IMG-20250907-WA0232

 

 

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕು – ದಕ್ಷಿಣ ಕನ್ನಡ ಗಡಿಭಾಗದ ಚಾರ್ಮಾಡಿ ಘಾಟಿಯಲ್ಲಿ ಭಾರೀ ಸರಣಿ ಅಪಘಾತ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 173ರಲ್ಲಿ ನಡೆದ ಈ ಅಪಘಾತದಲ್ಲಿ ಸಾರಿಗೆ ಬಸ್ ಹಾಗೂ ಎರಡು ಲಾರಿಗಳು ಪರಸ್ಪರ ಡಿಕ್ಕಿ ಹೊಡೆದುಕೊಂಡಿವೆ.
, KSRTC ಬಸ್ ಗ್ಯಾಸ್ ಸಿಲಿಂಡರ್ ಹೊತ್ತಿದ್ದ ಲಾರಿಗೆ ನೇರವಾಗಿ ಡಿಕ್ಕಿ ಹೊಡೆದಿದೆ. ತಕ್ಷಣವೇ ಹಿಂಬದಿಯಿಂದ ಮತ್ತೊಂದು ಲಾರಿ ಗ್ಯಾಸ್ ಲಾರಿಗೆ ಡಿಕ್ಕಿ ಹೊಡೆದ ಪರಿಣಾಮ ಅಪಘಾತ ತೀವ್ರಗೊಂಡಿದೆ. ಇದರಲ್ಲಿ ಸಾರಿಗೆ ಬಸ್ ಚಾಲಕ ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ಸಾಗಿಸಲಾಗಿದೆ.
ಅಪಘಾತದ ಪರಿಣಾಮವಾಗಿ ಚಾರ್ಮಾಡಿ ಘಾಟಿಯಲ್ಲಿ ಟ್ರಾಫಿಕ್ ಜಾಮ್ ಉಂಟಾಗಿತ್ತು ನೂರಾರು ವಾಹನಗಳು ಸಾಲುಗಟ್ಟಿ ನಿಂತಿದ್ದು, ಪ್ರಯಾಣಿಕರು ತೊಂದರೆ ಅನುಭವಿಸುವಂತಾಯಿತು.
ಘಟನೆಯ ಮಾಹಿತಿ ಪಡೆದು ತಕ್ಷಣ ಬಣಕಲ್ ಮತ್ತು ಬೆಳ್ತಂಗಡಿ ಠಾಣೆಯ ಪೊಲೀಸರು ಸ್ಥಳಕ್ಕೆ ಧಾವಿಸಿ ಸಂಚಾರ ನಿಯಂತ್ರಣ ಕಾರ್ಯ ಕೈಗೊಂಡಿದ್ದಾರೆ.. ಈ ಘಟನೆ ದಕ್ಷಿಣ ಕನ್ನಡ ಜಿಲ್ಲೆ ವ್ಯಾಪ್ತಿಯಾಗಿದ್ದು ಬೆಳ್ತಂಗಡಿ ಪೊಲೀಸ್ ಠಾಣಾ ಪ್ರಕರಣ ದಾಖಲಾಗಿದೆ

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ