ಕರ್ನಾಟಕ ರಾಜ್ಯ ಅನುದಾನಿತ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ಬೆಂಗಳೂರು ಇವರ ವತಿಯಿಂದ ದಿನಾಂಕ 14 -9- 2025ರಂದು ಹಾವೇರಿ ಜಿಲ್ಲೆಯ ರಾಣೇಬೆನ್ನೂರಿನಲ್ಲಿ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಏರ್ಪಡಿಸಲಾಗಿತ್ತು.
ಈ ಸಂದರ್ಭದಲ್ಲಿ ರಾಜ್ಯದ ಪ್ರತೀ ಜಿಲ್ಲೆಯ ಒಬ್ಬರಿಗೆ ಉತ್ತಮ ಶಿಕ್ಷಕ ಮತ್ತು ಉತ್ತಮ ವಿದ್ಯಾರ್ಥಿ ಪ್ರಶಸ್ತಿ ಪ್ರಧಾನ ಮಾಡಲಾಯಿತು.

ಮಾರಂಭದಲ್ಲಿ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಬಣಕಲ್ ಶ್ರೀ ವಿದ್ಯಾ ಭಾರತಿ ಶಾಲೆಯ ದೈಹಿಕ ಶಿಕ್ಷಕರಾದ ಶೇಖರಪ್ಪ ರವರಿಗೆ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಹಾಗೂ ಸಂತ ಮಾರ್ಥಾ ಸ್ ಶಾಲೆ ಮೂಡಿಗೆರೆಯ ವಿದ್ಯಾರ್ಥಿನಿ ವೈಭವಿ.ಡಿ ಉತ್ತಮ ವಿದ್ಯಾರ್ಥಿ ಪ್ರತಿಭಾ ಪುರಸ್ಕಾರಕ್ಕೆ ಭಾಜನರಾಗಿದ್ದಾರೆ.

ರಾಜ್ಯದ ಶಿಕ್ಷಣ ಸಚಿವರಾದ ಮಧುಬಂಗಾರಪ್ಪ ರವರು ಪ್ರಶಸ್ತಿಯನ್ನು ನೀಡಿ ಗೌರವಿಸಿದರು.


