alumni1

 

 

ಯಾವುದೇ ವ್ಯಕ್ತಿ ವ್ಯವಹಾರ ಮತ್ತು ಜೀವನದಲ್ಲಿ ಯಶಸ್ಸು ಕಾಣಬೇಕಾದರೆ ಶ್ರದ್ಧೆ, ಸತತ ಪ್ರಯತ್ನ ಮತ್ತು ಪೂರ್ಣಪ್ರಮಾಣದ ಪಾಲ್ಗೊಳ್ಳುವಿಕೆ ಬಹುಮುಖ್ಯ ಎಂದು ಜೇಸಿಐ ಅಲ್ಯುಮ್ನಿ ಕ್ಲಬ್ ವಲಯ ಅಧ್ಯಕ್ಷ ಮತ್ತು ಮೂಡಿಗೆರೆ ಜೇಸಿಐ ಮಾಜಿ ಅಧ್ಯಕ್ಷ ಹೆಚ್.ಕೆ. ಯೋಗೇಶ್ ಅಭಿಪ್ರಾಯಿಸಿದರು.

ಅವರು ಶುಕ್ರವಾರ ಸಂಜೆ ಮೂಡಿಗೆರೆ ಜೇಸಿ ಭವನದಲ್ಲಿ ಜೇಸಿಐ ಮೂಡಿಗೆರೆ ಘಟಕವು ಹಮ್ಮಿಕೊಂಡಿರುವ ಜೇಸಿ ಸಪ್ತಾಹದ ನಾಲ್ಕನೇ ದಿನದ ವೇದಿಕೆ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದರು.

ವಿದ್ಯಾರ್ಥಿಗಳು ಮತ್ತು ಯುವಕರು ತಮ್ಮ ಭವಿಷ್ಯದ ಕಡೆಗೆ ಹೆಚ್ಚು ಒತ್ತು ನೀಡಬೇಕು. ಸಾಮಾಜಿಕ ಮಾಧ್ಯಮವನ್ನು ಸಕಾರಾತ್ಮಕವಾಗಿ ಬಳಸಬೇಕು, ವೃತ್ತಿಪರ ಶಿಕ್ಷಣಕ್ಕೆ ಆದ್ಯತೆ ನೀಡಿ ಭವಿಷ್ಯವನ್ನು ಉತ್ತಮವಾಗಿ ರೂಪಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಜೇಸಿಐ ಸಂಸ್ಥೆಯು ಹಲವಾರು ವರ್ಷಗಳಿಂದ ವಿದ್ಯಾರ್ಥಿಗಳು ಮತ್ತು ಯುವಜನರಿಗೆ ಅನೇಕ ತರಬೇತಿಗಳನ್ನು ಹಮ್ಮಿಕೊಂಡು ಬರುತ್ತಿದೆ. ಇದರ ಸದುಪಯೋಗಪಡಿಸಿಕೊಳ್ಳಬೇಕು ಎಂದರು.

ಕಾರ್ಯಕ್ರಮದಲ್ಲಿ ಜೇಸಿಐ ಮಾಜಿ ಅಧ್ಯಕ್ಷ ಹೆಚ್.ಸಿ. ಚಂದ್ರಕಾಂತ್ ಹಳಸೆ, ಮೂಡಿಗೆರೆ ಬಿಜಿಎಸ್ ಶಾಲೆಯ ಪ್ರಾಂಶುಪಾಲರಾದ ರಮೇಶ್, ಜೇಸಿಐ ಪದಾಧಿಕಾರಿಗಳಾದ ಪಿ.ಕೆ.ಹಮೀದ್, ರೇಖಾ ನಾಗರಾಜ್, ಕೃತಿ ಪ್ರದೀಪ್, ಅಕ್ಷತ ಪಟ್ಟದೂರು, ಪ್ರಶಂಸ ಮುಂತಾದವರು ಉಪಸ್ಥಿತರಿದ್ದರು. ಜೇಸಿಐ ಮೂಡಿಗೆರೆ ಅಧ್ಯಕ್ಷ ಪ್ರದೀಪ್ ಕುನ್ನಹಳ್ಳಿ ಅಧ್ಯಕ್ಷತೆ ವಹಿಸಿದ್ದರು.

ಇದೇ ಸಂದರ್ಭದಲ್ಲಿ  ಜೆಸಿಐ ಅಲ್ಯೂಮ್ನಿ ಕ್ಲಬ್ ವಲಯಾಧ್ಯಕ್ಷರಾಗಿ ಆಯ್ಕೆಯಾಗಿರುವ ಜೇಸಿ  ಯೋಗೇಶ್ ಎಚ್.ಕೆ. ಮತ್ತು ಶ್ರೀಮತಿ ಗೀತಾ ಯೋಗೇಶ್ ಅವರನ್ನು ಮೂಡಿಗೆರೆ ಜೇಸಿಐ ಸಂಸ್ಥೆಯ ವತಿಯಿಂದ ಗೌರವಿಸಲಾಯಿತು.

ಸಭಾ ಕಾರ್ಯಕ್ರಮದ ನಂತರ ಮೂಡಿಗೆರೆ ಬಿಜಿಎಸ್ ಶಾಲೆ ಮತ್ತು ಕಾಲೇಜು ವಿದ್ಯಾರ್ಥಿಗಳಿಂದ ಆಕರ್ಷಕ ಸಾಂಸ್ಕೃತಿಕ ಕಾರ್ಯಕ್ರಮ ಏರ್ಪಡಿಸಲಾಗಿತ್ತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ