November 1, 2026
;
daradahalli 3

 

 

ಮೂಡಿಗೆರೆ ತಾಲ್ಲೂಕಿನ ದಾರದಹಳ್ಳಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಮಹಾಸಭೆ ಶನಿವಾರ ಸಂಘದ ಸಭಾಂಗಣದಲ್ಲಿ ನೆರವೇರಿತು.

ಸಂಘದ ಅಧ್ಯಕ್ಷರಾದ ಹೆಚ್.ಎಂ. ರವಿಯವರು ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿ ; ಸಂಘವು 2024-25ನೇ ಸಾಲಿನಲ್ಲಿ ರೂ. 16.93 ಲಕ್ಷ ನಿವ್ವಳ ಲಾಭ ಗಳಿಸಿದ್ದು, ಸದಸ್ಯರಿಗೆ ಶೇಕಡಾ 6 ರಷ್ಟು ಡಿವಿಡೆಂಟ್ ನೀಡಲಾಗುತ್ತಿದೆ ಎಂದು ಹೇಳಿದರು. ನಮ್ಮ ಸಹಕಾರ ಸಂಘದ ಮೂಲಕ ರೈತರಿಗೆ ಕೃಷಿ ಸಾಲ, ವಾಹನ ಸಾಲ, ವ್ಯಾಪಾರ ಸಾಲ ಸೇರಿದಂತೆ ವಿವಿಧ ರೀತಿಯ ಸಾಲಸೌಲಭ್ಯ ನೀಡಲಾಗುತ್ತಿದೆ. ಪಡಿತರ ವಿತರಣೆ, ರಸಗೊಬ್ಬರ ಮಾರಾಟ ಸೇರಿದಂತೆ ವಿವಿಧ ರೀತಿಯಲ್ಲಿ ರೈತರಿಗೆ ಸೇವೆ ನೀಡಲಾಗುತ್ತಿದೆ.  ರೈತರ ಹಿತದೃಷ್ಠಿಯಿಂದ ಕಿಸಾನ್‌ಕ್ರೆಡಿಟ್ ಕಾರ್ಡ್ ಸಾಲ ವಿತರಣೆಗಾಗಿ ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿಗೆ ಎರಡು ಕೋಟಿ ರೂ ಗಳ ಸಾಲಕ್ಕಾಗಿ ಬೇಡಿಕೆ ಸಲ್ಲಿಸಿದ್ದು ಬ್ಯಾಂಕಿನವರು ಮಂಜೂರು ಮಾಡಿದಲ್ಲಿ ರೈತರಿಗೆ ಸಾಲ ನೀಡಲು ಕ್ರಮ ಕೈಗೊಳ್ಳಲಾಗುವುದು ಎಂದರು.

ಸದಸ್ಯರ ಸಹಕಾರದಿಂದ ನಮ್ಮ ಸಂಘವು ಅಭಿವೃದ್ಧಿ ಹೊಂದುತ್ತಾ ಸೇವೆಯೊಂದಿಗೆ ಲಾಭದಾಯಕವಾಗಿ ಕಾರ್ಯನಿರ್ವಹಿಸುತ್ತಿರುವುದರಿಂದ ಹರ್ಷವಾಗುತ್ತಿದೆ. ಇತ್ತೀಚಿನ ದಿನಗಳಲ್ಲಿ ಸಂಘವು ಎಲ್ಲಾ ವರ್ಗದ ಸದಸ್ಯರುಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯನಿರ್ವಹಿಸುತ್ತಿರುವುದರಲ್ಲಿ ಸಹಕರಿಸುತ್ತಿರುವ ಆಡಳಿತ ಮಂಡಳಿಯ ನಿರ್ದೇಶಕರುಗಳಿಗೆ ಈ ಮೂಲಕ ಕೃತಜ್ಞತೆ ಸಲ್ಲಿಸುತ್ತೇನೆ. ಹಿರಿಯ ಸಹಕಾರಿಗಳು ಹಾಕಿ ಕೊಟ್ಟ ಮಾರ್ಗದಲ್ಲಿ ಸಂಘವನ್ನು ಮುನ್ನಡೆಸಿಕೊಂಡು ಹೋಗುವುದು ನಮ್ಮ ದ್ವೇಯವಾಗಿದೆ ಎಂದರು.

ಸಂಘದ ಅಭಿವೃದ್ಧಿಯಲ್ಲಿ ಸಹಕರಿಸುತ್ತಿರುವ ಸಂಘದ ಆಡಳಿತಮಂಡಳಿಯ ಎಲ್ಲಾ ನಿರ್ದೇಶಕರುಗಳು, ಸಿಬ್ಬಂದಿ ವರ್ಗದವರು, ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್, ಇಲಾಖಾ ಅಧಿಕಾರಿಗಳು, ಸಂಘದ ಗ್ರಾಹಕರುಗಳಿಗೆ ಅಭಿನಂದನೆ ಸಲ್ಲಿಸಿದರು. ಮುಂದಿನ ದಿನಗಳಲ್ಲಿ ಸಂಘವು ಮತ್ತಷ್ಟು ಪ್ರಗತಿ ಹೊಂದಿ ಹೆಚ್ಚಿನ ಸೇವೆ ನೀಡುವಲ್ಲಿ ಸಹಕರಿಸಬೇಕೆಂದು ಮನವಿ ಮಾಡಿದರು.

ಈ ಸಂದರ್ಭದಲ್ಲಿ ಕಳೆದ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಶೇಕಡ 95 ಅಂಗಗಳಿಸಿದ ಅಬಚೂರು ಗ್ರಾಮದ ಮಂದಿರ ಅವರ ಅನುಪಸ್ಥಿತಿಯಲ್ಲಿ ಅವರ ತಂದೆ ಸುರೇಸ್ ಅವರನ್ನು ಗೌರವಿಸಲಾಯಿತು. ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸಂಪತ್ ಕುಮಾರ್ ವಾರ್ಷಿಕ ವರದಿ ಮಂಡಿಸಿದರು,

ವೇದಿಕೆಯಲ್ಲಿ ಸಂಘದ ಉಪಾಧ್ಯಕ್ಷೆ ಶ್ರೀಮತಿ ಸುನಿತಾ ಡಿ.ಪಿ, ನಿರ್ದೇಶರಾದ ಸಿದ್ದೇಶ್, ಆನಂದಾಚಾರಿ, ಶ್ರೀಮತಿ ಸುಮಿತ್ರ ಪಿ.ಆರ್. ರಂಜನ್ ಅಜಿತ್ ಕುಮಾರ್, ರಂಜಿತ್ ಡಿ.ಪಿ, ವಿಕ್ರಮ್ ಡಿ.ಕೆ.,ರಂಜಿತ್ ಕೆ.ಎಸ್, ದೀಪಕ್ ಕೆ.ಸಿ., ಶ್ರೀಮತಿ ಧಾರ್ಮಿಕ ಸಿ.ಕೆ., ಸೀನಾ, ಡಿಸಿಸಿ ಬ್ಯಾಂಕ್ ಮೇಲ್ವಿಚಾರಕರಾದ ನಿತಿನ್ ಪಟೇಲ್, ಸಂಘದ ಮಾಜಿ ಅಧ್ಯಕ್ಷರು, ನಿರ್ದೇಶಕರುಗಳು, ಸಿಬ್ಬಂದಿವರ್ಗದವರು ಉಪಸ್ಥಿತರಿದ್ದರು..

 

 

Leave a Reply

Your email address will not be published. Required fields are marked *