16Mudigere1A

 

 

ಪ್ರಧಾನಿ ನರೇಂದ್ರ ಮೋದಿ ಅವರು ಅನೇಕ ಜನಪರವಾದ ಯೋಜನೆಗಳು ರೂಪಿಸುತ್ತಿರುವುದರಿಂದ ದೇಶದ ಜನಸಮಾನ್ಯರ ಅಭಿವೃದ್ಧಿಗೆ ಅತ್ಯಂತ ಅನುಕೂಲವಾಗುತ್ತಿದೆ ಎಂದು ವಿಧಾನ ಪರಿಷತ್ ಉಪಸಭಾಪತಿ ಎಂ.ಕೆ.ಪ್ರಾಣೇಶ್ ಹೇಳಿದರು.

ಅವರು ಸೋಮವಾರ ಮೂಡಿಗೆರೆ ಪಟ್ಟಣದ ಅಂಚೆ ಕಚೇರಿಯಲ್ಲಿ ಏರ್ಪಡಿಸಿದ್ದ ಕೇಂದ್ರ ಸರಕಾರದ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಫಲಾನುಭವಿಗಳಿಗೆ ಟೂಲ್ಸ್ ಕಿಟ್ ವಿತರಣೆ ಸಮಾರಂಭದಲ್ಲಿ ಮಾತನಾಡಿದರು.

ನಿರುದ್ಯೋಗ ಹೋಗಲಾಡಿಸಿ ಯುವಜನತೆಗೆ ಉದ್ಯೋಗ ನೀಡಿ ಸ್ವಾವಲಂಬಿಯಾಗಿಸುವುದು ಕೇಂದ್ರ ಸರಕಾರದ ಪ್ರಮುಖ ಗುರಿಯಾಗಿದೆ. ಈ ನಿಟ್ಟಿನಲ್ಲಿ ದೇಶಾದ್ಯಂತ ವಿಶ್ವಕರ್ಮ ಯೋಜನೆ ಅಡಿಯಲ್ಲಿ ಕೋಟ್ಯಂತರ ಜನರಿಗೆ ಈಗಾಗಲೇ ವಿವಿಧ ಕರಕುಶಲ ತರಬೇತಿ ನೀಡಲಾಗಿದೆ. ಅಲ್ಲದೆ ಬ್ಯಾಂಕ್ ಮೂಲಕ ಸಾಲ ಸೌಲಭ್ಯ ಕೂಡ ಒದಗಿಸಿದ್ದು, ಇದನ್ನು ಸದುಪಯೋಗ ಮಾಡಿಕೊಳ್ಳಬೇಕೆಂದು ಹೇಳಿದರು.

ಪ.ಪಂ. ಸದಸ್ಯ ಮನೋಜ್, ದೀಪಕ್ ದೊಡ್ಡಯ್ಯ, ಗಜೇಂದ್ರ ಕೊಟ್ಟಿಗೆಹಾರ, ಸಂತೋಷ್ ಕೋಟ್ಯಾನ್, ವಿನೋದ್ ಕಣಚೂರು, ನಯನ ತಳವಾರ, ಸುನೀಲ್ ಮಣ್ಣಿಕೆರೆ, ಶಶಿ ಆಲ್ದೂರು, ರತನ್ ಊರುಬಗೆ, ಅಂಚೆ ಕಚೇರಿ ಮುಖ್ಯಸ್ಥ ಮಹೇಂದ್ರಮೌರ್ಯ ಮತ್ತಿತರರಿದ್ದರು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ