chetahan

 

 

ಹಿಟ್ ಅಂಡ್ ರನ್ ಅಪಘಾತ ಪ್ರಕರಣದಲ್ಲಿ ತೀವ್ರ ಗಾಯಗೊಂಡಿದ್ದ ಯುವಕ ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿರುವ ಘಟನೆ ಮೂಡಿಗೆರೆ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಮೂಡಿಗೆರೆ ತಾಲ್ಲೂಕು ನಂದೀಪುರ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೂಡಿಗೆರೆ-ಗೆಂಡೇಹಳ್ಳಿ ರಸ್ತೆಯ ಬೊಮ್ಮೇನಹಳ್ಳಿ ಎಂಬಲ್ಲಿ ನಡೆದ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿದ್ದ ಬೈಕ್ ಸವಾರ ಬಿ.ಆರ್. ಚೇತನ್ (35 ವರ್ಷ) ಕೊನೆಯುಸಿರೆಳೆದಿದ್ದಾರೆ.

ಬೊಮ್ಮೆನಹಳ್ಳಿ ಗ್ರಾಮದ ರಂಗೇಗೌಡ ಶಕುಂತಲ ಎಂಬುವವರ ಪುತ್ರ ಚೇತನ್ ಗೌಡ ಮಂಗಳವಾರ ಸಂಜೆ ತನ್ನ ಬೈಕ್ ನಲ್ಲಿ ಮನೆಯಿಂದ ಕನ್ನಾಪುರ ಕಡೆಗೆ ಸಾಗುತ್ತಿದ್ದಾಗ ಮನೆಯಿಂದ ಸ್ವಲ್ಪ ದೂರದಲ್ಲಿಯೇ ಕಾರೊಂದು ಬೈಕ್ ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಘಟನೆ ನಡೆದಿತ್ತು. ಬೈಕ್ ನಿಂದ ರಸ್ತೆಗೆ ರಭಸವಾಗಿ ಬಿದ್ದಿದ್ದರಿಂದ ಚೇತನ್ ತಲೆಗೆ ತೀವ್ರ ಪೆಟ್ಟಾಗಿತ್ತು. ಪ್ರಜ್ಞಾಹೀನ ಸ್ಥಿತಿಗೆ ತಲುಪಿದ್ದ ಚೇತನ್ ನನ್ನು ಮಂಗಳೂರು ಆಸ್ಪತ್ರೆಗೆ ರವಾನಿಸಲಾಗಿತ್ತು, ಅಲ್ಲಿ ಚೇತನ್ ಮೆದುಳು ಸಂಪೂರ್ಣ ನಿಷ್ಕ್ರೀಯವಾಗಿದ್ದು, ಚಿಕಿತ್ಸೆ ಫಲಿಸುವುದಿಲ್ಲ ಎಂದು ವೈದ್ಯರು ತಿಳಿಸಿದ್ದರು. ಆದರೂ ಅವರನ್ನು ಬೆಂಗಳೂರಿಗೆ ಕರೆತಂದು ನಿಮ್ಹಾನ್ಸ್ ಮತ್ತು ನಂತರ ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಿ ಮಗನನ್ನು ಉಳಿಸಿಕೊಳ್ಳಲು ಕುಟುಂಬದವರು ಶತಪ್ರಯತ್ನ ನಡೆಸಿದ್ದರು.

ಆದರೆ ಮೆದುಳು ಸಂಪೂರ್ಣ ನಿಷ್ಕ್ರೀಯವಾಗಿದ್ದು, ಚಿಕಿತ್ಸೆಗೆ ಸ್ಪಂದಿಸಿದೆ ಭಾನುವಾರ ಸಂಜೆ ಕೊನೆಯುಸಿರೆಳೆದಿದ್ದಾರೆ. ಚೇತನ್ ಅತ್ಯಂತ ಪ್ರತಿಭಾವಂತ ಸ್ನೇಹಜೀವಿ, ಶ್ರಮಜೀವಿ ಯುವಕನಾಗಿದ್ದರು. ಬೆಂಗಳೂರಿನಲ್ಲಿ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದವರು ಕೆಲ ವರ್ಷಗಳ ಹಿಂದೆ ಊರಿಗೆ ಆಗಮಿಸಿ ತಂದೆಯೊಂದಿಗೆ ತೋಟ ನಿರ್ವಹಣೆಯಲ್ಲಿ ತೊಡಗಿಸಿಕೊಂಡಿದ್ದರು. ಚೇತನ್ ತಂದೆ ತಾಯಿ ಮತ್ತು ಓರ್ವ ಸಹೋದರ ಹಾಗೂ ಅಪಾರ ಬಂಧುಗಳನ್ನು, ಸ್ನೇಹಬಳಗವನ್ನು ಅಗಲಿದ್ದಾರೆ. ಇವರ ನಿಧನದಿಂದ ಕುಟುಂಬದ ಸದಸ್ಯರು ಕಂಗಾಲಾಗಿದ್ದಾರೆ. ಸ್ನೇಹಿತರು ಬಂಧುಗಳು ಕಂಬನಿ ಮಿಡಿದಿದ್ದಾರೆ.

ಇಂದು ಸೋಮವಾರ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಮರಣೋತ್ತರ ಪರೀಕ್ಷೆ ನಡೆಸಿ ಸಂಜೆ ಹೊತ್ತಿಗೆ ಪಾರ್ಥಿವ ಶರೀರವನ್ನು ಸ್ವಗ್ರಾಮಕ್ಕೆ ತರಲಿದ್ದು, ಅಂತಿಮ ಸಂಸ್ಕಾರದ ಸಮಯದ ಬಗ್ಗೆ ಇನ್ನೂ ಖಚಿತವಾಗಿಲ್ಲ.

ಅಪಘಾತ ನಡೆಸಿ ಪರಾರಿಯಾಗಿರುವ ತಪ್ಪಿತಸ್ಥನ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹ :

ಈ ಸಂಬಂಧ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿತ್ತು.  ಅಪಘಾತ ನಡೆಸಿ ಕಾರನ್ನು ನಿಲ್ಲಿಸದೇ ಪರಾರಿಯಾಗಿದ್ದ ಪ್ರಕಣದಲ್ಲಿ ಸಿಸಿ ಕ್ಯಾಮರ ದೃಶ್ಯಗಳನ್ನು ಆದರಿಸಿ ವಿಚಾರಣೆ ನಡೆಸಲಾಗುತ್ತಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. ಅಪಘಾತ ನಡೆಸಿ ಪರಾರಿಯಾಗಿರುವ ವ್ಯಕ್ತಿಯನ್ನು ಪತ್ತೆಹಚ್ಚಿ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಮತ್ತು ಮೃತ ಯುವಕನ ಕುಟುಂಬಕ್ಕೆ ನ್ಯಾಯ ದೊರಕಿಸಿಕೊಡಬೇಕು ಎಂದು ಸಂಬಂಧಿಕರು ಮತ್ತು ಸಾರ್ವಜನಿಕರು ಆಗ್ರಹಿಸಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ