8 ವರ್ಷದ ಬಾಲಕಿಯ ಮೇಲೆ ನಡೆದ ಕ್ರೂರ ಅತ್ಯಾಚಾರ ಮತ್ತು ಕೊಲೆಗೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಶುಕ್ರವಾರ 28 ವರ್ಷದ ವ್ಯಕ್ತಿಗೆ ಮರಣದಂಡನೆ ಶಿಕ್ಷೆ ವಿಧಿಸಿದೆ.
ಇದು “ಅನಾಗರಿಕ” ಮತ್ತು “ಸಮಾಜದ ಸಾಮೂಹಿಕ ಆತ್ಮಸಾಕ್ಷಿಯನ್ನು ಆಘಾತಗೊಳಿಸಿರುವ ಅಪರಾಧ” ಎಂದು ನ್ಯಾಯಾಲಯ ಹೇಳಿದೆ. ರಾಯಬಾಗ ತಾಲ್ಲೂಕಿನ ಪರಮಾನಂದವಾಡಿಯ ನಿವಾಸಿ ಭರತೇಶ್ ರಾವಸಾಬ್ ಮಿರ್ಜಿ ಎಂಬಾತನನ್ನು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೋ) ಕಾಯ್ದೆಯಡಿಯಲ್ಲಿ ಅತ್ಯಾಚಾರ, ಕೊಲೆ ಮತ್ತು ಸಾಕ್ಷ್ಯ ನಾಶ ಸೇರಿದಂತೆ ಎಲ್ಲಾ ಆರೋಪಗಳ ಮೇಲೆ ತಪ್ಪಿತಸ್ಥನೆಂದು ಘೋಷಿಸಲಾಗಿದೆ.
ರಾಯಬಾಗ ತಾಲೂಕಿನ ಪರಮಾನಂದವಾಡಿ ಗ್ರಾಮದ ರಾವಸಾಹೇಬ ಮಿರ್ಜಿಗೆ ಗಲ್ಲು ಶಿಕ್ಷೆ ಹಾಗೂ 10 ಲಕ್ಷ ರೂ. ದಂಡ ವಿಧಿಸಿ ನ್ಯಾಯಾಲಯ ಆದೇಶ ಹೊರಡಿಸಿದೆ.
ಆರೋಪಿ 2019 ಸೆಪ್ಟೆಂಬರ್ 10 ರಂದು ಬೆಳಗಾವಿ ಜಿಲ್ಲೆಯ ಕುಡಚಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಗೆ ಚಾಕಲೇಟ್ ಆಮಿಷ ತೋರಿಸಿ ಅತ್ಯಾಚಾರ ಮಾಡಿ ಕತ್ತು ಹಿಸುಕಿ ಕೊಲೆಗೈದು ಬಾವಿಗೆ ಎಸೆದಿದ್ದ.



