ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ವತಿಯಿಂದ ಸೆಪ್ಟೆಂಬರ್ 7 ರ ಭಾನುವಾರ ಮೈಸೂರಿನಲ್ಲಿ ಚಿಂತನ ಮಂಥನ ಸಭೆ ನಡೆಯಲಿದೆ ಎಂದು ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ನ ಸದಸ್ಯರಾದ ಬೀರೂರಿನ ಶ್ರೀನಿವಾಸ ಬಿ.ಎನ್ ಮತ್ತು ಕಡೂರಿನ ಲಕ್ಕಪ್ಪ ಅವರು ತಿಳಿಸಿದ್ದಾರೆ.
ಈ ಬಗ್ಗೆ ಜಂಟಿ ಪತ್ರಿಕಾ ಹೇಳಿಕೆ ನೀಡಿ ಮಾತನಾಡಿದ ಅವರು ಸಪ್ಟೆಂಬರ್ 7 ರಂದು ಮೈಸೂರಿನ ಸರಸ್ವತಿಪುರಂನಲ್ಲಿರುವ ಉಪ್ಪಾರ ವಿದ್ಯಾರ್ಥಿ ನಿಲಯದಲ್ಲಿ ಟ್ರಸ್ಟಿನ ಆಡಳಿತ ಮಂಡಳಿ ಸಭೆ ಮತ್ತು ಉಪ್ಪಾರ ಸಮಾಜದ ಬಂಧುಗಳೊಂದಿಗೆ ಚಿಂತನ ಮಂಥನ ಸಭೆ ನಡೆಯಲಿದೆ. ಮ್ಯಾನೇಜಿಂಗ್ ಟ್ರಸ್ಟಿಗಳಾದ ಪಿ.ಶಿವಶಂಕರ್ ಅವರ ಅಧ್ಯಕ್ಷತೆಯಲ್ಲಿ ಬೆಳಿಗ್ಗೆ 11 ಗಂಟೆಗೆ ಚಿಂತನಾ ಮಂಥನ ಸಭೆ ನಡೆಯಲಿದ್ದು ಮಧ್ಯಾಹ್ನ 2 ಗಂಟೆಗೆ ಟ್ರಸ್ಟಿನ ಸರ್ವ ಸದಸ್ಯರ ಸಭೆ ನಡೆಯಲಿದೆ. ಈ ಸಭೆಗೆ ಸಮಾಜ ಭಾಂದವರು ಭಾಗವಹಿಸಿ ಸಮಾಜದ ಏಳಿಗೆಯ ಕುರಿತ ಚಿಂತನ ಮಂಥನ ಸಭೆಯಲ್ಲಿ ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
ಭಗೀರಥ ಶೈಕ್ಷಣಿಕ ಮತ್ತು ಚಾರಿಟಬಲ್ ಟ್ರಸ್ಟ್ ಉಪ್ಪಾರ ಸಮಾಜದ ಶೈಕ್ಷಣಿಕ, ಸಾಮಾಜಿಕ, ಆರ್ಥಿಕ ಮತ್ತು ಔದ್ಯೋಗಿಕ ಏಳಿಗೆಗೆ ಕಂಕಣಬದ್ದವಾಗಿದ್ದು ಸಮಾಜದ ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವನ್ನು ನೀಡುತ್ತಾ ಬಂದಿದೆ. 2024-25ನೇ ಸಾಲಿನಲ್ಲಿ ವೈದ್ಯಕೀಯ, ಇಂಜಿನಿಯರಿಂಗ್, ಆರ್ಯುವೇದಿಕ್, ಕೃಷಿ, ತೋಟಗಾರಿಕೆ, ಭಿ ಫಾರ್ಮಾ, ಪ್ಯಾರಾಮೆಡಿಕಲ್, ಬಿ ಎಡ್, ಕಾನೂನು, ಸ್ನಾತಕೋತರ ಕೋರ್ಸ್ಗಳನ್ನು ವ್ಯಾಸಂಗ ಮಾಡುತ್ತಿರುವ ರಾಜ್ಯದ 4 ವಿವಿಧ ಜಿಲ್ಲೆಗಳಿಗೆ ಸೇರಿದ 128 ಪ್ರತಿಭಾವಂತ ಬಡ ವಿದ್ಯಾರ್ಥಿಗಳಿಗೆ ಸುಮಾರು ಇಪ್ಪತ್ಮೂರು ಲಕ್ಷ ಆರ್ಥಿಕ ನೆರವನ್ನು ನೀಡಲಾಗಿದೆ. ಸಮಾಜ ಭಾಂದವರ ಸರ್ವಾಂಗೀಣ ಅಭಿವೃದ್ದಿಗೆ ಪೂರಕವಾಗಿ ಸೆಪ್ಟೆಂಬರ್ 7 ರಂದು ನಡೆಯುವ ಸಭೆಯ ಕುರಿತ ಹೆಚ್ಚಿನ ಮಾಹಿತಿಗೆ 9844590624/9964125341 ಗೆ ಸಂರ್ಪಕಿಸಬಹುದು ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.



