mkb 1_page-0001

 

 

ಸಹಕಾರ ಸಂಘಗಳು ಗ್ರಾಮೀಣ ಆರ್ಥಿಕತೆಯ ಮುಖ್ಯ ಆಧಾರ ಸ್ತಂಭಗಳಾಗಿವೆ, ಸಹಕಾರ ರಂಗವು ಮುಂದಿನ ದಿನಗಳಲ್ಲಿ ಹೊಸ ಎತ್ತರಕ್ಕೆ ಬೆಳೆಯಲಿದ್ದು, ಕೇಂದ್ರ ಸರ್ಕಾರ ಈ ನಿಟ್ಟಿಯಲ್ಲಿ ಕಾರ್ಯತಂತ್ರ ರೂಪಿಸುತ್ತಿದೆ, ಸಹಕಾರ ಸಂಘದಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಮತ್ತು ನೌಕರರ  ಗುಣಮಟ್ಟದ ಶಿಕ್ಷಣಕ್ಕಾಗಿ ತ್ರಿಭುವನ್ ಯುನಿವರ್ಸಿಟಿ ಎಂಬ ಪ್ರತ್ಯೇಕ ವಿಶ್ವವಿದ್ಯಾಲಯಗಳನ್ನು ಪ್ರಾರಂಭಿಸಲು ಕೇಂದ್ರ ಸರ್ಕಾರ ಮುಂದಾಗಿದೆ ಎಂದು ಉಡುಪಿ ಚಿಕ್ಕಮಗಳೂರು ಸಂಸದ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದರು.

ಅವರು ಗುರುವಾರ ಮೂಡಿಗೆರೆ ತಾಲ್ಲೂಕಿನ ಮಾಕೋನಹಳ್ಳಿ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಕೃಷಿ ಪತ್ತಿನ ಸಹಕಾರ ಸಂಘದ ನೂತನ ಆಡಳಿತ ಕಛೇರಿ ಕಟ್ಟಡವನ್ನು ಉದ್ಘಾಟಿಸಿ ಮಾತನಾಡಿದರು.

ಪ್ರಸ್ತುತ ಭಾರತದಲ್ಲಿ ಅಂದಾಜು 30 ಕೋಟಿ ಜನರು ಸಹಕಾರ ರಂಗದ ಅಡಿಯಲ್ಲಿ ತೊಡಗಿಸಿಕೊಂಡಿದ್ದಾರೆ. ಮುಂದಿನ 5 ವರ್ಷಗಳಲ್ಲಿ ಇದನ್ನು ದ್ವಿಗುಣಗೊಳಿಸಿ 60 ಕೋಟಿ ಜನರನ್ನು ಸಹಕಾರ ಸಂಘದ ಚಟುವಟಿಕೆಗಳ ಅಡಿಯಲ್ಲಿ ತರಲು ಗುರಿ ಹೊಂದಲಾಗಿದೆ. ಕೇಂದ್ರ ಸರ್ಕಾರದಲ್ಲಿ ಸಹಕಾರ ಇಲಾಖೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಚಿವಾಲಯವನ್ನೇ ಪ್ರಾರಂಭಿಸಲಾಗಿದೆ ಎಂದರು.

ಮಾಕೋನಹಳ್ಳಿ ಸಹಕಾರ ಸಂಘವು ಹಿರಿಯರ ಮತ್ತು ಕಿರಿಯರ ಪರಿಶ್ರಮದಿಂದ 50 ವರ್ಷಗಳನ್ನು ಪೂರೈಸಿ ಮುನ್ನಡೆದಿದ್ದು, ಸುಸಜ್ಜಿತವಾದ ಕಟ್ಟಡ ನಿರ್ಮಾಣ ಮಾಡಿದ್ದು, ಸದಸ್ಯರಿಗೆ ಇನ್ನಷ್ಟು ಹೆಚ್ಚಿನ ಸೇವೆ ಒದಗಿಸಿ, ರೈತಾಪಿ ವರ್ಗದವರ ಆರ್ಥಿಕ ಅಭಿವೃದ್ಧಿಗೆ ಇದು ಪ್ರೇರಣೆಯಾಗಲಿ ಎಂದು ಶುಭ ಹಾರೈಸಿದರು.

ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಮುಖ್ಯ ಅತಿಥಿಯಾಗಿ ಭಾಗವಹಿಸಿ ಮಾತನಾಡಿ ; ನಮ್ಮ ಸಮಾಜ ಹಿಂದಿನಿಂದಲು ಸಹಕಾರ ತತ್ವದಡಿಯಲ್ಲೇ ಬೆಳೆದುಬಂದಿದೆ, ಸಹಕಾರ ತತ್ವ ನಮ್ಮ ಸಂಸ್ಕೃತಿಯ ಜೀವನಾಡಿಯಾಗಿದೆ. ಪರಸ್ಪರ ಒಬ್ಬರನೊಬ್ಬರು ಅರಿತು ಬಾಳುವುದೇ ಸಹಕಾರ ತತ್ವದ ಜೀವಾಳವಾಗಿದೆ. ಈ ನಿಟ್ಟಿನಲ್ಲಿ ಮಾಕೋನಹಳ್ಳಿ ಸಹಕಾರ ಸಂಘದ ಸುದೀರ್ಘ ಪಯಣ, ಅದು ಬೆಳೆದುಬಂದಿರುವ ಹಾದಿ ಶ್ಲಾಘನೀಯವಾಗಿದೆ ಎಂದರು.

ಸಂಘದ ಅಧ್ಯಕ್ಷ ಎಂ.ಎನ್. ಅಶ್ವತ್ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ; ಮಾಕೋನಹಳ್ಳಿ ಸಹಕಾರ ಸಂಘವು ಮಾಜಿ ಸಂಸದ ಹುಚ್ಚೇಗೌಡರ ಮಾರ್ಗದರ್ಶನದಲ್ಲಿ ಪ್ರಾರಂಭವಾಗಿ ಇಂದು ಬೃಹತ್ ಪ್ರಮಾಣದಲ್ಲಿ ಬೆಳೆದು ನಿಂತಿದೆ. ರೈತರಿಗೆ ಮತ್ತು ಸದಸ್ಯರಿಗೆ ಹತ್ತು ಹಲವು ರೀತಿಯ ಸೇವೆಗಳನ್ನು ಒದಗಿಸುತ್ತಿದೆ. ಹಲವು ಮಂದಿಗೆ ಉದ್ಯೋಗ ನೀಡಿದೆ. ನೂತನ ಆಡಳಿತ ಕಛೇರಿ ಕಟ್ಟಡ ನಿರ್ಮಾಣದಲ್ಲಿ ಬಹುತೇಕ ಹಣವನ್ನು ದೇಣಿಗೆಯ ರೂಪದಲ್ಲಿಯೇ ಸಂಗ್ರಹಿಸಲಾಗಿದೆ. ಸಂಘದ ಕಟ್ಟಡ ನಿರ್ಮಾಣಕ್ಕೆ ಸಹಕಾರ ನೀಡಿದ ಎಲ್ಲಾ ದಾನಿಗಳು, ಆಡಳಿತ ಮಂಡಳಿ ಸದಸ್ಯರು, ಮಾಜಿ ಅಧ್ಯಕ್ಷರು, ನಿರ್ದೇಶಕರು, ಸಂಘದ ನೌಕರರು, ಜನಪ್ರತಿನಿಧಿಗಳು, ಇಲಾಖೆಯ ಅಧಿಕಾರಿಗಳ ಸಹಕಾರವನ್ನು ಸ್ಮರಿಸಿದರು.

 

ವೇದಿಕೆಯಲ್ಲಿ ಜಿಲ್ಲಾ ಕಾಂಗ್ರೇಸ್ ಅಧ್ಯಕ್ಷ  ಮತ್ತು ಕಾಡಾ ಅಧ್ಯಕ್ಷ ಡಾ. ಅಂಶುಮಂತ್, ಮಾಜಿ ಸಚಿವರಾದ ಶ‍್ರೀಮತಿ ಮೋಟಮ್ಮ, ಬಿ.ಬಿ.ನಿಂಗಯ್ಯ, ಕರ್ನಾಟಕ ಬೆಳೆಗಾರರ ಸಂಘದ ಅಧ್ಯಕ್ಷ ಹಳಸೆ ಶಿವಣ್ಣ, ಅಪೆಕ್ಸ್ ಬ್ಯಾಂಕ್ ನಿರ್ದೇಶಕ ಲೋಕಪ್ಪಗೌಡ, ಟಿಎಪಿಸಿಎಂಎಸ್ ಅಧ್ಯಕ್ಷ ವಿ.ಕೆ. ಶಿವೇಗೌಡ, ಮಾಕೋನಹಳ್ಳಿ ಗ್ರಾಮ ಪಂಚಾಯತಿ ಅಧ್ಯಕ್ಷ ಪ್ರಸನ್ನ, ನಂದೀಪುರ ಗ್ರಾಮ ಪಂಚಾಯಿತಿ ಅಧ್ಯಕ್ಷ ರಮೇಶ್, ಸಿಡಿಓ ಜ್ಯೋತಿ ಲಕ್ಷ್ಮೀ, ಸಂಘದ ಉಪಾಧ್ಯಕ್ಷ ಪಿ.ಎಸ್.ಮೂರ್ತಿ, ನಿರ್ದೇಶಕರಾದ ಜಿ.ಯು. ಚಂದ್ರೇಗೌಡ, ಎಂ.ಎಲ್. ಕಲ್ಲೇಶ್, ಎನ್.ವಿ.ಸಂದೀಪ್, ಶ್ರೀಮತಿ ಬಿ.ಟಿ. ಮಂಜುಳ, ಶ್ರೀಮತಿ ಶೃತಿ ಡಿ.ಸಿ, ಎಂ.ಎನ್. ಮನು, ದೇವಿಪ್ರಸಾದ್ ಎನ್.ಎಸ್., ರವಿಕಿರಣ್ ಜಿ.ವಿ, ಅಣ್ಣಪ್ಪ ಎನ್.ಟಿ.,  ಪದನಿಮಿತ್ತ ನಿರ್ದೇಶಕ ನಿತಿನ್ ಪಟೇಲ್, ಸಿಇಓ ಕೆ.ಜಿ. ಅಜಿತ್,  ವಿವಿಧ ರಾಜಕೀಯ ಪಕ್ಷದ ಮುಖಂಡರುಗಳು ಉಪಸ್ಥಿತರಿದ್ದರು.

 

ಕಾರ್ಯಕ್ರಮದಲ್ಲಿ ಕಟ್ಟಡ ನಿರ್ಮಾಣಕ್ಕೆ ದೇಣಿಗೆ ನೀಡಿದ ದಾನಿಗಳನ್ನು, ಹಿರಿಯ ಸಹಕಾರಿಗಳನ್ನು ಗುರುತಿಸಿ ಗೌರವಿಸಲಾಯಿತು.

ಕಾರ್ಯಕ್ರಮವನ್ನು ಶ್ರೀಮತಿ ಸವಿತಾ ರಮೇಶ್ ಮತ್ತು ಶ್ರೀಮತಿ ಪಲ್ಲವಿ ನಿರೂಪಿಸಿದರು, ಮಂಜುನಾಥ್ ಕೋಳ್ಗೋಡು ಪ್ರಾರ್ಥನೆ ನೆರವೇರಿಸಿದರು. ಎಂ.ಎಲ್. ಕಲ್ಲೇಶ್ ಸ್ವಾಗತಿಸಿದರು, ಎಂ.ಎನ್. ಮನು ವರದಿ ಮಂಡಿಸಿದರು.

ಮಾಕೋನಹಳ್ಳಿ, ನಂದೀಪುರ ಹಾಗೂ ಸುತ್ತಮುತ್ತಲ ಗ್ರಾಮಸ್ಥರು, ಮೂಡಿಗೆರೆ ಮತ್ತು ಕಳಸ ತಾಲ್ಲೂಕಿನ ವಿವಿಧ ಸಹಕಾರ ಸಂಘಗಳ ಅಧ್ಯಕ್ಷರು ಪದಾಧಿಕಾರಿಗಳು, ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಭಾಗವಹಿಸಿದ್ದರು.

 

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ