ಸೌಜನ್ಯ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.
ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದಕ್ಕೆಅವರ ವಿರುದ್ಧ ಪ್ರಕರಣ ದಾಖಲಾಗಿತ್ತು. ಎರಡು ಬಾರಿ ನೋಟೀಸ್ ಕೊಟ್ಟರು ಠಾಣೆಗೆ ಹಾಜರಾಗದ ಕಾರಣದ ಗುರುವಾರ ಉಡುಪಿಯ ಬ್ರಹ್ಮಾವರ ಪೊಲೀಸರು ಉಜಿರೆಗೆ ತೆರಳಿ ಅವರ ನಿವಾಸದಿಂದ ತಿಮರೋಡಿಯನ್ನು ಬಂದಿಸಿದ್ದರು.
ಮಧ್ಯಾಹ್ನ ಮೆಡಿಕಲ್ ಪರೀಕ್ಷೆ ನಡೆಸಿ ಬ್ರಹ್ಮಾವರ ತಾಲೂಕು ಕೋರ್ಟ್‌ಗೆ ಹಾಜರು ಪಡಿಸಿದರು. ಈ ಸಂದರ್ಭದಲ್ಲಿ ತಿಮರೋಡಿ ಪರ ವಕೀಲರು ಸಲ್ಲಿಸಿದ ಜಾಮೀನು ಅರ್ಜಿಯ ವಿಚಾರಣೆ ನಡೆಯಿತು. ಜಾಮೀನು ನೀಡಲು ನಿರಾಕರಿಸಿದ ಕೋರ್ಟ್ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.
ಕೋರ್ಟ್ ಆದೇಶದ ಹಿನ್ನೆಲೆ ಮಹೇಶ್ ತಿಮರೋಡಿ ಈಗ ಹಿರಿಯಡ್ಕ ಸಬ್ ಜೈಲು ಸೇರಿದ್ದಾರೆ. ಮಹೇಶ್ ಶೆಟ್ಟಿಯ ಜಾಮೀನು ಅರ್ಜಿಯ ವಿಚಾರಣೆ ಅಗಸ್ಟ್ 23ಕ್ಕೆ ನಡೆಯಲಿದೆ.


