prashanth 1

 

 

ಚಿಕ್ಕಮಗಳೂರು ಜಿಲ್ಲೆ ಕಡೂರಿನ ಶ್ರೀ ವೀರಭದ್ರೇಶ್ವರ ಸಮುದಾಯ ಭವನದಲ್ಲಿ ಅಖಿಲ ಕರ್ನಾಟಕ ಜನ ಜಾಗೃತಿ ವೇದಿಕೆ ಶ್ರೀ ಕ್ಷೇತ್ರ ಧರ್ಮಸ್ಥಳ ವತಿಯಿಂದ 1980ನೆ ಮಧ್ಯವರ್ಜನ ಶಿಬಿರವು ಯಶಸ್ವಿಯಾಗಿ ನೆರವೇರಿತು.

ಸಮಾರೋಪ ಸಮಾರಂಭದಲ್ಲಿ ಶ್ರೀ ಧರ್ಮಸ್ಥಳ ಧರ್ಮೋತ್ತಾನ ಟ್ರಸ್ಟಿನ, ಟ್ರಸ್ಟಿ ಆದ ಪ್ರಶಾಂತ್ ಚಿಪ್ರಗುತ್ತಿರವರು ಸಂಪನ್ಮೂಲ ವ್ಯಕ್ತಿಯಾಗಿ ಮಾತನಾಡುತ್ತಾ, ಈ ದೇಶದ ದೊಡ್ಡ ಸಂಪತ್ತು ನಮ್ಮ ಯುವ ಜನತೆ. ಇತ್ತೀಚಿನ ದಿನಗಳಲ್ಲಿ ಯುವ ಜನತೆ ಮದ್ಯಪಾನ ಮಾದಕ ವಸ್ತುಗಳಿಗೆ ದಾಸರಾಗಿ, ಮಾನಸಿಕವಾಗಿ ಬೌದ್ಧಿಕವಾಗಿ ದೈಹಿಕವಾಗಿ ಶಕ್ತಿಯನ್ನ ಕಳೆದುಕೊಳ್ಳುತ್ತಿದ್ದು, ಮುಂದಿನ ದಿನಗಳಲ್ಲಿ ಯುವಶಕ್ತಿ ಎಂಬ ಸಂಪತ್ತು ಕುಸಿದು ಹೋಗಲಿದ್ದು ಇದು ದೇಶದ ಅವನತಿಗೆ ಕಾರಣವಾಗುತ್ತದೆ ಎಂದು ಎಚ್ಚರಿಕೆಯನ್ನು ನೀಡಿದರು.

ಯುವಶಕ್ತಿಯ ಸಂಪತ್ತು ಉಳಿಯಬೇಕು,ನಮ್ಮ ದೇಶವನ್ನು ಕಾಪಾಡಿ ಉಳಿಸಿಕೊಳ್ಳಬೇಕು ಎಂಬ ಆಸಕ್ತಿ ನಮ್ಮನ್ನು ಆಳುವ ಸರಕಾರಗಳಿಗೆ ಇದ್ದರೆ ಈ ಕೂಡಲೇ ಮದ್ಯಪಾನ ಹಾಗೂ ಮಾದಕ ವಸ್ತುಗಳನ್ನು ನಿಷೇಧ ಮಾಡಬೇಕೆಂದು ಆಗ್ರಹಿಸಿದರು. ಶ್ರೀ ಡಾ ಡಿ ವೀರೇಂದ್ರ ಹೆಗ್ಗಡೆ ಅವರ ಸಮಾಜಮುಖಿ ಕೆಲಸವನ್ನು ನೋಡಿ ಸಹಿಸಿಕೊಳ್ಳಲು ಆಗದ ಕೆಲವರು ಆಧಾರ ರಹಿತವಾದ ಅಪಪ್ರಚಾರ ಮಾಡುತ್ತಿರುವ ದುಷ್ಟ ವ್ಯಕ್ತಿಗಳಿಗೆ ಎಚ್ಚರಿಕೆಯನ್ನು ನೀಡಿದರು.

ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ರವರು ಮಾತನಾಡಿ ಮದ್ಯಪಾನ ತ್ಯಜಿಸಿ ಒಳ್ಳೆಯ ಸಂಸ್ಕಾರ ವನ್ನು ಬೆಳೆಸಿಕೊಂಡರೆ ನಿಮ್ಮ ಕುಟುಂಬ ಹಾಗೂ ಸಮಾಜಕ್ಕೆ ಹಿತ ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ರವಿಶಂಕರ್ ಅವರು ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಸಮಾಜಮುಖಿ ಕೆಲಸವನ್ನು ಮಾಡುತ್ತಿರುವ ಡಾ. ಡಿ ವೀರೇಂದ್ರ ಹೆಗ್ಗಡೆಯವರನ್ನು ಶ್ಲಾಗಿಸಿ ಶಿಬಿರಾರ್ಥಿಗಳಿಗೆ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ನಗರ ಸಭೆ ಸದಸ್ಯ ಮೋಹನ್ ಕುಮಾರ್, ಜನ ಜಾಗೃತಿ ವೇದಿಕೆ ಯೋಜನಾಧಿಕಾರಿ ನಾಗರಾಜ್, ಸದಸ್ಯರಾದ ಆಶಾ, ನೀಲಕಂಠಪ್ಪ ಇತರರು ಇದ್ದರು

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ