markonahalli

 

 

ತುಮಕೂರು ಜಿಲ್ಲೆ ಕುಣಿಗಲ್ ತಾಲೂಕಿನ ಯಡಿಯೂರು ಬಳಿ ಮಾರ್ಕೋನಹಳ್ಳಿ ಡ್ಯಾಂ ನೀರಿನಲ್ಲಿ ಈಜಲು ಹೋಗಿದ್ದ ಒಂದೇ ಕುಟುಂಬದ ಆರು ಮಂದಿ ನೀರುಪಾಲಾಗಿದ್ದಾರೆ.

ಕೊಚ್ಚಿ ಹೋಗುತ್ತಿದ್ದ ಏಳು ಮಂದಿ ಪೈಕಿ ಓರ್ವನನ್ನು ರಕ್ಷಿಸಲಾಗಿದೆ. ಇನ್ನುಳಿದಂತೆ ಇಬ್ಬರ ಮೃತದೇಹ ಪತ್ತೆಯಾಗಿದ್ದು ನಾಲ್ವರಿಗಾಗಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

ಮೃತರನ್ನು ತುಮಕೂರು ನಗರದ ಬಿ.ಜಿ.ಪಾಳ್ಯದ ನಿವಾಸಿಗಳಾದ ಸಾಜಿಯಾ, ಅರ್ಬಿನ್ ಎಂದು ಗುರುತಿಸಲಾಗಿದೆ. ಇನ್ನು ಶಬಾನ, ತಬಾಸುಮ್, ಮಹಿಬ್ ಮತ್ತು ಮಿಫ್ರಾ  ಕಣ್ಮರೆಯಾದವರು. ನವಾಜ್‌ ಎಂಬಾತ ಪ್ರಾಣಾಪಾಯದಿಂದ ಪಾರಾಗಿದ್ದು, ಸದ್ಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ದುರಂತದ ಮಾಹಿತಿ ತಿಳಿಯುತ್ತಿದ್ದಂತೆ ಘಟನಾ ಸ್ಥಳಕ್ಕೆ ಹುಲಿಯೂರುದುರ್ಗ ಪೊಲೀಸರು ಹಾಗೂ ಅಮೃತೂರು ಪೊಲೀಸರು ದೌಡಾಯಿಸಿದ್ದು ಪರಿಶೀಲನೆ ನಡೆಸಿದ್ದಾರೆ.

ಮೃತರೆಲ್ಲರೂ ಕುಣಿಗಲ್‌ ತಾಲ್ಲೂಕಿನ ಮಾಗಡಿಪಾಳ್ಯ ಗ್ರಾಮದ ಸಂಬಂಧಿಕರ ಮನೆಗೆ ಆಗಮಿಸಿದ್ದು, ಊಟ ಮುಗಿಸಿಕೊಂಡು ಜಲಾಶಯಕ್ಕೆ ಹೋಗಿದ್ದರು. ಹಿನ್ನೀರಿನ ಕಾಲುವೆಗೆ ಇಳಿಯುತ್ತಿದ್ದಂತೆಯೇ ರಭಸವಾಗಿ ಹರಿಯುತ್ತಿದ್ದ ನೀರಿನಲ್ಲಿ ಕೊಚ್ಚಿಕೊಂಡು ಹೋಗಿದ್ದಾರೆ.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ