IMG-20250904-WA0475 (1)

 

 

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಸಂಸದ ಶ್ರೀ ಕೋಟ ಶ್ರೀನಿವಾಸ ಪೂಜಾರಿ ಅವರು ಮೂಡಿಗೆರೆ ತಾಲ್ಲೂಕು, ಬಣಕಲ್ ಹೋಬಳಿ ತ್ರಿಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಲರಹಳ್ಳಿಯಲ್ಲಿ ನೂತನವಾಗಿ ನಿರ್ಮಿಸಿರುವ ಬಿಎಸ್ಎನ್ಎಲ್ ಟವರ್ ಅನ್ನು ಅಧಿಕಾರಿಗಳೊಂದಿಗೆ ಗ್ರಾಮಸ್ಥರ ಸಮ್ಮುಖದಲ್ಲಿ ವೀಕ್ಷಣೆ ಮಾಡಿದರು.

ಟವರ್‌ನ ಕಾರ್ಯಕ್ಷಮತೆ ಹಾಗೂ ಗ್ರಾಮೀಣ ಪ್ರದೇಶದಲ್ಲಿ ಉತ್ತಮ ಸಂವಹನ ಸೇವೆ ಒದಗಿಸುವ ಕುರಿತು ಸಂಸದರು ಅಧಿಕಾರಿಗಳಿಂದ ಮಾಹಿತಿ ಪಡೆದು ತೃಪ್ತಿ ವ್ಯಕ್ತಪಡಿಸಿದರು.

ನಂತರ ನಡೆದ ಸಭೆಯಲ್ಲಿ ಗ್ರಾಮಸ್ಥರ ಕುಂದು ಕೊರತೆಗಳನ್ನು ಆಲಿಸಿ, ಅವುಗಳಿಗೆ ಸೂಕ್ತ ಪರಿಹಾರ ಒದಗಿಸುವ ಭರವಸೆ ನೀಡಿದರು. ಇದೇ ಸಂದರ್ಭದಲ್ಲಿ ಗ್ರಾಮಸ್ಥರು ಸಂಸದರಿಗೆ ಸನ್ಮಾನ ನೀಡಿ ಗೌರವಿಸಿದರು.

ಈ ಸಂದರ್ಭದಲ್ಲಿ ಮಂಡಲ ಬಿಜೆಪಿ ಅಧ್ಯಕ್ಷರಾದ ಟಿ.ಎಂ. ಗಜೇಂದ್ರ, ಬಣಕಲ್ ಹೋಬಳಿ ಅಧ್ಯಕ್ಷರಾದ ಯತೀಶ್ ಕೂಡಹಳ್ಳಿ, ಪ್ರಧಾನ ಕಾರ್ಯದರ್ಶಿಗಳಾದ ಶರತ್ ಫಲ್ಗುಣಿ ಮತ್ತು ಸಾಗರ್ ಹುಲ್ಲೇಮನೆ, ಮುಖಂಡರಾದ ದೀಪಕ್ ದೊಡ್ಡಯ್ಯ, ಜೆ.ಎಸ್. ರಘು, ಹೆಚ್.ಎಲ್. ಪ್ರಶಾಂತ್, ಬಿಎಸ್ಎನ್ಎಲ್ ಸಲಹಾ ಸಮಿತಿಯ ಸದಸ್ಯರಾದ ಚಮಿನ್ ಬೆಳಗೋಡು, ಎಂ.ಕೆ. ಸದಾಶಿವ, ದಿನೇಶ್ ಗುತ್ತಿಹಳ್ಳಿ, ರಘು ಪಟ್ಟದೂರು, ಬೂತ್ ಸಮಿತಿ ಅಧ್ಯಕ್ಷ ರಂಜಿತ್, ಬಿಎಸ್ಎನ್ಎಲ್ ಅಧಿಕಾರಿಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ