tdr 1

 

 

ಭ್ರಷ್ಟಾಚಾರ, ಅಧಿಕಾರ ದುರ್ಬಳಕೆ, ಆದಾಯ ತೆರಿಗೆಯಲ್ಲಿ ವಂಚನೆ ಆರೋಪದಡಿಯಲ್ಲಿ ಶೃಂಗೇರಿ ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಶಾಸಕ ಟಿ.ಡಿ ರಾಜೇಗೌಡ ಅವರ ವಿರುದ್ಧ ಚಿಕ್ಕಮಗಳೂರಿನ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಎಫ್.ಐ.ಆರ್ ದಾಖಲಾಗಿದೆ.

ಈ ಪ್ರಕರಣದಲ್ಲಿ ಶಾಸಕ ರಾಜೇಗೌಡ ಅವರ ಪತ್ನಿ ಪುಷ್ಪಾ ಮತ್ತು ಮಗ ರಾಜ್‌ದೇವ್ ಅವರನ್ನು ಎಫ್ ಐಆರ್ ನಲ್ಲಿ ಸೇರಿಸಲಾಗಿದೆ.

ರಾಜೇಗೌಡ ವಿರುದ್ಧ ಬಿಜೆಪಿ ಮುಖಂಡ ದಿನೇಶ್ ಹೆಚ್.ಕೆ. ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲಿಸಿದ್ದರು. ಶಾಸಕ ರಾಜೇಗೌಡ ಅವರು ತಮ್ಮ ಆದಾಯಕ್ಕಿಂತಲೂ ಹೆಚ್ಚು ಆಸ್ತಿ ಸಂಪಾದಿಸಿದ್ದಾರೆ ಎಂದು ದೂರಿನಲ್ಲಿ ಆರೋಪಿಸಲಾಗಿತ್ತು.

ಇದೇ ಆರೋಪವನ್ನು ದಿನೇಶ್ ಅವರು ಲೋಕಾಯುಕ್ತ ಕಚೇರೆಗೂ ಸಲ್ಲಿಸಿದ್ದರು. ಲೋಕಾಯುಕ್ತರು ತನಿಖೆ ನಡೆಸಿ ವರದಿ ಸಲ್ಲಿಸಿದ್ದಾರೆ. ಈ ತನಿಖೆಯಲ್ಲಿ ಆರೋಪಗಳು ಸತ್ಯವೆಂದು ತಿಳಿದುಬಂದಿದೆ ಎನ್ನಲಾಗಿದೆ.

ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಈ ದೂರಿನ ಮೇಲೆ ಗಂಭೀರ ಕ್ರಮ ಕೈಗೊಂಡಿತು. ತನಿಖೆಗೆ ಆದೇಶ ನೀಡಿ, ಲೋಕಾಯುಕ್ತ ಪೊಲೀಸ್ ಅಧಿಕಾರಿಗಳಿಗೆ (ಎಸ್‌ಪಿ) ಸೂಚನೆ ನೀಡಿತ್ತು. ನವೆಂಬರ್ 17ರೊಳಗೆ ತನಿಖಾ ವರದಿ ಸಲ್ಲಿಸಲು ನ್ಯಾಯಾಲಯ ತಿಳಿಸಿತು. ಈ ಆದೇಶದಂತೆ ಲೋಕಾಯುಕ್ತ ಕಚೇರಿಯು ಎಫ್‌ಐಆರ್ ದಾಖಲಿಸಿ ತನಿಖೆ ಆರಂಭಿಸಿದೆ. ಸೆಪ್ಟೆಂಬರ್ 16ರಂದು ನ್ಯಾಯಾಲಯವು ಫೈನಲ್ ಆದೇಶ ನೀಡಿ, ಎಫ್‌ಐಆರ್ ದಾಖಲಿಸಿ ತನಿಖೆ ನಡೆಸಲು ಸೂಚಿಸಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ