tharabethi

 

 

ಮೂಡಿಗೆರೆ ತಾಲ್ಲೂಕು ಗೋಣಿಬೀಡು ಜೇಸಿಐ ಹೊಯ್ಸಳ ಘಟಕದ ವತಿಯಿಂದ ಜೇಸಿ ಸಪ್ತಾಹದ ಎರಡನೇ ದಿನವಾದ ಬುಧವಾರ  DSBG ಪ್ರಥಮ ದರ್ಜೆ ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ  empower Horizons ತರಬೇತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಈ ಸಂದರ್ಭದಲ್ಲಿ ವಲಯ ತರಬೇತುದಾರರಾಗೀರುವ ಕೆ ಎನ್ ರವಿ ಯವರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದರು.

ಈ ಸಂದರ್ಭದಲ್ಲಿ ಗೋಣಿಬೀಡು ಜೇಸಿಐ ಹೊಯ್ಸಳ ಘಟಕದ ಅಧ್ಯಕ್ಷ ಜಗತ್ ಬಿ ಎಂ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ; ಜೇಸಿಐ ಸಂಸ್ಥೆಯು ವಿಶ್ವದ ಅತಿದೊಡ್ಡ ವ್ಯಕ್ತಿತ್ವ ವಿಕಸನ ಸಂಸ್ಥೆಯಾಗಿದೆ. ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಹತ್ತು ಹಲವು ತರಬೇತಿಗಳನ್ನು ಹಮ್ಮಿಕೊಳ್ಳುತ್ತಾ ಬರುತ್ತಿದೆ. ಗೋಣಿಬೀಡು ಘಟಕವು ಜೇಸಿ ಸಪ್ತಾಹವನ್ನು ಸೆಪ್ಟಂಬರ್ 9 ರಿಂದ 15ರ ವರೆಗೆ ಹಮ್ಮಿಕೊಂಡಿದ್ದು, ಅನೇಕ ವೈವಿದ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಿದೆ ಎಂದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಪ್ರಾಚಾರ್ಯ ನೌಷಧ, ನವೀನ್ , ಜೇಸಿಐ ಕಾರ್ಯದರ್ಶಿ ಎಚ್ ಎಂ ಸಂತೋಷ್ ಹಾಗೂ ಸದಸ್ಯರು, ವಿದ್ಯಾರ್ಥಿಗಳು ಉಪಸ್ಥಿತರಿದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ