kemmannu

 

 

ರಾಜ್ಯದ ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ವೀವ್ ಪಾಯಿಂಟ್​​ನಲ್ಲಿ ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಹೋಗಿ ಆಯಾತಪ್ಪಿ ಪ್ರಪಾತಕ್ಕೆ ಬಿದ್ದು ವ್ಯಕ್ತಿಯೋರ್ವರು ಜೀವ ಕಳೆದುಕೊಂಡಿದ್ದಾರೆ.

ಸಂತೋಷ್ (40) ಮೃತ ವ್ಯಕ್ತಿ. ಸಂತೋಷ್ ಶಿಕ್ಷಕರಾಗಿದ್ದರು. ಲಿಂಗದಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ‌ದಾಖಲಾಗಿದೆ.

ಶಿಕ್ಷಕ ಸಂತೋಷ್ ಮತ್ತು ಹೆಂಡತಿ ಶ್ವೇತ ಚಿಕ್ಕಮಗಳೂರು ಜಿಲ್ಲೆಯ  ಪ್ರಸಿದ್ಧ ಪ್ರವಾಸಿ ತಾಣ ಕೆಮ್ಮಣ್ಣುಗುಂಡಿ ವೀಕ್ಷಣೆಗೆ ಶನಿವಾರ ಬಂದಿದ್ದರು. ಕೆಮ್ಮಣ್ಣುಗುಂಡಿ ಪಾರ್ಕ್ ವೀಕ್ಷಣೆ ಮಾಡಿದ ದಂಪತಿ, ಕೆಮ್ಮಣ್ಣುಗುಂಡಿ ವೀವ್ ಪಾಯಿಂಟ್​ ಬಳಿ ಹೋಗಿದ್ದಾರೆ. ಹೆಂಡತಿಯೊಂದಿಗೆ ಸೆಲ್ಫಿ ತೆಗೆಯಲು ಸಂತೋಷ್ ಮುಂದಾಗಿದ್ದರು. ಪ್ರಪಾತದ ತುದಿಯಲ್ಲಿ ನಿಂತಿದ್ದ ಸಂತೋಷ್ ಕಾಲು ಜಾರಿ ನೂರಾರು ಅಡಿ ಆಳಕ್ಕೆ ಬಿದ್ದಿದ್ದಾರೆ. ಬಿದ್ದ ರಭಸಕ್ಕೆ ತಲೆಗೆ ಕಲ್ಲು ಬಂಡೆಗಳು ಬಡಿದು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಸಂತೋಷ್​ ಮೂಲತಃ ಶಿವಮೊಗ್ಗ ಜಿಲ್ಲೆಯ ಶಿಕಾರಿಪುರದವರು. ಶ್ವೇತ ಜೊತೆ ಕಳೆದ‌ 5 ವರ್ಷಗಳ ಹಿಂದೆ ವಿವಾಹವಾಗಿದ್ದರು. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆ ತಾಲೂಕಿನಲ್ಲಿರುವ ಲಕ್ಷ್ಮೀಸಾಗರ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು. ದಸರಾ ರಜೆ ಸಿಕ್ಕ ಹಿನ್ನಲೆ ಕೆಮ್ಮಣ್ಣುಗುಂಡಿಗೆ ಹೆಂಡತಿ ‌ಜೊತೆ ಪ್ರವಾಸಕ್ಕೆ ಬಂದಿದ್ದರು. ಈ ವೇಳೆ ಈ  ದುರಂತ ಸಂಭವಿಸಿದೆ. ಮೃತ ದೇಹವನ್ನ‌ ಹಗ್ಗದ‌‌ ಮೂಲಕ ನೂರಾರು ಅಡಿಗಳ ಪ್ರಪಾತದಿಂದ ಅಗ್ನಿಶಾಮಕ ದಳದ ಸಿಬ್ಬಂದಿಗಳು ಮೇಲಕ್ಕೆತ್ತಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ