6Mudigere1A (1)

 

 

ಚಿಕ್ಕಮಗಳೂರಿನ ಮೂಗ್ತಿಹಳ್ಳಿಯಿಂದ  ಮೂಡಿಗೆರೆ ಹ್ಯಾಂಡ್‍ಪೋಸ್ಟ್ ವರೆಗೆ ಉದ್ದೇಶಿತ ಹೆದ್ದಾರಿ ಅಭಿವೃದ್ದಿ ಕಾಮಗಾರಿಯನ್ನು ತಕ್ಷಣ ಪ್ರಾರಂಭಿಸಬೇಕು . ಇಲ್ಲವಾದರೆ ರಸ್ತೆ ತಡೆದು ಪ್ರತಿಭಟನೆ ನಡೆಸುವುದಾಗಿ ರೈತ ಸಂಘದ ಹಸಿರು ಸೇನೆ ಅಧ್ಯಕ್ಷ ಎಸ್.ಪಿ.ರಾಜು ಎಚ್ಚರಿಕೆ ನೀಡಿದರು.

ಅವರು ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಟ್ರೀಷರ ಕಾಲದಿಂದಲೂ ಮೂಡಿಗೆರೆ ಪಟ್ಟಣದ ಕೆ.ಎಂ.ರಸ್ತೆ ಅಗಲೀಕರಣಗೊಳ್ಳದೇ ಹಾಗೆಯೇ ಉಳಿದಿದೆ. ಈಗ ವಾಹನಗಳ ಸಂಖ್ಯೆ ಕೂಡ ಅಧಿಕಗೊಂಡಿದೆ. ಪಾರ್ಕಿಂಗ್ ವ್ಯವಸ್ಥೆ ಇಲ್ಲದೇ ಗ್ರಾಮೀಣ ಪ್ರದೇಶದಿಂದ ಪಟ್ಟಣಕ್ಕೆ ಬರುವ ರೈತರು ತಮ್ಮ ವಾಹನ ನಿಲ್ಲಿಸಲು ಸಾಧ್ಯವಾಗುತ್ತಿಲ್ಲ. ಅಭಿವೃದ್ಧಿ ವಿಚಾರದಲ್ಲಿ ಮೂಡಿಗೆರೆ ಪಟ್ಟಣವನ್ನು ಸಂಪೂರ್ಣ ಕಡೆಗಣಿಸಿದ್ದು, ಮೂಡಿಗೆರೆ ಜನರನ್ನು ಜನಪ್ರತಿನಿಧಿಗಳು ಕಾಡು ಪ್ರಾಣಿಗಳಂತೆ ಕಾಣುತ್ತಿದ್ದಾರೆ.

ಜಿಲ್ಲಾ ಸಂಚಾಲಕ ರಮೇಶ್ ದಾರದಹಳ್ಳಿ ಮಾತನಾಡಿ, ಜಿಲ್ಲೆಯಲ್ಲಿ ಎಲ್ಲಾ ತಾಲೂಕು ಕೇಂದ್ರದಲ್ಲಿ ರಸ್ತೆ ಅಗಲೀಕರಣವಾಗಿದೆ. ಆದರೆ ಮೂಡಿಗೆರೆ ತಾಲೂಕು ಮಾತ್ರ ಕಡೆಗಣಿಸಲಾಗಿದೆ. ಕಳೆದ 2 ವರ್ಷದಿಂದ ರಸ್ತೆ ಅಗಲೀಕರಣ ಮಾಡುತ್ತೇವೆಂದು ಜನರ ದಿಕ್ಕು ತಪ್ಪಿಸುವುದನ್ನು ಬಿಡಬೇಕು. ಇದೀಗ ಜಾಗದ ಮಾಲೀಕರಿಗೆ ನೋಟೀಸು ಕೊಟ್ಟಿದ್ದು ಬಿಟ್ಟರೆ ಇನ್ನೂ ಭೂಸ್ವಾದೀನ ಹಾಗೂ ಪರಿಹಾರ ಪ್ರಕ್ರಿಯೆ ಬಾಕಿ ಉಳಿಸಲಾಗಿದೆ. ಈ ರೀತಿ ಕಾಲಹರಣ ಮಾಡುವುದನ್ನು ಬಿಟ್ಟು ರಸ್ತೆ ಅಗಲೀಕರಣ ಕಾರ್ಯ ನಡೆಸಿ ತಾಲೂಕಿನ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ಆಗ್ರಹಿಸಿದರು.
ಗೋಷ್ಠಿಯಲ್ಲಿ ರೈತ ಮುಖಂಡ ಎಸ್.ಎ.ವಾಸುದೇವ ಉಪಸ್ಥಿತರಿದ್ದರು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ