brahmasri 2

 

 

ಸಮಾಜದಲ್ಲಿ ಬಹಳ ಕಷ್ಟದಲ್ಲಿದ್ದ ಸಮುದಾಯವನ್ನು ಜಾಗೃತಿಗೊಳಿಸಿ ಜನರಲ್ಲಿ ಸ್ವಾಭಿಮಾನವನ್ನು, ಆತ್ಮಸ್ಥೈರ್ಯವನ್ನು ಬಿತ್ತಿ ಜನರನ್ನು ಮೇಲೆತ್ತುವ ಕೆಲಸವನ್ಮಾನು ಬ್ರಹ್ಮಶ್ರೀ ನಾರಾಯಣ ಗುರುಗಳು ಮಾಡಿದರು ಎಂದು ಮೂಡಿಗೆರೆ ಶಾಸಕಿ ನಯನಾ ಮೋಟಮ್ಮ ತಿಳಿಸಿದರು.

ಅವರು ಮಂಗಳವಾರ ಮೂಡಿಗೆರೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದಿಂದ ಪಟ್ಟಣದ ಅಡ್ಯಂತಾಯ ರಂಗಮಂದಿರದಲ್ಲಿ ಹಮ್ಮಿಕೊಂಡಿದ್ದ ಬ್ರಹ್ಮಶ್ರೀ ನಾರಾಯಣ ಗುರುಗಳ 171ನೇ ಜನ್ಮದಿನಾಚರಣೆ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಮಹಿಳೆಯರು ಸಮಾಜದಲ್ಲಿ ಸಕ್ರಿಯವಾಗಿ ಗುರುತಿಸಿಕೊಳ್ಳುವ ಪ್ರಯತ್ನ ನಡೆಸಬೇಕು. ಮಕ್ಕಳಿಗೆ ಉನ್ನತವಾದ ವಿದ್ಯಾಭ್ಯಾಸವನ್ನು ನೀಡಬೇಕು. ಸಮುದಾಯದ ಮಕ್ಕಳನ್ನು ಉನ್ನತ ಸ್ಥಾನಕ್ಕೆ ಕೊಂಡೊಯ್ಯುವ ಶಿಕ್ಷಣ ನೀಡಬೇಕು ಎಂದು ಸಲಹೆ ನೀಡಿದರು. ತಾವು ಮುಲ್ಕಿ ಬ್ರಹ್ಮಶ್ರೀ ನಾರಾಯಣ ಗುರುಗಳ ಶಾಲೆಯಲ್ಲಿ ಪ್ರಾಥಮಿಕ ಶಿಕ್ಷಣ ಪಡೆದಿದ್ದ ಸನ್ನಿವೇಶವನ್ನು ನೆನಪಿಸಿಕೊಂಡರು.

ವೇದಿಕೆಯಲ್ಲಿ ರಾಷ್ಟ್ರೀಯ ಬಿಲ್ಲವ ಮಹಾಮಂಡಳಿ   ಅಧ್ಯಕ್ಷರಾದ  ರಾಜಶೇಖರ್ ಕೊಟ್ಯಾನ್ ಅವರು ಮಾತನಾಡಿ ನಾರಾಯಣ ಗುರು ಸಮುದಾಯ ಇಂದು ಸಮಾಜದ ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿ ಗುರುತಿಸಿಕೊಳ್ಳುತ್ತಿದೆ. ಸಮಾಜದಲ್ಲಿ ಸಾಕಷ್ಟು ಜಾಗೃತಿ ಮೂಡಿದೆ. ಇಂದಿನ ಯುವಕರು ಉತ್ತಮ ವ್ಯಕ್ತಿತ್ವ ಮತ್ತು ನಾಯಕತ್ವ ಗುಣಗಳನ್ನು ಬೆಳೆಸಿಕೊಂಡು ಸಮಾಜದ ಪ್ರಗತಿಯಲ್ಲಿ ಭಾಗಿಯಾಗಬೇಕು ಎಂದು ಸಲಹೆ ನೀಡಿದರು.

ಮೂಡಿಗೆರೆ ಬ್ರಹ್ಮಶ್ರೀ ನಾರಾಯಣ ಗುರು ಸಮಾಜ ಸೇವಾ ಸಂಘದ ಅಧ್ಯಕ್ಷ ಮನೋಜ್ ಬಾಳೂರು ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಸಂಘದ ಜಿಲ್ಲಾ ಅಧ್ಯಕ್ಷ ಹಾಗೂ ಜಿ.ಪಂ. ಮಾಜಿ ಅಧ್ಯಕ್ಷ ಸತೀಶ್, ಮುಖಂಡರಾದ ಯೋಗೇಶ್ ಪೂಜಾರಿ, ಕೇಶವ ಸುವರ್ಣ, ಸುರೇಶ್ ಬಣಕಲ್, ಸುಂದರ್ ಜಾರ್ಗಲ್ , ಸಾಗರ, ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

ಕಾರ್ಯಕ್ರಮದಲ್ಲಿ ಸಮುದಾಯದ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು, ಸಾಧಕರನ್ನು ಗೌರವಿಸಲಾಯಿತು.

ಇದಕ್ಕೂ ಮುನ್ನ ಪಟ್ಟಣದಲ್ಲಿ ನಾರಾಯಗುರುಗಳ ಸ್ತಬ್ದ ಚಿತ್ರ  ಕುಣಿತ ಭಜನೆ ಚಂಡೆ ಚಿಲಿಪಿಲಿ ಗೊಂಬೆ  ಸೇರಿದಂತೆ ವಿವಿಧ  ಕಲಾ ತಂಡಗಳೊಂದಿಗೆ  ಮೆರವಣಿಗೆ ನಡೆಯಿತು.

Leave a Reply

Your email address will not be published. Required fields are marked *

ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ
ಕ್ಷಮಿಸಿ ಹಕ್ಕು ಸೌಮ್ಯ ಕಾಯ್ದಿರಿಸಲಾಗಿದೆ