helmet 3

 

 

ಮೂಡಿಗೆರೆ ಅಡ್ಯಂತಾಯ ರಂಗಮಂದಿರದಲ್ಲಿ ಸಾರ್ವಜನಿಕ ಹಿಂದೂ ಮಹಾಸಭಾ ಗಣಪತಿ ಸೇವಾ ಸಮಿತಿಯಿಂದ ಶ್ರೀ ಮಹಾಗಣಪತಿಯನ್ನು ಪ್ರತಿಷ್ಟಾಪನೆ ಮಾಡಲಾಯಿತು. ನೂರಾರು ಭಕ್ತ ಸಮ್ಮುಖದಲ್ಲಿ ಶ್ರೀ ಮಹಾಗಣಪತಿಯನ್ನು ಶಾಸ್ತ್ರೋಕ್ತವಾಗಿ ಪ್ರತಿಷ್ಟಾಪನೆ ಮಾಡಲಾಯಿತು.

ಇದೇ ಸಂದರ್ಭದಲ್ಲಿ ಮೂಡಿಗೆರೆ ಸೀನಿಯರ್ ಛೇಂಬರ್ ಇಂಟರ್ ನ್ಯಾಷನಲ್ ಸಂಸ್ಥೆ ವತಿಯಿಂದ ಹೆಲ್ಮೆಟ್ ಜಾಗೃತಿ ಸೀಟ್ ಬಿಲ್ಟ್ ಧರಿಸಲು ಜಾಗೃತಿ ಹಾಗೂ ಅಪ್ರಾಪ್ತ ವಯಸ್ಸಿನ ಮಕ್ಕಳ ವಾಹನ ಚಾಲನೆಯ ಬಗ್ಗೆ ಜಾಗೃತಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.

ಹೆಲ್ಮೆಟ್ ಜಾಗೃತಿ ಸೀಟ್ ಬಿಲ್ಟ್ ಧರಿಸಲು ಜಾಗೃತಿ ಹಾಗೂ ಅಪ್ರಾಪ್ತ ವಯಸ್ಸಿನ ಮಕ್ಕಳ ವಾಹನ ಚಾಲನೆಯ ಬಗ್ಗೆ ಜಾಗೃತಿ ಮೂಡಿಸುವ ಬ್ಯಾನರ್ ಗಳನ್ನು ಈ ಸಂದರ್ಭದಲ್ಲಿ ಅನಾವರಣಗೊಳಿಸಲಾಯಿತು.

ಈ ಸಂದರ್ಭದಲ್ಲಿ ಸೀನಿಯರ್ ಚೇಂಬರ್ ನ, ಅಧ್ಯಕ್ಷರಾದ ಡಾ|| ರಾಮಚರಣ್ ಅಡ್ಯಂತಾಯ ಮತ್ತು ಮೂಡಿಗೆರೆ ಪೊಲೀಸ್ ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ ಮತ್ತು ಹಿಂದೂ ಮಹಾಸಭಾ ಗಣಪತಿ ಅಧ್ಯಕ್ಷರಾದ ಅನೂಪ್ ಕುಮಾರ್ (ಪುಟ್ಟಣ್ಣ ) ಹಾಗೆ ಸಮಿತಿಯ ಸದಸ್ಯರುಗಳು ಹಾಗೂ ಸೀನಿಯರ್ ಚೇಂಬರ್ ನ ಸದಸ್ಯರು ಉಪಸ್ಥಿತರಿದ್ದರು.

ಠಾಣಾಧಿಕಾರಿ ಶ್ರೀನಾಥ್ ರೆಡ್ಡಿ ಈ ಸಂದರ್ಭದಲ್ಲಿ ಮಾತನಾಡಿ ದ್ವಿಚಕ್ರ ವಾಹನ ಸವಾರರು ಕಡ್ಡಾಯವಾಗಿ ಹೆಲ್ಮೆಟ್ ಧರಿಸಿ ವಾಹನವನ್ನು ಚಲಾವಣೆ ಮಾಡುವಂತೆ,  ನಾಲ್ಕು ಚಕ್ರ ವಾಹನ ಚಾಲಕರು ಕಡ್ಡಾಯವಾಗಿ ಸೀಟ್ ಬೆಲ್ಟ್ ಧರಿಸಿ ವಾಹನ ಚಲಾವಣೆ ಮಾಡಬೇಕೆಂದು ಕರೆ ನೀಡಿದರು. ಹಾಗೆಯೇ ಅಪ್ರಾಪ್ತ ವಯಸ್ಸಿನ ಮಕ್ಕಳು ಇತ್ತೀಚಿನ ದಿನಗಳಲ್ಲಿ ವಾಹನ ಚಾಲನೆ ಮಾಡುವ ಪ್ರಕರಣಗಳು ಹೆಚ್ಚಾಗಿದ್ದು ಪೋಷಕರು ಅಪ್ರಾಪ್ತ ಮಕ್ಕಳಿಗೆ ವಾಹನ ಚಾಲನೆಗೆ ಅವಕಾಶ ನೀಡಬಾರದು ಎಂದು ತಿಳಿಸಿದರು. ಸೀನಿಯರ್ ಛೇಂಬರ್ ಕಾರ್ಯದರ್ಶಿ ಬಿ.ಎನ್. ಮನಮೋಹನ್ ವoದಿಸಿದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ