fine2

 

 

ಮದ್ಯಪಾನ ಮಾಡಿ ಚಾಲನೆ ಆರೋಪದಲ್ಲಿ ಕಾರು ಚಾಲಕರೋರ್ವರಿಗೆ ಮೂಡಿಗೆರೆ ನ್ಯಾಯಾಲಯ ರೂ. 13,500  ದಂಡ ಹಾಕಿದೆ. ಗೋಣಿಬೀಡು ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣವೊಂದರಲ್ಲಿ ನ್ಯಾಯಾಲಯ ಈ ದಂಡ ವಿಧಿಸಿದೆ.

ದಿನಾಂಕ 16/08/2025 ರಂದು ರಾತ್ರಿ ಪಿ ಎಸ್ ಐ ಹರ್ಷವರ್ಧನ್ ಗೋಣಿಬೀಡು ಪೊಲೀಸ್ ಠಾಣೆ ರವರು ರಾತ್ರಿ ಗಸ್ತಿನಲ್ಲಿದ್ದ ಸಂದರ್ಭದಲ್ಲಿ ಜನ್ನಾಪುರ  ಸರ್ಕಲ್ ನಲ್ಲಿ ವಾಹನ ತಪಾಸಣೆ ಮಾಡುತ್ತಿರುವಾಗ ಬೆಂಗಳೂರಿಂದ ಧರ್ಮಸ್ಥಳ ಕಡೆಗೆ ತೆರಳುತ್ತಿದ್ದ ಕೆ ಎ 02 ಎಂಟಿ 4073 ವಾಹನದ ಚಾಲಕ ನನ್ನು ನಿಲ್ಲಿಸಿ ತಪಾಸಣೆ ಮಾಡಿದಾಗ ವಾಹನ ಚಾಲನೆ ಮಾಡುತ್ತಿದ್ದ ಚಾಲಕ ಜೀವನ ಎಂಬುವವರು ಮದ್ಯಪಾನ ಮಾಡಿ ಚಾಲನೆ ಮಾಡುತ್ತಿದ್ದುದು ತಪಾಸಣೆಯಿಂದ ತಿಳಿದುಬಂದಿತ್ತು. ಅಲ್ಲದೇ ಅವರು ಡ್ರೈವಿಂಗ್ ಲೆಸೆನ್ಸ್ ಇಲ್ಲದೇ ಚಾಲನೆ ಮಾಡುತ್ತಿದ್ದರು.  ಜೀವನ ರವರ ಮೇಲೆ ಪ್ರಕರಣ ದಾಖಲಿಸಿ ಮೂಡಿಗೆರೆಯ ಸೀನಿಯರ್ ಸಿವಿಲ್ ನ್ಯಾಯಾಲಯಕ್ಕೇ ದೋಷಾರೋಪಣಾ ಪತ್ರವನ್ನು ಸಲ್ಲಿಸಲಾಗಿತ್ತು. ಪ್ರಕರಣದ ತ್ವರಿತ ವಿಚಾರಣೆ ನಡೆಸಿದ ಮಾನ್ಯ ನ್ಯಾಯಾಧೀಶರು 13500 ರೂ ಗಳ ದಂಡವನ್ನು ಹಾಕಿರುತ್ತಾರೆ.

ಇತ್ತೀಚಿನ ದಿನಗಳಲ್ಲಿ ಟ್ರಾಫಿಕ್ ನಿಯಮ ಉಲ್ಲಂಘನೆ, ನಿಯಮ ಬಾಹೀರ ಚಾಲನೆ ಪ್ರಕರಣಗಳಲ್ಲಿ ನ್ಯಾಯಾಲಯಗಳು ಹೆಚ್ಚಿನ ದಂಡ ವಿಧಿಸಿ ಸಾರ್ವಜನಿಕರನ್ನು ಎಚ್ಚರಿಸುವ ಕೆಲಸ ಮಾಡುತ್ತಿವೆ. ಈಗ್ಗೆ ಕೆಲ ತಿಂಗಳ ಹಿಂದೆ ಮೂಡಿಗೆರೆಯಲ್ಲಿ ಅಪ್ರಾಪ್ತ ಬಾಲಕ ಸ್ಕೂಟಿ ಚಾಲನೆ ಮಾಡುತ್ತಿದ್ದ ಪ್ರಕರಣದಲ್ಲಿ ರೂ. 25 ಸಾವಿರ ದಂಡ ವಿಧಿಸಲಾಗಿತ್ತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ