3Mudigere1A

 

 

ಮೂಡಿಗೆರೆ  ತಾಲೂಕಿನಲ್ಲಿ ಬಾಕಿ ಉಳಿಸಿಕೊಂಡಿರುವ ಸಾವಿರಾರು ಪೋಡಿ ಪ್ರಕರಣವನ್ನು ಕೂಡಲೇ ಇತ್ಯರ್ಥಪಡಿಸಬೇಕೆಂದು ಆಗ್ರಹಿಸಿ ಶುಕ್ರವಾರ ರೈತ ಸಂಘದ ಮುಖಂಡರು ಪಟ್ಟಣದ ಪ್ರವಾಸಿ ಮಂದಿರದಿಂದ ನೇಗಿಲು ನೊಗ ಹೊತ್ತು, ಟಮಟೆ ಬಾರಿಸುವ ಮೂಲಕ ತಾಲೂಕು ಕಚೇರಿಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ತಹಸೀಲ್ದಾರ್ ಎಸ್.ಅಶ್ವಿನಿ ಅವರಿಗೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಎಂ.ಮಂಜುನಾಥಗೌಡ ಮಾತನಾಡಿ, ಡಿಸೆಂಬರ್ ಅಂತ್ಯದೊಳಗೆ ರಾಜ್ಯದ ಎಲ್ಲಾ ಗ್ರಾಮಗಳನ್ನು  ಪೋಡಿ ಮುಕ್ತ ಗ್ರಾಮಗಳನ್ನಾಗಿ ಮಾಡುವ ಕಂದಾಯ ಸಚಿವರು ಆಸಕ್ತಿ ತೋರಿದ್ದು, ಇದಕ್ಕೆ ಪೂರಕವಾದ ಕೆಲಸ ಅಧಿಕಾರಿಗಳು ಮಾಡುತ್ತಿಲ್ಲ. ಪೋಡಿ ಪ್ರಕರಣ ಮುಕ್ತಗೊಳಿಸುವ ಬಗ್ಗೆ 2018ರಲ್ಲಿ ಸರಕಾರ 22 ಪುಟದ ಸುತ್ತೋಲೆ ಹೊರಡಿಸಿ ವಿವರಿಸಿದೆ. ಈ ಸುತೋಲೆ ಬಗ್ಗೆ ಸರ್ವೇ ಅಧಿಕಾರಿಗಳಿಗೆ ಮಾಹಿತಿಯೇ ಇಲ್ಲ. ಇದರಿಂದ ಎಡಿಎಲ್‍ಆರ್ ಇಲಾಖೆಯ ತಕರಾರು ಲಾಗಿನ್‍ನಲ್ಲಿ ರಾಜ್ಯದಲ್ಲಿ 1 ಲಕ್ಷಕ್ಕೂ ಅಧಿಕ ರೈತರ ಜಮೀನು, ಪರಿಹಾರ ಕಂಡುಕೊಳ್ಳದೇ ಬಾಕಿ ಉಳಿದಿದೆ. ಇನ್ನಾದರೂ ಸರಕಾರದ ಸುತ್ತೋಲೆಯಂತೆ ಕಾರ್ಯ ನಿರ್ವಹಿಸಿ, ಪೋಡಿ ಮುಕ್ತ ತಾಲೂಕು ಮಾಡಲು ಕ್ರಮ ವಹಿಸಬೇಕೆಂದು ಆಗ್ರಹಿಸಿದರು.

ಜಿಲ್ಲಾಧ್ಯಕ್ಷ ಉದ್ದೇಗೌಡ ಮಾತನಾಡಿ, ರಾಜ್ಯದಲ್ಲಿಯೇ ಮೂಡಿಗೆರೆ ತಾಲೂಕಿನಲ್ಲಿ ಹೆಚ್ಚು ಪೋಡು ಪ್ರಕರಣ ಬಾಕಿ ಉಳಿದಿದೆ. ಫಾರಂ ನಂ50 ಮತ್ತು 53 ಯಲ್ಲಿ ಅರ್ಜಿ ಸಲ್ಲಿಸಿದ ರೈತರ ಜಮೀನಿನ ಪೋಡು ಪ್ರಕರಣ ಕೂಡಲೇ ಇತ್ಯರ್ಥಪಡಿಸಬೇಕು. ಆದಿವಾಸಿ ರೈತರನ್ನು ಒಕ್ಕಲೆಬ್ಬಿಸಬಾರದು. ಪೋಡಿ ಪ್ರಕರಣದ ಬಗ್ಗೆ ಎಡಿಎಲ್‍ಆರ್ ಅಧಿಕಾರಿ ಸ್ಥಳಕ್ಕೆ ಆಗಮಿಸಿ ರೈತರ ಪ್ರಶ್ನೆಗಳಿಗೆ ಉತ್ತರ ನೀಡಬೇಕೆಂದು ಒತ್ತಾಯಿಸಿದರು.

ಬಿಜೆಪಿ ಮುಖಂಡ ದೀಪಕ್ ದೊಡ್ಡಯ್ಯ ಮಾತನಾಡಿ, ಎಲ್ಲಾ ಬಗೆಯ ಅನುಮಾನ, ದೋಷ ನಿವಾರಿಸಲು ಸರಕಾರದ ಸುತ್ತೋಲೆಯಲ್ಲಿಯೇ ಉತ್ತರವಿದೆ. ಆದರೆ ಅಧಿಕಾರಿಗಳು ಅದನ್ನು ಗಮನಿಸದೇ ಮನಸ್ಸಿಗೆ ಬಂದಂತೆ ಕೆಲಸ ಮಾಡುವುದು ನಿಯಮ ಬಾಹೀರ. ಕೆಲಸ ಮಾಡಲು ಬಾರದಿದ್ದರೆ ವಿಆರ್‍ಎಸ್ ಪಡೆದು ಮನೆಗೆ ಹೋಗಿ. ಅದನ್ನು ಬಿಟ್ಟು ರೈತರಿಗೆ ತೊಂದರೆ ಕೊಡುವುದು ಸಹಿಸುವುದಿಲ್ಲ. ಕೆಲಸಕ್ಕೆ ಬಾರದ ಅಧಿಕಾರಿಗಳ ವಿರುದ್ಧ ಸರಕಾರ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿದರು.

ತಹಸೀಲ್ದಾರ್ ಎಸ್.ಅಶ್ವಿನಿ ಮನವಿ ಸ್ವೀಕರಿಸಿ ಮಾತನಾಡಿ, ಈ ಸಮಸ್ಯೆ ಶೀಘ್ರದಲ್ಲೇ ಪರಿಹರಿಸಲಾಗುವುದು ಎಂದು ಭರವಸೆ ನೀಡಿದರು.

ರೈತ ಸಂಘದ ತಾಲೂಕು ಅಧ್ಯಕ್ಷ ಪುಟ್ಟಸ್ವಾಮಿಗೌಡ, ಮುಖಂಡರಾದ ವನಶ್ರೀಗೌಡ, ರಘು ಬಿಳ್ಳೂರು, ಚಂದ್ರೇಗೌಡ ಕೆಲ್ಲೂರು, ಚಂದ್ರೇಗೌಡ ಕುಂದೂರು, ಎನ್.ಎಲ್.ಸುಂದ್ರೇಶ್, ರಮೇಶ್ ದಾರದಹಳ್ಳಿ, ಮಂಜುನಾಥ್ ಹೊನ್ನಕೊಯ್ಲು, ಮೀನಾಕ್ಷಮ್ಮ, ಶಕುಂತಲಾ, ನಾಗೇಶ್ ಹೊಸಳ್ಳಿ, ಲಕ್ಷ್ಮಣ್‍ಗೌಡ ಬಡವನದಿಣ್ಣೆ, ರವಿ ಬಿಳ್ಳೂರು, ಐ.ಬಿ.ಗೋಪಾಲಗೌಡ, ರಘು ಬಿಳ್ಳೂರು, ಜಯರಾಂಗೌಡ ಅಬಚೂರ್ ಮತ್ತಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ