29Mudigere2A_copy_997x715

 

 

ಮೂಡಿಗೆರೆ ಪಟ್ಟಣದ ಅಂಚೆ ಕಚೇರಿ ಬಳಿ ಶೌಚಾಲಯ ನಿರ್ಮಿಸಬಾರದೆಂದು ಒತ್ತಾಯಿಸಿ ಪಟ್ಟಣದ ನೂರಾರು ನಿವಾಸಿಗಳು ಸೋಮವಾರ ಪ.ಪಂ. ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮುಖ್ಯಾಧಿಕಾರಿ ಖಾಜಾ ಹುಸೇನ್ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಹಿರಿಯ ಮುಖಂಡ ಎಂ.ಆರ್.ಜಗದೀಶ್ ಮಾತನಾಡಿ, ಪಟ್ಟಣ ಪಂಚಾಯಿತಿಯಲ್ಲಿ ಕೀಳು ಮಟ್ಟದ ಆಡಳಿತ ವ್ಯವಸ್ಥೆ ನಡೆಯುತ್ತಿದೆ. ಸಾರ್ವಜನಿಕರ ಉಪಯೋಗಕ್ಕೆ ಬಾರದ ಎಲ್ಲಾ ಕೆಲಸಗಳು ಅಚ್ಚುಕಟ್ಟಾಗಿ ಮಾಡುತ್ತಿದ್ದಾರೆ. ಇದಕ್ಕೆ ನಾವು ಅವಕಾಶ ಕೊಡುವುದಿಲ್ಲ. ಪಟ್ಟಣದಲ್ಲಿ ಹಿಂದೆ 3 ಶೌಚಾಲಯ ನಿರ್ಮಿಸಿ 2 ಶೌಚಾಲಯ ನಿರ್ವಹಣೆ ಇಲ್ಲದೇ ಹೊಡದು ನೆಲಸಮ ಮಾಡಿದ್ದಾರೆ. ಈಗ ಉಳಿದುಕೊಂಡಿರುವ ತಾಲೂಕು ಕಚೇರಿ ಬಳಿಯ ಶೌಚಾಲಯ ಕೂಡ ನಿರ್ವಹಣೆ ಇಲ್ಲದೇ ಗೊಬ್ಬು ನಾರುತ್ತಿದೆ. ಹೊಸ ಶೌಚಾಲಯ ನಿರ್ಮಿಸುವ ಮುನ್ನ ಅದನ್ನು ಸಮರ್ಪಕವಾಗಿ ನಿರ್ವಹಣೆ ಮಾಡುವುದಾದರೆ ಮಾತ್ರ ಶೌಚಾಲಯ ನಿರ್ಮಿಸಿ, ಸರಕಾರದ ಹಣ ದುರುಪಯೋಗವಾಗುವಂತೆ ಕಾಟಾಚಾರಕ್ಕೆ ಶೌಚಾಲಯ ನಿರ್ಮಿಸುವುದಾದರೆ ಅಂತಹ ಶೌಚಾಲಯ ಅಗತ್ಯವಿಲ್ಲ ಎಂದು ಹೇಳಿದರು.


ಪಟ್ಟಣದ ನಿವಾಸಿ ಬಿ.ಎನ್. ಮನಮೋಹನ್ ಮಾತನಾಡಿ, ಪಟ್ಟಣದ ತತ್ಕೋಳ ರಸ್ತೆ ಸೇರಿದಂತೆ ಅನೇಕ ರಸ್ತೆಯ ಚರಂಡಿಗಳು ಬಾಯಿ ತೆರೆದುಕೊಂಡು ವಾಹನ ಸಂಚಾರಕ್ಕೆ ಅಡಚಣೆಯಾಗುತ್ತಿದೆ. ಎಲ್ಲಾ ರಸ್ತೆಗಳು ಗುಂಡಿ ಬಿದ್ದಿವೆ. ಎಲ್ಲಿ ನೋಡಿದರೂ ಕಸದ ರಾಶಿ ರಾರಾಜಿಸುತ್ತಿದೆ. ಇಂತಹ ಅನೇಕ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳುವುದನ್ನು ಬಿಟ್ಟು, ನೂರಾರು ವರ್ಷದಿಂದ ಅಂಚೇ ಕಚೇರಿಗೆ ತೆರಳುವ ಕಾಲುದಾರಿಯನ್ನು ಬಂದ್ ಮಾಡಿ ಶೌಚಾಲಯ ಕಟ್ಟಲು ಮುಂದಾಗಿರುವುದು ಅವೈಜ್ಞಾನಿಕ. ಶೌಚಾಲಯ ನಿರ್ಮಿಸುವ ಬಗ್ಗೆ ನಮ್ಮ ತಕರಾರು ಇಲ್ಲ. ಆದರೆ. ಸಾರ್ವಜನಿಕರಿಗೆ ತೊಂದರೆಯಾಗದ ಪ್ರದೇಶದಲ್ಲಿ ಹೊಸ ಶೌಚಾಲಯ ನಿರ್ಮಿಸಬೇಕೆಂದು ಒತ್ತಾಯಿಸಿದರು.

ಪ.ಪಂ. ಸದಸ್ಯರಾದ ಅನುಕುಮಾರ್, ಸುಧೀರ್, ಮುಖಂಡರಾದ ಪ್ರಮೋದ್ ದುಂಡುಗ, ಜಗದೀಶ್, ಜನಾರ್ಧನ ಶೆಟ್ಟಿ, ಅರುಣ್, ಚಂದ್ರು, ಸುದೇವ್, ಧಯಾಕರ್, ರತನ್ ಊರುಬಗೆ, ಸುಂದ್ರೇಶ್, ಚಂದ್ರೇಶ್, ನಾರಾಯಣ, ನೂತನ್ ಮತ್ತಿತರರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ