asia 1

 

 

ಏಷ್ಯಾ ಕಪ್‌ ಟಿ20 ಕ್ರಿಕೆಟ್‌   ಇಂದಿನಿಂದ ಆರಂಭವಾಗಲಿದೆ. ಯುಎಇ (UAE) ದೇಶದ ದುಬೈ, ಅಬುಧಾಬಿ ಕ್ರೀಡಾಂಗಣದಲ್ಲಿ 20 ದಿನಗಳ ಕಾಲ 8 ದೇಶಗಳು ಒಟ್ಟು 19 ಪಂದ್ಯಗಳನ್ನು  ಆಡಲಿವೆ.

ಉದ್ಘಾಟನಾ ಪಂದ್ಯ ಅಫ್ಘಾನಿಸ್ತಾನ ಮತ್ತು ಹಾಂಕಾಂಗ್‌ ಮಧ್ಯೆ ನಡೆದರೆ ಸೆ.28ರಂದು ಫೈನಲ್‌ ಪಂದ್ಯ ನಡೆಯಲಿದೆ. ಹಾಲಿ ಚಾಂಪಿಯನ್‌ ಭಾರತ   ಬುಧವಾರ ಯುಎಇ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದೆ.

ತಂಡಗಳನ್ನು 2 ಗುಂಪುಗಳನ್ನಾಗಿ ವಿಂಗಡಿಸಲಾಗಿದ್ದು ಭಾರತ, ಪಾಕಿಸ್ತಾನ, ಯುಎಇ ಹಾಗೂ ಒಮಾನ್‌ ‘ಎ’ ಗುಂಪಿನಲ್ಲಿವೆ. ಅಫ್ಘಾನಿಸ್ತಾನ, ಬಾಂಗ್ಲಾದೇಶ, ಶ್ರೀಲಂಕಾ, ಹಾಂಕಾಂಗ್‌ ‘ಬಿ’ ಗುಂಪಿನಲ್ಲಿವೆ.

ಪ್ರತಿ ತಂಡಗಳು ಗುಂಪು ಹಂತದಲ್ಲಿ ಒಮ್ಮೆ ಪರಸ್ಪರ ಸೆಣಸಾಡಲಿವೆ. ಗುಂಪಿನ ಅಗ್ರ-2 ತಂಡಗಳು ಸೂಪರ್‌-4 ಹಂತ ಪ್ರವೇಶಿಸಲಿವೆ. ಸೂಪರ್‌-4ನಲ್ಲಿ ಅಗ್ರ-2 ಸ್ಥಾನ ಪಡೆದ ತಂಡಗಳು ಫೈನಲ್‌ಗೆ ಅರ್ಹತೆ ಪಡೆಯಲಿವೆ.

ಪ್ರತಿ 2 ವರ್ಷಕ್ಕೊಮ್ಮೆ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿ ನಡೆಯುತ್ತಿದ್ದು ಈವರೆಗೂ 16 ಬಾರಿ ಆಯೋಜನೆಗೊಂಡಿವೆ. ಈ ಪೈಕಿ ಭಾರತ 8 ಬಾರಿ ಟ್ರೋಫಿ ಗೆದ್ದರೆ 3 ಆವೃತ್ತಿಗಳಲ್ಲಿ ರನ್ನರ್‌-ಅಪ್‌ ಆಗಿದೆ. ಶ್ರೀಲಂಕಾ 6, ಪಾಕಿಸ್ತಾನ 2 ಬಾರಿ ಚಾಂಪಿಯನ್‌ ಪಟ್ಟ ಅಲಂಕರಿಸಿವೆ.

ಯುಎಇ-ಒಮಾನ್‌ (ಸಂಜೆ 5.30ಕ್ಕೆ) ಹೊರತುಪಡಿಸಿ ಉಳಿದೆಲ್ಲಾ ಪಂದ್ಯಗಳು ಭಾರತೀಯ ಕಾಲಮಾನ ರಾತ್ರಿ 8 ಗಂಟೆಗೆ ಆರಂಭವಾಗಲಿದೆ. ಸೋನಿ ಸ್ಪೋರ್ಟ್ಸ್‌, ಸೋನಿ ಲೈವ್‌ನಲ್ಲಿ ಪಂದ್ಯಗಳು ನೇರಪ್ರಸಾರವಾಗಲಿದೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ