್ದೂರು ಪೊಲೀಸರು, ಅನುಮಾನದ ಮೇಲೆ ಮಗನನ್ನು ವಿಚಾರಣೆ ನಡೆಸಿದಾಗ ಗುಟ್ಟು ರಟ್ಟಾಗಿದೆ. ಪೊಲೀಸರು ಆರೋಪಿಯನ್ನು ಬಂಧಿಸಿ, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ