prema 33

 

 

ಆಗಸ್ಟ್ 22ರಂದು ಮಂತ್ರಾಲಯದಲ್ಲಿ ನಡೆದ ಅಂತರಾಜ್ಯ ಕನ್ನಡ ಸಾಹಿತ್ಯ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ನೆರವೇರಿತು.

ಆಂದ್ರಪ್ರದೇಶ, ತೆಲಂಗಾಣ, ಮಹಾರಾಷ್ಟ್ರ, ಗೋವಾ ಗಡಿನಾಡ ಜಿಲ್ಲೆಗಳು ಹಾಗೂ ಚಿಕ್ಕಮಗಳೂರು ಕಸಾಪ ಜಿಲ್ಲಾ ಘಟಕಗಳು ಒಳಗೊಂಡಂತೆ ಕ.ಸಾ.ಪ. ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಷಿ ಅವರ ನೇತೃತ್ವದಲ್ಲಿ ಈ ಸಮ್ಮೇಳನ ಅದ್ದೂರಿಯಾಗಿ ನೆರವೇರಿತು.

ಸಮ್ಮೇಳನದಲ್ಲಿ ಮೂಡಿಗೆರೆ ತಾಲ್ಲೂಕು ಜಾಣಿಗೆ ಗ್ರಾಮದ ಕವಯಿತ್ರಿ ಶ್ರೀಮತಿ ಪ್ರೇಮಾ ಪುಣ್ಯಮೂರ್ತಿಯವರ ಕವನ ಸಂಕಲನ ಬಿಡುಗಡೆ ಮಾಡಲಾಯಿತು. ಪ್ರೇಮ ಪುಣ್ಯಮೂರ್ತಿಯವರ ಚೊಚ್ಚಲ ಕವನ ಸಂಕಲನ ‘ಮನೆಮನದ ಮಾತು’ ಎಂಬು ಕವನ ಸಂಕಲವನ್ನು ಸಮ್ಮೇಳನದಲ್ಲಿ ಬಿಡುಗಡೆ ಮಾಡಲಾಯಿತು.

ಡಾ. ಪ್ರದೀಪ್‌ಕುಮಾರ್ ಹೆಬ್ರಿ ಸಮ್ಮೇಳನದ ಅಧ್ಯಕ್ಷರಾಗಿದ್ದರು. ಮಂತ್ರಾಲಯ ಪೀಠದ ಶ್ರೀ ಸುಭುದೇಂದ್ರ ತೀರ್ಥರು ದಿವ್ಯ ಸಾನಿಧ್ಯ ವಹಿಸಿದ್ದರು. ಭುವನೇಶ್ವರಿ ಭಾವಚಿತ್ರ ಅನಾವರಣವನ್ನು ನಾಡೋಜ ಡಾ.ಮಹೇಶ್‌ಜೋಷಿ ಅವರು ನೆರವೇರಿಸಿದರು. ಚಿಕ್ಕಮಗಳೂರು ಜಿಲ್ಲಾ ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್  ಆಶಯ ನುಡಿಗಳನ್ನಾಡಿದರು.

ಗಡಿನಾಡು ಕನ್ನಡಿಗರ ಕೊಡುಗೆ, ಕುಮಾರವ್ಯಾಸ ಕಥಾ ಪ್ರಸಂಗದ ಗಮಕ ಗೋಷ್ಟಿ, ಬಹುಭಾಷಾ ಕವಿಗೋಷ್ಠಿ ಏರ್ಪಡಿಸಲಾಗಿತ್ತು.  ಸಮಾರೋಪ ಸಮಾರಂಭದಲ್ಲಿ ಡಾ. ಅರುಣ್ ಯೋಗಿರಾಜ್ ಅವರನ್ನು ಸನ್ಮಾನಿಸಲಾಯಿತು.

ವಿವಿಧ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ 5 ರಾಜ್ಯಗಳ ಸಾಧಕರನ್ನು ಗುರುತಿಸಿ ಕನ್ನಡ ಸಿರಿ ಪ್ರಶಸ್ತಿ ಪ್ರದಾನ ಮಾಡಲಾಯಿತು. ಮೂವರು ಸಾಹಿತಿಗಳಿಗೆ ಸಾಹಿತ್ಯ ಸಿರಿ ಪ್ರಶಸ್ತಿ ನೀಡಿ ಗೌರವಿಸಲಾಯಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ