ಮೂಡಿಗೆರೆ ತಾಲ್ಲೂಕಿನ ಬಣಕಲ್ ಹೋಬಳಿ ಮತ್ತಿಕಟ್ಟೆ-ಬಿ.ಹೊಸಹಳ್ಳಿ ಲಿಂಕ್ ರಸ್ತೆ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಲಾಗಿದೆ ಎಂದು ಬಿ.ಹೊಸಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷ ಹೆಚ್.ಎಂ. ಆಶ್ರಿತ್ ಗೌಡ ತಿಳಿಸಿದ್ದಾರೆ.
ಈ ಕುರಿತು ಪತ್ರಿಕೆಗೆ ಮಾಹಿತಿ ನೀಡಿದ ಅವರು ; ಮತ್ತಿಕಟ್ಟೆ-ಬಿ.ಹೊಸಳ್ಳಿ ಗ್ರಾಮಗಳ ನಡುವಿನ ಲಿಂಕ್ ರಸ್ತೆ ಬಹಳ ವರ್ಷಗಳಿಂದ ನೆನೆಗುದಿಗೆ ಬಿದ್ದಿದ್ದು, ಇದನ್ನು ಅಭಿವೃದ್ಧಿಪಡಿಸಬೇಕು ಎಂಬುದು ಹಲವು ವರ್ಷಗಳ ಬೇಡಿಕೆಯಾಗಿತ್ತು. ನಾನು ಗ್ರಾಮ ಪಂಚಾಯಿತಿ ಅಧ್ಯಕ್ಷನಾದ ಮೇಲೆ ಈ ರಸ್ತೆ ಅಭಿವೃದ್ಧಿಗೆ ಹಲವು ಬಾರಿ ಅರ್ಜಿ ಸಲ್ಲಿಸಿ ಗಮನ ಸೆಳೆದಿದ್ದೆ. ಈ ರಸ್ತೆ ಅಭಿವೃದ್ದಿ ಮಾಡಿಸಬೇಕು ಎಂಬುದು ನನಗೆ ಸದಾ ಬಯಕೆ ಇತ್ತು ಅದೀಗ ಕಾರ್ಯರೂಪಕ್ಕೆ ಬರುತ್ತಿದೆ ಎಂದಿದ್ದಾರೆ.
ಈ ಹಿನ್ನೆಲೆಯಲ್ಲಿ, ಕಳೆದ ವರ್ಷ ಗ್ರಾಮ ಪಂಚಾಯಿತಿ ವತಿಯಿಂದ ನೀರ್ಗಾಲ್ವೆಗಳನ್ನು ನಿರ್ಮಿಸಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದೇವೆ. ಇದೀಗ, ಉತ್ತಮ ಗುಣಮಟ್ಟದ ರಸ್ತೆ ನಿರ್ಮಿಸಿ, ಜನಸಾಮಾನ್ಯರಿಗೆ ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲಕರವಾಗಲು ಶಾಸಕಿ ನಯನ ಮೊಟ್ಟಮ್ಮ ಮತ್ತು ಕ್ಷೇತ್ರದ ಹಿರಿಯ ರಾಜಕಾರಣಿ ಬಿ.ಎಲ್. ಶಂಕರ್ ಅವರ ಸಹಾಯದಿಂದ, ಸುಮಾರು 2.5ಕೋಟಿ ರೂ. ಮೊತ್ತದ ಸುಸಜ್ಜಿತ ರಸ್ತೆ ನಿರ್ಮಾಣಕ್ಕೆ ಪ್ರಕ್ರಿಯೆ ಯಶಸ್ವಿಯಾಗಿ ಮುನ್ನಡೆಯುತ್ತಿದೆ ಎಂದು ಅವರು ಹರ್ಷ ವ್ಯಕ್ತಪಡಿಸಿದ್ದಾರೆ.
ಈ ಸಂದರ್ಭ ಶಾಸಕರನ್ನು ಕರೆದು ಗುದ್ದಲಿ ಪೂಜೆ ನೆರವೇರಿಸಿ ಕಾಮಗಾರಿಗೆ ಅಧಿಕೃತ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ ಲೋಕೋಪಯೋಗಿ ಇಲಾಖೆ ಅಧಿಕಾರಿಗಳು, ಗುತ್ತಿಗೆದಾರ ಪ್ರದೀಪ್ ರಾವ್ ಹಾಗೂ ಶ್ರೀನಾಥ್, ಮಹೇಶ್, ಗ್ರಾಮಸ್ಥರಾದ ಅರುಣ್, ಪಾಪಣ್ಣ, ಶಶಿಧರ, ಆದರ್ಶ, ಅಶ್ವತ್ ಆಚಾರ್ ಮತ್ತು ಪಿಡಿಓ ವಾಸುದೇವ್ ಮುಂತಾದವರು ಉಪಸ್ಥಿತರಿದ್ದರು.




