lokayuktha2

 

 

ಚಿಕ್ಕಮಗಳೂರು ನಗರದ ವಿವಿಧ ಭಾಗಗಳಿಗೆ ಭೇಟಿನೀಡಿದ ಗೌರವಾನ್ವಿತ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್. ಫಣೀಂದ್ರ ಅವರು ಸಮಸ್ಯೆಗಳ ಬಗ್ಗೆ ಬೆಳಕು ಚೆಲ್ಲಿ ಸ್ವಚ್ಛತೆಯ ಬಗ್ಗೆ ಜಾಗೃತಿ ಮೂಡಿಸಿ ಪರಿಶೀಲನೆ ನಡೆಸಿದರು.

ಬುಧವಾರ ನಗರದ ಎರಡು ಮಹಿಳಾ ಹಾಸ್ಟೆಲ್‌ಗಳಿಗೆ ಭೇಟಿನೀಡಿ ಅಲ್ಲಿನ ನ್ಯೂನತೆಗಳ ಬಗ್ಗೆ ಪರಿಶೀಲಿಸಿ ವಿದ್ಯಾರ್ಥಿನಿಯರಿಗೆ ಕುಡಿಯುವ ನೀರಿನ ವ್ಯವಸ್ಥೆಯನ್ನು ಕೂಡಲೇ ಸರಿಪಡಿಸುವ ಜೊತೆಗೆ ಸ್ವಚ್ಛತೆ ಕಾಪಾಡಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ವಿದ್ಯಾರ್ಥಿನಿಯರಿಗೆ ಬೇಕಾದ ಅಗತ್ಯ ಸೌಲಭ್ಯಗಳನ್ನು ಕಲ್ಪಿಸುವಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಹ ಣಾಧಿಕಾರಿಗಳಿಗೆ ಸೂಚಿಸಿದ ಅವರು, ತಕ್ಷಣ ಹಾಸ್ಟೆಲ್‌ಗಳಲ್ಲಿ ಯಾವುದೇ ಸಮಸ್ಯೆ ತಲೆದೋರದಂತೆ ಕ್ರಮವಹಿಸಬೇಕೆಂದು ಹೇಳಿದರು.

ನಗರಸಭೆ ಕಸದ ಡಂಪಿಂಗ್ ಯಾರ್ಡ್‌ಗೆ ಭೇಟಿನೀಡಿದ್ದು, ಇದರಲ್ಲಿ ಉತ್ಪತ್ತಿಯಾಗುತ್ತಿರುವ ಕೊಳಚೆ ನೀರು ಗ್ರಾಮದ ಕಾಲುವೆಯಲ್ಲಿ ಹರಿಯುತ್ತಿರುವುದರಿಂದ ಕೆಟ್ಟ ವಾಸನೆ ಬರುತ್ತಿದೆ. ಜೊತೆಗೆ ಸೊಳ್ಳೆ, ನೊಣಗಳ ಕಾಟವೂ ಹೆಚ್ಚಾಗಿ ರೋಗರುಜಿನಗಳಿಗೆ ಆಹ್ವಾನ ನೀಡಿದಂತಾಗಿದೆ ಎಂದು ಇಲ್ಲಿನ ಸಾರ್ವಜನಿಕರು ದೂರು ನೀಡಿದ್ದಾರೆಂದು ತಿಳಿಸಿದರು.

ಡಂಪಿಂಗ್ ಯಾರ್ಡ್‌ನಲ್ಲಿ ಬಹಳ ದೊಡ್ಡ ಸಮಸ್ಯೆ ಇದೆ, ಡ್ರೈವೇಸ್ಟ್ ಆಗಿ ಹೊರಬರುವ ಕಸವನ್ನು ಸ್ಥಳಾಂತರ ಮಾಡದೆ ಸುಮಾರು 25 ವರ್ಷಗಳಿಂದ ವಿಲೇ ಮಾಡಲಾಗಿಲ್ಲ, ಇಡೀ ಗುಡ್ಡ ಕಸವಾಗಿದೆ. ಇದರಿಂದ ಬರುವ ನೀರು ಕಲುಶಿತಗೊಂಡು ಕೃಷಿಗೆ, ತೋಟಗಾರಿಕೆಗೆ ಹಾಗೂ ದನಕರುಗಳಿಗೆ, ನಾಗರೀಕರಿಗೆ ತೊಂದರೆಯಾಗುತ್ತಿದೆ ಎಂದು ತಿಳಸಿದರು.

ಈ ಬಗ್ಗೆ ತಾಂತ್ರಿಕ ಅಧ್ಯಯನ ಆಗಬೇಕು, ನಂತರ ವೈಜ್ಞಾನಿಕ ಪರಿಹಾರ ಕ್ರಮಗಳ ಬಗ್ಗೆ ಸೂಕ್ತ ಕಾನೂನು ಸಲಹೆಗಳನ್ನು ಪಡೆಯಬೇಕಾಗಿರುವುದರಿಂದ ನಗರಸಭೆ ಪೌರಾಯುಕ್ತರು ಮತ್ತು ವ್ಯವಸ್ಥಾಪಕರ ಮೇಲೆ ಪ್ರಕರಣ ದಾಖಲು ಮಾಡಿಕೊಂಡು ಸಮಸ್ಯೆಯನ್ನು ಇತ್ಯರ್ಥಪಡಿಸುವಂತೆ ಎಚ್ಚರಿಕೆ ನೀಡಲಾಗಿದೆ ಎಂದು ಹೇಳಿದರು.

ಪ್ರತಿ ತಿಂಗಳು ನಡೆಯುವ ವರದಿ ಆಧರಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ಒಣ ಕಸವನ್ನು ವಿಲೇವಾರಿ ಮಾಡಲಾಗುತ್ತಿದೆ. ಆದರೆ, ಈ ಕಾರ್ಯ ಅಂತಿಮಗೊಳ್ಳಲು ಸುಮಾರು ವರ್ಷಾನುಗಟ್ಟೆಲೆಯಾಗುತ್ತದೆ. ಈ ಸಂಬಂಧ ಕೇಂದ್ರ ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ ಇಂಜಿನಿಯರ್‌ನ್ನು ಆಹ್ವಾನಿಸಿ ಸರ್ವೇ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಿ ಏನು ತೀರ್ಮಾನ ಮಾಡಬಹುದು ಎಂಬುದರ ಬಗ್ಗೆ ಪ್ರಸ್ತಾವನೆ ಕಳಿಸುವುದಾಗಿ ತಿಳಿಸಿದರು.

ಒಣ ಕಸ ಸ್ಥಳಾಂತರ ಮಾಡಲು ತುಂಬಾ ಕಷ್ಟ ಇದ್ದು, ಬೇರೆಡೆಗೆ ಹಾಕಿದರೆ ಅಲ್ಲಿ ತೊಂದರೆಯಾಗುತ್ತದೆ ಎಂಬುದನ್ನು ಮನಗಂಡು ಪರಿಶೀಲನೆ ಮಾಡಿ ಇರುವ ಜಾಗದಲ್ಲಿಯೇ ಪರ್ಯಾಯ ವ್ಯವಸ್ಥೆ ಮಾಡಿಕೊಳ್ಳಲು ನಿರ್ದೇಶನ ನೀಡಿ ಸಲಹೆ ನೀಡಲಾಗಿದೆ ಎಂದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ