ಮೂಡಿಗೆರೆ ತಾಲ್ಲೂಕಿನ ಬಾಳೂರು ಹೋಬಳಿಯ ಜಾವಳಿ ಗ್ರಾಮದಲ್ಲಿ ಭಾನುವಾರ ಬೆಳಗ್ಗೆ ಕಾಡುಕೋಣದ ದಾಳಿ ನಡೆದಿದ್ದು, 60 ವರ್ಷದ ರೈತ ರಾಜು ಅವರಿಗೆ ತೀವ್ರ ಗಾಯವಾಗಿದೆ.
ರಾಜು ಅವರು ತಮ್ಮ ಮನೆಯ ಹತ್ತಿರ ಕೆಲಸ ಮಾಡುತ್ತಿದ್ದ ವೇಳೆ ಕಾಡುಕೋಣವು ಹಠಾತ್ ದಾಳಿ ನಡೆಸಿದ್ದು, ಅವರ ಬಲ ತೊಡೆಯ ಭಾಗದಲ್ಲಿ ಗಂಭೀರ ಗಾಯ ಸಂಭವಿಸಿದೆ.
ಸ್ಥಳೀಯರು ತಕ್ಷಣ ಅವರನ್ನು ಬಣಕಲ್ ಕೃಷ್ಣ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ನಂತರ ಚಿಕ್ಕಮಗಳೂರು ಆಸ್ಪತ್ರೆಗೆ ರವಾನಿಸಲಾಯಿತು
ಗಾಯ ಗಂಭೀರವಾದರೂ ರಾಜು ಅವರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ಈ ಘಟನೆ ಗ್ರಾಮಸ್ಥರಲ್ಲಿ ಭೀತಿ ಮತ್ತು ಆತಂಕದ ವಾತಾವರಣ ಉಂಟಾಗಿದೆ. ಸ್ಥಳೀಯರು ಮತ್ತು ಅರಣ್ಯ ಇಲಾಖೆ ಕಾಡು ಪ್ರಾಣಿಗಳ ದಾಳಿಯ ಬಗ್ಗೆ ತುರ್ತು ಕ್ರಮ ಕೈಗೊಳ್ಳಬೇಕೆಂದು ಮನವಿ ಮಾಡಿದ್ದಾರೆ.




