ಮೂಡಿಗೆರೆ ಕ್ಷೇತ್ರಾದ್ಯಂತ ಹಲವಾರು ಭಾಗಗಳಲ್ಲಿ ರಸ್ತೆಗಳು ತೀವ್ರ ಹಾನಿಗೊಳಗಾಗಿವೆ. ರಸ್ತೆಯಲ್ಲಿ ದೊಡ್ಡ ದೊಡ್ಡ ಹೊಂಡಗಳು ಆಗಿವೆ. ಕ್ಷೇತ್ರದ ಜನಸಾಮಾನ್ಯರು ಇತ್ತೀಚಿನ ದಿನಗಳಲ್ಲಿ ಅಪಘಾತಕ್ಕೆ ಒಳಗಾಗುತ್ತಿದ್ದಾರೆ ಹಾಗೂ ಜನಸಾಮಾನ್ಯರು ದಿನನಿತ್ಯದ ಚಟುವಟಿಕೆಗಳಿಗೆ ಹಾಗೂ ಆಸ್ಪತ್ರೆಗಳಿಗೆ ಮತ್ತು ವಿದ್ಯಾರ್ಥಿಗಳು ಶಾಲಾ ಕಾಲೇಜುಗಳಿಗೆ ತೆರಳಲು ತುಂಬಾ ತೊಂದರೆಯನ್ನು ಅನುಭವಿಸುತ್ತಿದ್ದಾರೆ ಎಂದು ಬಿಜೆಪಿ ಎಸ್ಸಿ ಮೋರ್ಚಾದ ತಾಲೂಕು ಪ್ರಧಾನ ಕಾರ್ಯದರ್ಶಿ ರತನ್ ದೇವರುಂದ ಆರೋಪಿಸಿದ್ದಾರೆ.
ಇಷ್ಟಾದರೂ ಎಚ್ಚೆತ್ತುಕೊಳ್ಳದ ಸರ್ಕಾರ ಹಾಗೂ ಕ್ಷೇತ್ರದ ಶಾಸಕರು, ಅಧಿಕಾರಿಗಳು ಕ್ರಮ ವಹಿಸದಿರುವುದು ಖಂಡನಿಯ. ಶಾಸಕರೆ ದಯಮಾಡಿ ನಿಮ್ಮ ಕ್ಷೇತ್ರದ ಕಡೆ ಗಮನ ನೀಡಿ ಮೊದಲು ರಸ್ತೆಗಳು ಹೊಂಡ ಗುಂಡುಗಳಾಗಿರುವುದನ್ನು ಮುಚ್ಚಿ ಆದಷ್ಟು ಬೇಗ ಇದರ ಬಗ್ಗೆ ಸೂಕ್ತ ಕ್ರಮ ವಹಿಸಬೇಕು ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ರಸ್ತೆ ತಡೆ ಹಾಗೂ ತಾಲೂಕು ಕಚೇರಿಗಳ ಮುಂದೆ ಧರಣಿಯನ್ನು ಮಾಡಲಾಗುವುದು.

ರತನ್ ದೇವರುಂದ
ಬಿಜೆಪಿ ಎಸ್ಸಿ ಮೋರ್ಚಾ ಪ್ರಧಾನ ಕಾರ್ಯದರ್ಶಿ
ಮುಡಿಗೆರೆ ತಾಲೂಕು



