ಹಾನಿಯಾಗಿರುವ ರಸ್ತೆಗಳನ್ನು ದುರಸ್ತಿಪಡಿಸಬೇಕೆಂದು ಆಗ್ರಹಿಸಿ ಬಿಜೆಪಿ ಮುಖಂಡರು ಬುಧವಾರ ಮೂಡಿಗೆರೆ ಪಟ್ಟಣದ ಲಯನ್ಸ್ ವೃತ್ತದಲ್ಲಿ ರಾಷ್ಟ್ರೀಯ ಹೆದ್ದಾರಿ 173 ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.
ಈ ಸಂದರ್ಭದಲ್ಲಿ ಬಿಜೆಪಿ ತಾಲೂಕು ಅಧ್ಯಕ್ಷ ಗಜೇಂದ್ರ ಕೊಟ್ಟಿಗೆಹಾರ ಮಾತನಾಡಿ, ರಾಜ್ಯ ಕಾಂಗ್ರೆಸ್ ಸರಕಾರ ಗ್ಯಾರಂಟಿ ಯೋಜನೆಗೆ ಹಣ ಕ್ರೂಡೀಕರಿಸುವ ಸಲುವಾಗಿ ಜನರ ಬೊಕ್ಕಸದಿಂದ ಲೂಟಿ ಹೊಡೆಯುವುದಲ್ಲದೇ ಇನ್ನೂ ಎಲ್ಲಿಂದ ಹಣ ಲೂಟಿ ಮಾಡಬಹುದೆಂದು ಹುಡುಕಾಡುತ್ತಿದ್ದಾರೆ. 2 ವರ್ಷದಿಂದ ಇವರ ಅಭಿವೃದ್ಧಿ ಶೋನ್ಯವಾಗಿದೆ ಎಂದು ಹೇಳಿದರು.
ಜಿಲ್ಲಾ ಕಾರ್ಯದರ್ಶಿ ರಘು ಜನ್ನಾಪುರ ಮಾತನಾಡಿ, 2 ವರ್ಷದಲ್ಲಿ ಜನರಿಗೆ ಮೂಲಭೂತ ಸೌಲಭ್ಯ ಕೊಡಲು ಸಾಧ್ಯವಾಗುತ್ತಿಲ್ಲ. ಬಿಟ್ಟಿ ಭಾಗ್ಯದಿಂದ ಅಭಿವೃದ್ಧಿ ಮಾಡಲು ಸಾಧ್ಯವಾಗದೇ ಜಾತಿ ಹೆಸರಿನಲ್ಲಿ ರಾಜಕೀಯ ಮಾಡುತ್ತಾ ಕಾಲಹರಣ ಮಾಡುತ್ತಿದ್ದಾರೆಂದು ದೂರಿದರು.
ಮುಖಂಡ ದೀಪಕ್ ದೊಡ್ಡಯ್ಯ ಮಾತನಾಡಿ, ಗುಂಡಿ ಮುಚ್ಚಲು ಸಾಧ್ಯವಾಗದ ಸರಕಾರಕ್ಕೆ ಆಡಳಿತ ನಡೆಸಲು ಸಾಧ್ಯವೇ ಇಲ್ಲ. ಸುಳ್ಳು ಹೇಳಿಕೊಂಡು ಅಕಾರಕ್ಕೆ ಬಂದು ಜನರನ್ನು ನರಕದ ಕೂಪಕ್ಕೆ ತಳ್ಳಿದ್ದಾರೆ. ಇದರಿಂದ ರಾಜ್ಯದ ಜನರು ಬೇಸತ್ತು ಸರಕಾರದ ವಿರುದ್ಧ ದಂಗೇಳಲು ಆರಂಭಿಸಿದ್ದಾರೆ. ಕಾಂಗ್ರೆಸ್ ಸರ್ವನಾಶವಾಗುವುದರಲ್ಲಿ ಸಂಶಯವಿಲ್ಲ ಎಂದು ಹೇಳಿದರು.
ಪ.ಪಂ. ಸದಸ್ಯರಾದ ಮನೋಜ್, ಕಮಲಮ್ಮ, ಮುಖಂಡರಾದ ಮನೋಜ್ ಹಳೆಕೋಟೆ, ವಿನಯ್ ಹಳೆಕೋಟೆ, ಪಂಚಾಕ್ಷರಿ, ಧನಿಕ್ ಕೋಡದಿಣ್ಣೆ, ಪ್ರಶಾಂತ್, ಸುನೀಲ್ ಮಣ್ಣಿಕೆರೆ, ಜಯಪಾಲ್, ಎಂಎಸ್.ಸುಜಿತ್, ದಯಾಕರ್ ಬಾಳೆಹಳ್ಳಿ, ಸಚಿನ್ ಬಾನಳ್ಳಿ, ಪ್ರಕಾಶ್ ಕಿರುಗುಂದ, ಶಿವು ಕುನ್ನಳ್ಳಿ ಮತ್ತಿತರರಿದ್ದರು.



