11ktg1

 

 

ಕಾರ್ಯಾಗಾರದಲ್ಲಿ ಭಾಗವಹಿಸಿದ ಶಿಬಿರಾರ್ಥಿಗಳು ವ್ಯಂಗ್ಯಚಿತ್ರ, ಚಿತ್ರಕಲೆ ಮತ್ತು ಹಸ್ತಾಕ್ಷರ ಕ್ಷೇತ್ರದಲ್ಲಿ ನಿರಂತರವಾಗಿ ತೊಡಗಿಸಿಕೊಂಡರೇ ಕೌಶಲ್ಯ ವೃದ್ದಿಯಾಗಿ ಪರಿಪೂರ್ಣತೆ ಪಡೆಯಲು ಸಾಧ್ಯವಾಗುತ್ತದೆ ಎಂದು ತೇಜಸ್ವಿ ಪ್ರತಿಷ್ಠಾನದ ಸದಸ್ಯರಾದ ರಾಘವೇಂದ್ರ ಚಿನ್ನಿಗ ಹೇಳಿದರು.

ಕೊಟ್ಟಿಗೆಹಾರದ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಪ್ರತಿಷ್ಠಾನದಲ್ಲಿ ಎರಡು ದಿನಗಳ ಕಾಲ ನಡೆದ ವ್ಯಂಗ್ಯಚಿತ್ರ, ಹಕ್ಕಿ ಕೀಟ ಚಿತ್ರಕಲೆ, ಕನ್ನಡ ಹಸ್ತಾಕ್ಷರ ಕಾರ್ಯಾಗಾರದ ಸಮಾರೋಪ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಪದೇ ಪದೇ ಅಭ್ಯಾಸದಲ್ಲಿ ತೊಡಗುವುದರಿಂದ ಆ ಕ್ಷೇತ್ರದಲ್ಲಿ ಪರಿಣಿತಿ ಪಡೆದುಕೊಳ್ಳಲು ಸಾಧ್ಯವಾಗುತ್ತದೆ. ತೇಜಸ್ವಿ ಪ್ರತಿಷ್ಠಾನವೂ ನಿರಂತರ ಚಟುವಟಿಕೆಗಳ ಮೂಲಕ ಸಕ್ರಿಯವಾಗಿ ಕಾರ್ಯ ನಿರ್ವಹಿಸುತ್ತಿದೆ ಎಂದರು.

ಕಲಾವಿದರಾದ ಬಾಪು ದಿನೇಶ್ ಮಾತನಾಡಿ, ಬಹುಮುಖ ವ್ಯಕ್ತಿತ್ವದ ತೇಜಸ್ವಿ ಅವರು ಚಿತ್ರಕಲಾ ಕ್ಷೇತ್ರದಲ್ಲಿಯೂ ಆಸಕ್ತಿ ಉಳ್ಳವರಾಗಿದ್ದರು. ವ್ಯಂಗ್ಯಚಿತ್ರ ರಚನೆ ಮನುಷ್ಯನ ಮುಖದ ಚಹರೆಗಳನ್ನು ಖಾಲಿ ಹಾಳೆಯಲ್ಲಿ ಗೆರೆಯ ಮೂಲಕ ಅಭಿವ್ಯಕ್ತಿ ಪಡಿಸುವ ಕಲೆಯಾಗಿದೆ ಎಂದರು.

ತೇಜಸ್ವಿ ಒಡನಾಡಿಗಳಾದ ಶಿವು ಮಾತನಾಡಿ, ತೇಜಸ್ವಿ ಅವರಿಗೆ ಬದುಕು ಮತ್ತು ಬರಹ ಬೇರೆ ಬೇರೆ ಆಗಿರಲಿಲ್ಲ. ಜೀವಾನುಭವದಿಂದ ಬಂದ ಕಾರಣದಿಂದಾಗಿಯೇ ತೇಜಸ್ವಿ ಅವರ ಬರಹ ಅಷ್ಟೊಂದು ಆಪ್ತ ಎನಿಸುತ್ತದೆ ಎಂದರು.

ವ್ಯಂಗ್ಯಚಿತ್ರ ಕಲಾವಿದರಾದ ನಾಗನಾಥ್ ಜಿ.ಎಸ್ ಮಾತನಾಡಿ, ವ್ಯಂಗ್ಯಚಿತ್ರ ರಚನೆಗೆ ಶ್ರದ್ದೆ ಮತ್ತು ತಾಳ್ಮೆ ಅವಶ್ಯಕವಾಗಿದೆ. ವ್ಯಂಗ್ಯಚಿತ್ರ ಕಲಾವಿದರಿಗೆ ವಿಫುಲವಾದ ಅವಕಾಶಗಳಿವೆ ಎಂದರು.

ಈ ಸಂದರ್ಭದಲ್ಲಿ ಹಕ್ಕಿ ಕೀಟ ಚಿತ್ರಕಲೆ ರಚಿಸಿದ ಆಯ್ದ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಲಾಯಿತು. ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು ಮುಂತಾದ ಜಿಲ್ಲೆಗಳಿಂದ ಆಗಮಿಸಿದ 80 ಕ್ಕೂ ಹೆಚ್ಚು ಶಿಬಿರಾರ್ಥಿಗಳು ಕಾರ್ಯಾಗಾರದಲ್ಲಿ ಭಾಗವಹಿಸಿದ್ದರು.

ಕಲಾವಿದರಾದ ರಕ್ಷಾ ಪೂಜಾರಿ, ದಿನೇಶ್ ಹೊಳ್ಳ, ಸಾಮಾಜಿಕ ಕಾರ್ಯಕರ್ತರಾದ ಸಂಜಯಗೌಡ ಕೊಟ್ಟಿಗೆಹಾರ, ಏಕಲವ್ಯ ಮಾದರಿ ವಸತಿ ಶಾಲೆಯ ಪ್ರಾಂಶುಪಾಲರಾದ ಸತೀಶ್ ಪ್ರಸಾದ್ ಜೈಸ್ವಾಲ್, ಕಲಾ ಶಿಕ್ಷಕಿ ನಯನ ಬಾಬುರಾವ್, , ತೇಜಸ್ವಿ ಪ್ರತಿಷ್ಠಾನದ ತಾಂತ್ರಿಕ ಸಂಯೋಜಕ ಪ್ರಜ್ವಲ್, ಸಂಯೋಜಕ ನಂದೀಶ್ ಬಂಕೇನಹಳ್ಳಿ, ಸಿಬ್ಬಂದಿಗಳಾದ ಸತೀಶ್ ತರುವೆ, ಸಂಗೀತಾ, ಕೀಟ ತಜ್ಞ ಡಾ.ಅವಿನಾಶ್, ಲೇಖಕ ಪೂರ್ಣೆಶ್ ಮತ್ತಾವರ, ಕಸಾಪ ನಿಕಟಪೂರ್ವ ಅಧ್ಯಕ್ಷ ಶಾಂತಕುಮಾರ್, ಕಲಾವಿದರಾದ ವಿಶ್ವಕರ್ಮ ಆಚಾರ್ಯ, ಹರ್ಷಕಾವಾ ಶಿಕ್ಷಕಿ ರೇಖಾ ಪೂರ್ಣೇಶ್ ಮುಂತಾದವರು ಇದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ